For Quick Alerts
ALLOW NOTIFICATIONS  
For Daily Alerts
 

WPL 2025: ಯುಪಿ-ಮುಂಬೈ ನಡುವೆ ಜಿದ್ದಾಜಿದ್ದಿ; ಯಾರಿಗೆ ಗೆಲುವು?

ಲಕ್ನೋದ ಏಕಾನಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಗುರುವಾರ ಮಹಿಳಾ ಪ್ರೀಮಿಯರ್ ಲೀಗ್‌ನ (ಡಬ್ಲ್ಯೂಪಿಎಲ್) 2025ರ 16ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಭಾರತೀಯ ಕಾಲಮಾನ ಪ್ರಕಾರ ಇಂದು ರಾತ್ರಿ 7.30 ಗಂಟೆಗೆ ಉಭಯ ತಂಡಗಳ ಪಂದ್ಯ ಆರಂಭವಾಗಲಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಯುಪಿ ವಾರಿಯರ್ಸ್ ತಂಡಕ್ಕೆ ದೀಪ್ತಿ ಶರ್ಮಾ ನಾಯಕಿಯಾಗಿದ್ದಾರೆ.

ಡಬ್ಲ್ಯೂಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಐದು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿ ಸ್ಥಿರ ಪ್ರದರ್ಶನ ನೀಡಿದೆ. ತಂಡದ ಪರ ನ್ಯಾಟ್ ಸಿವರ್-ಬ್ರಂಟ್ ಮತ್ತು ಹರ್ಮನ್‌ಪ್ರೀತ್ ಕೌರ್ ಅದ್ಭುತ ಪ್ರದರ್ಶನದ ಹೊರತಾಗಿಯೂ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಎಸೆತದ ರೋಚಕ ಪಂದ್ಯದಲ್ಲಿ ಎರಡು ವಿಕೆಟ್‌ಗಳ ಸೋಲು ಅನುಭವಿಸಿತು. ಆದಾಗ್ಯೂ, ಗುಜರಾತ್ ಜೈಂಟ್ಸ್ ವಿರುದ್ಧ ಐದು ವಿಕೆಟ್‌ಗಳ ಗೆಲುವಿನೊಂದಿಗೆ ಟೂರ್ನಿಯಲ್ಲಿ ಮುಂಬೈ ಕಮ್‌ಬ್ಯಾಕ್ ಮಾಡಿದ್ದು, ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.

UP Warriors vs Mumbai Indians WPL 2025 Match 16 Preview

ಮತ್ತೊಂದೆಡೆ, ದೀಪ್ತಿ ಶರ್ಮಾ ನೇತೃತ್ವದ ಯುಪಿ ವಾರಿಯರ್ಸ್ ತಂಡವು ಡಬ್ಲ್ಯೂಪಿಎಲ್ 2025ರಲ್ಲಿ ಏರಿಳಿತಗಳನ್ನು ಕಂಡಿದೆ. ಆಡಿರುವ ಆರು ಪಂದ್ಯಗಳಲ್ಲಿ ಎರಡರಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ಗೆಲುವು ಸಾಧಿಸಿದೆ. ಯುಪಿ ಕೂಡ ಗೆಲುವಿನ ಹುಡುಕಾಟದಲ್ಲಿದೆ.

ಹೆಡ್ ಟು ಹೆಡ್

ಡಬ್ಲ್ಯೂಪಿಎಲ್ ಇತಿಹಾಸದಲ್ಲಿ ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಒಟ್ಟು 6 ಪಂದ್ಯಗಳು ನಡೆದಿವೆ. ಯುಪಿ ವಾರಿಯರ್ಸ್ 2 ಪಂದ್ಯಗಳನ್ನು ಗೆದ್ದರೆ, ಮುಂಬೈ ಇಂಡಿಯನ್ಸ್ 4 ರಲ್ಲಿ ಗೆದ್ದು ಪ್ರಾಬಲ್ಯ ಸಾಧಿಸಿದೆ.

ಸಂಭಾವ್ಯ ಪ್ಲೇಯಿಂಗ್-11

ಯುಪಿ ವಾರಿಯರ್ಸ್: ಕಿರಣ್ ನವಗಿರೆ, ವೃಂದಾ ದಿನೇಶ್, ದೀಪ್ತಿ ಶರ್ಮಾ (ನಾಯಕಿ), ತಹ್ಲಿಯಾ ಮೆಕ್‌ಗ್ರಾತ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಉಮಾ ಚೆಟ್ರಿ (ವಿಕೆಟ್‌ಕೀಪರ್), ಚಿನೆಲ್ಲೆ ಹೆನ್ರಿ, ಸೋಫಿ ಎಕ್ಲೆಸ್ಟೋನ್, ಸೈಮಾ ಠಾಕೋರ್, ಕ್ರಾಂತಿ ಗೌಡ್.

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್, ಎಸ್ ಸಜನಾ, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್.

Story first published: Thursday, March 6, 2025, 6:59 [IST]
Other articles published on Mar 6, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+