Mitchell Starc: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಅನಗತ್ಯ ದಾಖಲೆ
ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 13 ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್‌ಗಳಿಂದ ಸೋಲಿಸಿತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅನಗತ್ಯ ದಾಖಲೆ ಮಾಡಿದರು. ಆರ್‌ಸಿಬಿ ಬ್ಯಾಟರ್ ಫಿಲ್ ಸಾಲ್ಟ್ ಅವರಿಂದ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆಸಿಕೊಳ್ಳುವ ಮೂಲಕ ಸ್ಟಾರ್ಕ್ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ದಾಖಲಿಸಿಕೊಂಡರು.
ಮಿಚೆಲ್ ಸ್ಟಾರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಆರ್‌ಸಿಬಿ ಇನ್ನಿಂಗ್ಸ್‌ನ ಮೂರನೇ ಓವರ್ ಮತ್ತು ಮಿಚೆಲ್ ಸ್ಟಾಕ್ ತಮ್ಮ ಎರಡನೇ ಓವರ್ ಬೌಲ್ ಮಾಡಲು ಬಂದರು. ಈ ವೇಳೆ ಮಿಚೆಲ್ ಸ್ಟಾರ್ಕ್ ಅನಗತ್ಯ ದಾಖಲೆ ಮಾಡಿದರು.

ಆರ್‌ಸಿಬಿ ಪರ ಆರಂಭಿಕ ಬ್ಯಾಟರ್ಸ್ ಆಗಿ ಕಣಕ್ಕಿಳಿದಿದ್ದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಈ ಸಂದರ್ಭದಲ್ಲಿ ಬೌಲಿಂಗ್ ಮಾಡಲು ಮಿಚೆಲ್ ಸ್ಟಾರ್ಕ್ ಒಂದೇ ಓವರ್‍ನಲ್ಲಿ 30 ರನ್‌ಗಳನ್ನು ನೀಡಿದರು. ಇದರೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅತಿ ಹೆಚ್ಚು ರನ್ ನೀಡಿದ ಎರಡನೇ ಬೌಲರ್ ಎನಿಸಿಕೊಂಡರು. ಇದು ಐಪಿಎಲ್ 2025 ರ ಅತ್ಯಂತ ದುಬಾರಿ ಓವರ್ ಕೂಡ ಆಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ದಾಖಲೆ ಅನ್ರಿಚ್ ನಾರ್ಟ್ಜೆ ಹೆಸರಿನಲ್ಲಿದೆ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಅವರು 32 ರನ್‌ಗಳನ್ನು ಬಿಟ್ಟುಕೊಟ್ಟರು. ರೊಮಾರಿಯೊ ಶೆಫರ್ಡ್ 2 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ರನ್ ಗಳಿಸಿದರು.
ಈಗ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಓವರ್‌ನ ಮೊದಲ ಎಸೆತದಲ್ಲೇ ಸಾಲ್ಟ್ ಸಿಕ್ಸರ್ ಬಾರಿಸಿದರು. ಈ ಓವರ್‌ನ ಎರಡನೇ ಮತ್ತು ಮೂರನೇ ಎಸೆತಗಳಲ್ಲಿ ಸಾಲ್ಟ್ ಎರಡು ಬೌಂಡರಿಗಳನ್ನು ಬಾರಿಸಿದರು. ನಾಲ್ಕನೇ ಎಸೆತದಲ್ಲಿ ಸಾಲ್ಟ್ ಬೌಂಡರಿ ಹೊಡೆದರು. ಆದರೆ ಅದು ನೋ ಬಾಲ್ ಆಗಿದ್ದರಿಂದ ಐದು ರನ್‌ಗಳು ಸಿಕ್ಕತು. ಫ್ರೀ ಹಿಟ್‌ನಲ್ಲಿಯೂ ಸಾಲ್ಟ್ ಸಿಕ್ಸರ್ ಸಿಡಿಸಿದರು. ನಂತರ 5ನೇ ಎಸೆತದಲ್ಲಿ ಸಾಲ್ಟ್ 1 ರನ್ ಗಳಿಸಿದರು. ನಂತರ ಸ್ಟ್ರೇಕ್ ಪಡೆದ ಕೊಹ್ಲಿ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ 30 ರನ್ ಗಳಿಸಿದರು. ಈ ಓವರ್‌ನ ನೆರವಿನಿಂದ ಆರ್‌ಸಿಬಿ ಮೂರು ಓವರ್‌ಗಳಲ್ಲಿ 50 ರನ್‌ಗಳ ಗಡಿ ದಾಟಿತು. ಈ ಮೂಲಕ ನಾರ್ಟ್ಜೆ ನಂತರ, ಸ್ಟಾರ್ಕ್ ಐಪಿಎಲ್‌ನಲ್ಲಿ ಡೆಲ್ಲಿ ಪರ ಒಂದೇ ಓವರ್‌ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟ ಬೌಲರ್ ಆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications