WPL Auction 2026: ಯುಪಿ ಸೇರಿದ ಮೆಗ್ ಲ್ಯಾನಿಂಗ್: ಡೆಲ್ಲಿ ಜೆರ್ಸಿ ತೊಟ್ಟ ಲಾರಾ
ಆಸ್ಟ್ರೇಲಿಯಾದ ದಿಗ್ಗಜ ಆಟಗಾರ್ತಿ ಮೆಗ್ ಲ್ಯಾನಿಂಗ್ ಅವರನ್ನು ಕೊಳ್ಳುವಲ್ಲಿ ಯುಪಿ ವಾರಿಯರ್ಸ್ ತಂಡ ಸಫಲವಾಗಿದೆ. ಇವರನ್ನು ಕೊಳ್ಳಲು ಯುಪಿ ತಂಡ 1.90 ಕೋಟಿ ರೂ.ಗಳ ಹಣವನ್ನು ಹೂಡಿದೆ. ಇವರನ್ನು ಮತ್ತೆ ತಮ್ಮ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿಫಲವಾಗಿದೆ.
ಮೆಗ್ ಲ್ಯಾನಿಂಗ್ ಈಗಾಗಲೇ ಮಹಿಳಾ ಕ್ರಿಕೆಟ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಇವರು ಟಾಪ್ ಆರ್ಡರ್ ಬ್ಯಾಟಿಂಗ್‌ಗೆ ಆನೆ ಬಲ ತುಂಬಬಲ್ಲ ಆಟಗಾರ್ತಿಯಾಗಿದ್ದಾರೆ. ಇವರು ಈಗಾಗಲೇ WPLನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಿದ್ದರು. ಇವರ ಅನುಭವಕ್ಕೆ ಯುಪಿ ಮಣೆ ಹಾಕಿ ಇವರಿಗೆ ದೊಡ್ಡ ಮೊತ್ತವನ್ನು ನೀಡಿದೆ.

ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ವಾರ್ಡ್ (Laura Wolvaardt) ಸಹ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಲಿದ್ದಾರೆ. ಇವರು ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅಲ್ಲದೆ ದಕ್ಷಿಣ ಆಫ್ರಿಕಾ ತಂಡವನ್ನು ಮಹಿಳಾ ವಿಶ್ವಕಪ್‌ನ ಫೈನಲ್‌ಗೆ ಕೊಂಡೊಯ್ಯುವಲ್ಲಿ ಸಫಲರಾಗಿದ್ದರು. ಇವರಿಗೆ ಡೆಲ್ಲಿ ಕ್ಯಾಪಿಟಲ್ಸ್ ಮಣೆ ಹಾಕಿದೆ. ಇವರು ಈಗಾಗಲೇ ಮಹಿಳಾ ಕ್ರಿಕೆಟ್ ಲೀಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರು ಆಡಿದ 13 ಪಂದ್ಯಗಳಲ್ಲಿ 342 ರನ್ ಬಾರಿಸಿದ್ದಾರೆ. ಈ ವೇಳೆ 3 ಅರ್ಧಶತಕವನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications