Under 19 World cup: ಆರನೇ ಬಾರಿ ಪ್ರಶಸ್ತಿ ಎತ್ತುವ ಕನಸಿನಲ್ಲಿ ಭಾರತ: ನಾಳೆ ಫೈನಲ್ ಫೈಟ್
ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ಸವಾಲನ್ನು ಎದುರಿಸಲಿದೆ. ಇಲ್ಲಿಯವರೆಗೆ ಭಾರತ 5 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಗೆದ್ದಿದೆ. ಇದಲ್ಲದೇ ಟೀಂ ಇಂಡಿಯಾ 8 ಬಾರಿ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ಆಡಿದೆ. ಇಲ್ಲಿಯವರೆಗೆ ಭಾರತ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಫೈನಲ್‌ನಲ್ಲಿ 5 ಬಾರಿ ಗೆದ್ದಿದ್ದರೆ, 3 ಬಾರಿ ಸೋಲನ್ನು ಕಂಡಿದೆ. ದಾಖಲೆಯ ಆರನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಭಾರತ ಕಣ್ಣು ನೆಟ್ಟಿದ್ದು ಭಾನುವಾರ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.
ಭಾರತ ತಂಡ ಅಂಡರ್-19 ಕ್ರಿಕೆಟ್ ವಿಶ್ವಕಪ್ 2000ರಲ್ಲಿ ಮೊದಲ ಬಾರಿಗೆ ಗೆದ್ದುಕೊಂಡಿತು. ಆಗ ಭಾರತ ತಂಡದ ನಾಯಕ ಮೊಹಮ್ಮದ್ ಕೈಫ್. ಇದರ ನಂತರ, ಟೀಮ್ ಇಂಡಿಯಾ ಅಂಡರ್-19 ಕ್ರಿಕೆಟ್ ವಿಶ್ವಕಪ್ 2006 ರ ಫೈನಲ್ ತಲುಪಿತು, ಆದರೆ ಪ್ರಶಸ್ತಿ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ವಿರಾಟ್ ಕೊಹ್ಲಿ ನಾಯಕತ್ವದ ತಂಡವು 2008 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ ಅನ್ನು ಗೆದ್ದುಕೊಂಡಿತು. ಇದಾದ ಬಳಿಕ ಭಾರತ ತಂಡ 2012ರಲ್ಲಿ ಮೂರನೇ ಬಾರಿ ಚಾಂಪಿಯನ್ ಆಯಿತು. ಆ ಭಾರತ ತಂಡದ ನಾಯಕ ಉನ್ಮುಕ್ತ್ ಚಂದ್. ಇಶಾನ್ ಕಿಶನ್ ನೇತೃತ್ವದ ತಂಡ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ತಲುಪಿದ್ದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.

ಭಾರತ ತಂಡವು 2018 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ 2018 ರಲ್ಲಿ ಫೈನಲ್ ತಲುಪಿತು. ಪೃಥ್ವಿ ಶಾ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆಲುವು ದಾಖಲಿಸಿತು. ಈ ಮೂಲಕ ಭಾರತ ದಾಖಲೆಯ ನಾಲ್ಕನೇ ಬಾರಿ ಚಾಂಪಿಯನ್ ಆಯಿತು. ಭಾರತ ತಂಡವು 2022 ರ ಅಂಡರ್-19 ಕ್ರಿಕೆಟ್ ವಿಶ್ವಕಪ್ ಅನ್ನು ಐದನೇ ಬಾರಿಗೆ ಗೆದ್ದಿದೆ. ಯಶ್ ಧುಲ್ ಈ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದರು.
ಭಾರತ ಮತ್ತೊಮ್ಮೆ ಅಂಡರ್-19 ಕ್ರಿಕೆಟ್ ವಿಶ್ವಕಪ್ ಫೈನಲ್ ತಲುಪಿದೆ. ಈ ಬಾರಿ ಟೀಂ ಇಂಡಿಯಾದ ಕಮಾಂಡ್ ಉದಯ್ ಸಹರಾನ್ ಕೈಯಲ್ಲಿದೆ. ಆಸ್ಟ್ರೇಲಿಯ ವಿರುದ್ಧದ ಫೈನಲ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ ಅದು ದಾಖಲೆಯ ಆರನೇ ಪ್ರಶಸ್ತಿಯಾಗಲಿದೆ.

ಉಭಯ ತಂಡಗಳು ಅಂಡರ್ 19 ವಿಶ್ವಕಪ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿವೆ. ಭಾರತ ಪ್ರಸಕ್ತ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಸಂಘಟಿತ ಆಟದ ಮೇಲೆ ವಿಶ್ವಾಸವನ್ನು ಹೊಂದಿದೆ. ಅಲ್ಲದೆ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಜೇಯ ಓಟವನ್ನು ಮುಂದುವರಿಸಿದೆ. ಹಾಗೇಯೆ ಆಸ್ಟ್ರೇಲಿಯಾ ತಂಡ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಕಪ್ ಗೆಲುವಿನ ವಿಶ್ವಾಸದಲ್ಲಿದೆ. ಈ ಬಾರಿ ಕಪ್ ಯಾರ ಕೈ ಹತ್ತಲಿದೆ ಎಂಬುದು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications