ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಲಕ್ನೋ ಕ್ರಿಕೆಟ್ ಮೈದಾನಕ್ಕೆ ಅಟಲ್ ಬಿಹಾರಿ ವಾಜಪೇಯಿ ಹೆಸರು

UP government changed name of lucknow ekana cricket stadium with vajapyee

ಲಕ್ನೋ, ನವೆಂಬರ್ 6: ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಸಜ್ಜುಗೊಳ್ಳುತ್ತಿರುವ ಉತ್ತರ ಪ್ರದೇಶ ಸರ್ಕಾರ ಎಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನಕ್ಕೆ 'ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ' ಎಂದು ಮರುನಾಮಕರಣ ಮಾಡಿದೆ.

ಭಾರತ-ವೆಸ್ಟ್ ಇಂಡೀಸ್ ತಂಡಗಳ ನಡುವೆ ಮಂಗಳವಾರ ಇಲ್ಲಿ ಮೊದಲ ಬಾರಿಗೆ ಟಿ20 ಪಂದ್ಯ ನಡೆಯುತ್ತಿದೆ. ಸಂಸತ್‌ನಲ್ಲಿ ಲಕ್ನೋವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇರಿಸಿದ್ದು, ಅವರ ಅಭಿಮಾನಿಗಳಲ್ಲಿ ಪುಳಕ ಮೂಡಿಸಿದೆ.

ಯೋಗಿ ಆದಿತ್ಯನಾಥ ಅವರ ಸರ್ಕಾರ ಹೆಸರು ಬದಲಾವಣೆಗಾಗಿ ಕಳುಹಿಸಿದ್ದ ಪ್ರಸ್ತಾವಕ್ಕೆ ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯಕ್ ಅನುಮತಿ ನೀಡಿದರು. ಬಳಿಕ ಪ್ರಧಾನ ಕಾರ್ಯದರ್ಶಿ (ಗೃಹ) ನಿತಿನ್ ರಮೇಶ್ ಅವರು ಸೋಮವಾರ ಸಂಜೆ ಹೆಸರು ಬದಲಾವಣೆಯ ಆದೇಶ ಹೊರಡಿಸಿದರು.

ಎಕನಾ ಸ್ಪೋರ್ಟ್ಸ್ ಸಿಟಿ ಪ್ರೈವೇಟ್ ಲಿಮಿಟೆಡ್, ಜಿಸಿ ಕನ್‌ಸ್ಟ್ರಕ್ಷನ್ಸ್ ಮತ್ತು ಡೆವೆಲೆಪ್‌ಮೆಂಟ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ಲಕ್ನೋ ಅಭಿವೃದ್ಧಿ ಪ್ರಾಧಿಕಾರ (ಎಲ್‌ಡಿಎ) ನಡುವೆ 17.5.1ರ ನಿಯಮದಡಿ ಯೋಜನೆ ಪೂರ್ಣಗೊಂಡ ಬಳಿಕ ಎಕನಾ ಸ್ಪೋರ್ಟ್ಸ್ ಹೆಸರಿಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ಸರ್ಕಾರಕ್ಕೆ ಮಾಹಿತಿ ನೀಡಿದ್ದರು.

ಆದರೆ, ತನ್ನ ಅಧಿಕಾರ ಬಳಸಿಕೊಂಡ ರಾಜ್ಯ ಸರ್ಕಾರ ನಿಯಮದಲ್ಲಿನ ಒಪ್ಪಂದವನ್ನು ರದ್ದುಗೊಳಿಸಿ ತೀವ್ರ ಕಾದಾಟದ ನಿರೀಕ್ಷೆ ಮೂಡಿಸಿರುವ ಪಂದ್ಯಕ್ಕೂ ಮುನ್ನ ಹೆಸರು ಬದಲಾವಣೆ ಮಾಡಿದೆ.

Story first published: Tuesday, November 6, 2018, 17:19 [IST]
Other articles published on Nov 6, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X