ಅಂಡರ್ 19 ವಿಶ್ವಕಪ್: ಭಾರತ ಪಾಕಿಸ್ತಾನ ಕಾದಾಟಕ್ಕೆ ಕ್ಷಣಗಣನೆ

ಟೀಮ್ ಇಂಡಿಯಾ ಕಿರಿಯ ಆಟಗಾರರು ಅಂಡರ್ 19ನ ವಿಶ್ವಕಪ್‌ನಲ್ಲಿ ಮಿಂಚುಹರಿಸಿದ್ದಾರೆ. ನಾಲ್ಕು ಬಾರಿಯ ಚಾಂಪಿಯನ್ ತಂಡವಾಗಿರುವ ಟೀಮ್ ಇಂಡಿಯಾ ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಇಂದು ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ.
ಸತತ ಮೂರನೇ ಬಾರಿಗೆ ಟೀಮ್ ಇಂಡಿಯಾ ಫೈನಲ್ ಪ್ರವೇಶಕ್ಕೆ ಸಿದ್ದವಾಗಿದೆ. ಐದನೇ ಬಾರಿ ಕಪ್ ಎತ್ತಲು ಟೀಮ್ ಇಂಡಿಯಾಗೆ ಇನ್ನು ಕೇವಲ ಎರಡು ಹೆಜ್ಜೆ ಮಾತ್ರವೇ ಬಾಕಿ ಉಳಿದಿದೆ. ಈವರೆಗೆ ಆಡಿರುವ ಪಂದ್ಯಗಳಲ್ಲಿ ಅದ್ಭುತವಾಗಿ ಆಡಿರುವ ಟೀಮ್ ಇಂಡಿಯಾ ಅಜೇಯಬಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ.
ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದರೆ, ಅಫ್ಘಾನಿಸ್ತಾನವನ್ನು ಮಣಿಸಿದ ಪಾಕಿಸ್ತಾನ ಅಂಡರ್-19 ತಂಡ ಸೆಮಿಫೈನಲ್‌ಗೆ ಪ್ರವೇಶವನ್ನು ಪಡೆದುಕೊಂಡಿದೆ. ಇಂದು ಈ ಎರಡೂ ತಂಡಗಳು ಫೈನಲ್ ಪ್ರವೇಶಕ್ಕಾಗಿ ಕಾದಾಟ ನಡೆಸಲಿದೆ.
ತಂಡಗಳ ಬಲಾಬಲವನ್ನು ಗಮನಿಸಿದರೆ ಪ್ರಯಾಮ್ ಗಾರ್ಗ್ ನೇತೃತ್ವದ ಭಾರತ ತಂಡ ಬಲಿಷ್ಟವಾಗಿದೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾ ಬ್ಯಾಟಿಂಗ್ ಆರ್ಡರ್‌ನ ಬೆನ್ನೆಲುಬಾಗಿದ್ದಾರೆ. ಆದರೆ ಸಾಂಪ್ರದಾಯಿಕ ಎದುರಾಳಿಯಾಗಿರುವ ಪಾಕಿಸ್ತಾನ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಅನುಮಾನವಿಲ್ಲ.
ದಕ್ಷಿಣ ಆಫ್ರಿಕಾದ ಫೊಚೆಫ್ಸ್ಟ್ರೋಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ಪಂದ್ಯ ನಡೆಯಲಿದೆ. ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯದ ನೇರಪ್ರಸಾರವಿರಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications