Under 19 Women's World Cup: ಭಾರತದ ಅಜೇಯ ಓಟ: ಲಂಕಾಗೆ ನಿರಾಸೆ
ಭಾರತದ ವನಿತೆಯರು ಅಂಡರ್ 19 ವಿಶ್ವಕಪ್‌ನಲ್ಲಿ ತಮ್ಮ ಅಮೋಘ ಪ್ರದರ್ಶನ ಮುಂದುವರೆಸಿದ್ದಾರೆ. ಬುಧವಾರ ನಡೆದ ಲೀಗ್ ಹಂತದ ಪಂದ್ಯದಲ್ಲಿ ಭಾರತ ತಂಡ 60 ರನ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿ, ಟೂರ್ನಿಯಲ್ಲಿ ತನ್ನ ಅಜೇಯ ಜಯದ ಓಟವನ್ನು ಮುಂದುವರೆಸಿದೆ. "ಎ" ಗುಂಪಿನಲ್ಲಿ ಭಾರತದ ಮಹಿಳಾ ತಂಡ ಆಡಿದ ಮೂರು ಪಂದ್ಯಗಳನ್ನು ಗೆದ್ದು ಬೀಗುದೆ.
ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಅಂಡರ್ 19 ಮಹಿಳಾ ವಿಶ್ವಕಪ್ "ಎ" ಗುಂಪಿನ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಲಂಕಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 59 ರನ್ ಸೇರಿಸಿ ಸೋಲು ಕಂಡಿತು. ಈ ಮೂಲಕ ಲಂಕಾ ತಂಡ ಟೂರ್ನಿಯಲ್ಲಿ ಮೊದಲ ಸೋಲು ಕಂಡಿತು. ಆಡಿದ ಮೂರು ಪಂದ್ಯಗಳಲ್ಲಿ 2 ಜಯ ದಾಖಲಿಸಿರುವ ಲಂಕಾ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಕಳಪೆ ಆರಂಭ
ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಭಾರತ ತಂಡದ ಭರವಸೆಯ ಆಟಗಾರ್ತಿ ಜಿ.ಕಮಲಾನಿ, ಸನಿಕಾ ಚಳ್ಕೆ ಸಿಂಗಲ್ ಡಿಜಿಟ್‌ನಲ್ಲಿ ಆಟ ಮುಗಿಸಿದರು. ನಾಯಕಿ ನಿಕಿ ಪ್ರಸಾದ್ 14 ಎಸೆತಗಳಲ್ಲಿ 2 ಬೌಂಡರಿ ಸೇರಿದಂತೆ 11 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ಮಿಥಿಲಾ ವಿನೋದ್ ದೊಡ್ಡ ಇನಿಂಗ್ಸ್ ಕಟ್ಟುವ ಸೂಚನೆ ನೀಡಿದರು.
ಮಿಥಿಲಾ ವಿನೋದ್ ಇವರ ಆಟ 16 ರನ್‌ಗಳಿಗೆ ಮಾತ್ರ ಸೀಮಿತವಾಯಿತು. ಇನ್ನು ಕೆಳ ಕ್ರಮಾಂಕದಲ್ಲಿ ವೊಕೆ ಜೋತಿಶಾ ಅವರು ಸೊಗಸಾದ ಬ್ಯಾಟಿಂಗ್ ನಡೆಸುವ ಸೂಚನೆ ನೀಡಿದರು. ಇವರು ಒಂದು ಬೌಂಡರಿ, 1 ಸಿಕ್ಸರ್ ಸಹಾಯದಿಂದ 14 ರನ್ ಬಾರಿಸಿ ಔಟ್ ಆದರು. ಉಳಿದಂತೆ ಬೇರೆ ಯಾವ ಬ್ಯಾಟರ್ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಭಾರತ ತಂಡದ ಆರಂಭಿಕ ಆಟಗಾರ್ತಿ ಗಂಗಡಿ ತ್ರಿಷಾ 5 ಬೌಂಡರಿ, 1 ಸಿಕ್ಸರ್ ಸೇರಿದಂತೆ 49 ರನ್ ಸಿಡಿಸಿದ್ದಾರೆ.
ಲಂಕಾ ಬ್ಯಾಟರ್‌ಗಳ ವೈಫಲ್ಯ
ಇನ್ನು ಸಾಧಾರಣ ಗುರಿಯನ್ನು ಹಿಂಬಾಲಿಸಿದ ಲಂಕಾ ತಂಡದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಲಂಕಾ ತಂಡದ ರಶ್ಮಿಕಾ ಸೆವ್ವಾಂಡಿ (15) ಇವರನ್ನು ಬಿಟ್ಟರೆ ಉಳಿದ ಯಾವ ಬ್ಯಾಟರ್ ಸಹ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಪರಿಣಾಮ ಲಂಕಾ ಟೂರ್ನಿಯಲ್ಲಿ ಮೊದಲ ಸೋಲು ಕಂಡಿತು.
ಭಾರತ ತಂಡದ ಭರವಸೆಯ ಆಟಗಾರ್ತಿಯರು ಮನಮೋಹಕ ಪ್ರದರ್ಶನ ನೀಡಿದರು. ಶಬ್ನಮ್ ಶಕೀಲ್, ಪರುಣಿಕಾ ಸಿಸೋಡಿಯಾ, ವಿಜೆ ಜೋಶಿತ ಲಂಕಾ ಬ್ಯಾಟರ್‌ಗಳನ್ನು ಕಾಡಿದರು. ಈ ಮೂವರು ಬೌಲರ್‌ಗಳು ಭಾರತದ ಪರ ತಲಾ ಎರಡು ವಿಕೆಟ್ ಕಬಳಿಸಿದರು. ಭಾರತ ಮಹಿಳಾ ತಂಡ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಇದೇ ಭಾನುವಾರ ಕಾದಾಟ ನಡೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications