ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯಿಂದ ಮೊಹಮ್ಮದ್ ಶಮಿ ಔಟ್: ಯುವ ವೇಗಿಗೆ ಮತ್ತೆ ಅವಕಾಶ

Umran Malik to replace Mohammed Shami in India’s ODI squad for Bangladesh series

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಏಕದಿನ ಸರಣಿಯ ಸೆಣೆಸಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸರಣಿಯ ಆರಂಭಕ್ಕೂ ಮುನ್ನವೇ ಟಿಮ್ ಇಂಡಿಯಾಗೆ ದೊಡ್ಡ ಆಘಾತವೊಂದು ಉಂಟಾಗಿದೆ. ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಗಾಯದ ಕಾರಣದಿಂದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ ಯುವ ಆಟಗಾರನಿಗೆ ಅವಕಾಶ ದೊರೆತಿದೆ.

ಟೀಮ್ ಇಂಡಿಯಾದ ಅನುಭವಿ ಬೌಲರ್ ಮೊಹಮ್ಮದ್ ಶಮಿ ಕಳೆದ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಆಡಿದ್ದರು. ಬಳಿಕ ನ್ಯೂಜಿಲೆಂಡ್ ವಿರುದ್ದದ ಸರಣಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಬಾಂಗ್ಲಾದೇಶ ವಿರುದ್ಧದ ಸರಣಿಗೆ ಶಮಿ ಆಯ್ಕೆಯಾಗಿದ್ದರು ಕೂಡ ಈಗ ಗಾಯದ ಕಾರಣದಿಂದಾಗಿ ಅವರು ಸರಣಿಯಿಂದ ಹೊರಗುಳಿಯುತ್ತಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.

FIFA World Cup: ಪೋರ್ಚುಗಲ್ ವಿರುದ್ಧ 2-1 ಅಂತರದ ಜಯ ಸಾಧಿಸಿ 16ರ ಘಟ್ಟಕ್ಕೆ ಪ್ರವೇಶಿಸಿದ ದಕ್ಷಿಣ ಕೊರಿಯಾFIFA World Cup: ಪೋರ್ಚುಗಲ್ ವಿರುದ್ಧ 2-1 ಅಂತರದ ಜಯ ಸಾಧಿಸಿ 16ರ ಘಟ್ಟಕ್ಕೆ ಪ್ರವೇಶಿಸಿದ ದಕ್ಷಿಣ ಕೊರಿಯಾ

ಶಮಿ ಬದಲಿಗೆ ಉಮ್ರಾನ್ ಮಲಿಕ್‌ಗೆ ಅವಕಾಶ

ಶಮಿ ಬದಲಿಗೆ ಉಮ್ರಾನ್ ಮಲಿಕ್‌ಗೆ ಅವಕಾಶ

ಟೀಮ್ ಇಂಡಿಯಾದ ಬಾಂಗ್ಲಾದೇಶ ಪ್ರವಾಸದಲ್ಲಿ ಮೊಹಮ್ಮದ್ ಶಮಿ ಬದಲಿಗೆ ಯುವ ವೇಗದ ಬೌಲರ್ ಉಮ್ರಾನ್ ಮಲಿಕ್‌ಗೆ ಅವಕಾಶ ದೊರೆತಿದೆ. ಕಳೆದ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಭಾರತ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಉಮ್ರಾನ್ ಮಲಿಕ್ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್‌ನಲ್ಲಿ ಸ್ಥಾನವನ್ನು ಪಡೆದುಕೊಳ್ಳದಿದ್ದರೂ ಉಮ್ರಾನ್ ಕಿವೀಸ್ ಪ್ರವಾಸದಲ್ಲಿ ಸ್ಥಾನವನ್ನು ಪಡೆದು ಸಿಕ್ಕ ಅವಕಾಶದಲ್ಲಿ ಮಿಂಚಿದ್ದಾರೆ. ಇದೀಗ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಉಮ್ರಾನ್‌ಗೆ ಮತ್ತೊಂದು ಅವಕಾಶ ಸಿಕ್ಕಂತಾಗಿದೆ.

ಭುಜನೋವಿಗೆ ಒಳಗಾಗಿರುವ ಶಮಿ

ಭುಜನೋವಿಗೆ ಒಳಗಾಗಿರುವ ಶಮಿ

ಮೊಹಮ್ಮದ್ ಶಮಿ ಟಿ20 ವಿಶ್ವಕಪ್‌ನಲ್ಲಿ ಜಸ್ಪ್ರೀತ್ ಬೂಮ್ರಾ ಅಲಭ್ಯವಾಗಿದ್ದ ಕಾರಣ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿದಿದ್ದರು. ಬಳಿಕ ಕಿವೀಸ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಅವರು ಭಾರತಕ್ಕೆ ವಾಪಾಸಾಗಿದ್ದರು. ಈ ಸಂದರ್ಭದಲ್ಲಿ ಅಭ್ಯಾಸದಲ್ಲಿ ನಿರತವಾಗಿದ್ದಾಗ ಶಮಿ ಭುಜದ ಗಾಯಕ್ಕೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಸದ್ಯ ಅವರು ಬೆಂಗಳೂರಿನ ಎನ್‌ಸಿಎನಲ್ಲಿ ರಿಹ್ಯಾಬ್‌ನಲ್ಲಿ ಭಾಗಿಯಾಗಿದ್ದಾರೆ.

ಬಾಂಗ್ಲಾದೇಶದಲ್ಲಿ ಅಭ್ಯಾಸ ನಡೆಸುತ್ತಿದೆ ಶರ್ಮಾ ಪಡೆ

ಬಾಂಗ್ಲಾದೇಶದಲ್ಲಿ ಅಭ್ಯಾಸ ನಡೆಸುತ್ತಿದೆ ಶರ್ಮಾ ಪಡೆ

ಟೀಮ್ ಇಂಡಿಯಾ ಡಿಸೆಂಬರ್ 1ರಂದು ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿದ್ದು ಅಭ್ಯಾಸವನ್ನು ಆರಂಭಿಸಿದೆ. ಕೆಲ ಆಟಗಾರರು ನ್ಯೂಜಿಲೆಂಡ್ ಪ್ರವಾಸ ಮುಗಿಸಿ ನೇರವಾಗಿ ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಿದ್ದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೊದಲಾದ ಆಟಗಾರರು ಕಿವೀಸ್ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಹೀಗಾಗಿ ಭಾರತದಿಂದ ಬಾಂಗ್ಲಾದೇಶಕ್ಕೆ ಆಗಮಿಸಿ ಸಿದ್ಧತೆ ನಡೆಸಿದ್ದಾರೆ. ಶುಕ್ರವಾರ ಟೀಮ್ ಇಂಡಿಯಾ ಕೆಲ ಆಟಗಾರರು ಅಭ್ಯಾಸವನ್ನು ನಡೆಸಿದ್ದರೆ ಇನ್ನೂ ಕೆಲವರು ವಿಶ್ರಾಂತಿ ಪಡೆದುಕೊಂಡಿದ್ದರು. ಶನಿವಾರ ಪೂರ್ಣ ಪ್ರಮಾಣದ ಅಭ್ಯಾಸದಲ್ಲಿ ಎಲ್ಲಾ ಆಟಗಾರರು ಭಾಗಿಯಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ

ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್‌ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹ್ಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್ , ಉಮ್ರಾನ್‌ ಮಲಿಕ್‌, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್‌ದೀಪ್ ಸೇನ್

Story first published: Saturday, December 3, 2022, 12:30 [IST]
Other articles published on Dec 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X