IND vs SL: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಆಟಗಾರನಿಗೆ ಗಂಭೀರ್ ಅವಕಾಶ
ಜುಲೈ 31 ಬುಧವಾರ, ರಾಹುಲ್ ದ್ರಾವಿಡ್ ನಂತರ ಗೌತಮ್ ಗಂಭೀರ್ ಹೆಡ್ ಕೋಚ್ ಆದ ಬಳಿಕ ಟೀಮ್ ಇಂಡಿಯಾದಲ್ಲಿ ಕೆಲವು ದೊಡ್ಡ ಪ್ರಯೋಗಗಳು ನಡೆದಿವೆ. ಹಲವು ಆಟಗಾರರಿಗೆ ಅವಕಾಶ ಸಿಕ್ಕರೆ, ಕೆಲವರನ್ನು ತಂಡದಿಂದ ಕೈ ಬಿಟ್ಟಿರುವುದು ಪ್ರಶ್ನಾರ್ಥಕವಾಗಿವೆ.
ಆದರೆ, ಟಿ20 ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಭಾರತ ಸೋಲಿಸಿ ನಂತರ ಈ ಎಲ್ಲ ಪ್ರಶ್ನೆಗಳಿಗೆ ತೆರೆ ಬಿದ್ದಿತು. ಇದೀಗ ಆಗಸ್ಟ್ 2 ರಿಂದ ಶ್ರೀಲಂಕಾ ವಿರುದ್ಧ ಶುರುವಾಗುತ್ತಿರುವ ಏಕದಿನ ಸರಣಿಗೆ ಟೀಮ್ ಇಂಡಿಯಾ ಸಜ್ಜಾಗಿದೆ.

ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡವನ್ನು ಸೇರಿಕೊಂಡಿದ್ದು, ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಆಟಗಾರನಿಗೆ ಗೌತಮ್ ಗಂಭೀರ್ ಅವಕಾಶ ನೀಡಿದ್ದಾರೆ.
ಈ ಆಟಗಾರ ಬೇರೆ ಯಾರು ಅಲ್ಲ, ಆಲ್ ರೌಂಡರ್ ಶಿವಂ ದುಬೆ. ಐಪಿಎಲ್ 2023ರಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ಪರ ಅಬ್ಬರಿಸಿದ ನಂತರ ಶಿವಂ ದುಬೆ ಅದೃಷ್ಟ ಪ್ರಕಾಶಮಾನವಾಗಿದೆ. ಶಿವಂ ದುಬೆ ತಮ್ಮ ಭಯಂಕರ ಬ್ಯಾಟಿಂಗ್‌ನಿಂದ ಐಪಿಎಲ್‌ನಲ್ಲಿ ಎದುರಾಳಿ ತಂಡಗಳಲ್ಲಿ ಭಯ ಹುಟ್ಟಿಸಿದರು.
ಇದಾದ ಬಳಿಕ 4 ವರ್ಷಗಳ ನಂತರ ಟೀಮ್ ಇಂಡಿಯಾಗೆ ವಾಪಸಾಗಿ ಶಿವಂ ದುಬೆ ಉತ್ತಮ ಪ್ರದರ್ಶನ ನೀಡಿದ್ದರು. ಐಪಿಎಲ್ 2024ರಲ್ಲೂ ದುಬೆ ಉತ್ತಮ ಪ್ರದರ್ಶನ ನೀಡಿದರು. ಹೀಗಾಗಿ ಶಿವಂ ದುಬೆ ಟಿ20 ವಿಶ್ವಕಪ್ 2024ರಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡಿದ್ದರು.
ಆದರೆ ದುಬೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ಈಗ ದುಬೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ಟೀಮ್ ಇಂಡಿಯಾದ ನೂತನ ಹೆಡ್ ಕೋಚ್ ಗೌತಮ್ ಗಂಭೀರ್ ಮುಖ್ಯ ಕಾರಣವಾಗಿದ್ದಾರೆ.
2019 ರಲ್ಲಿ ಪಾದಾರ್ಪಣೆ
ಶಿವಂ ದುಬೆ 2019 ರ ಕೊನೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಆದರೆ, ಈ ಪಂದ್ಯದಲ್ಲಿ ದುಬೆ ದೊಡ್ಡ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಲಿಲ್ಲ. ಆದರೆ ಇದೀಗ ಮತ್ತೊಮ್ಮೆ 5 ವರ್ಷಗಳ ನಂತರ ಏಕದಿನದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ಇದೆ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ದುಬೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ತಂಡವನ್ನು ನಾಯಕನಾಗಿ ರೋಹಿತ್ ಶರ್ಮಾ ಮುನ್ನೆಡೆಸುತ್ತಿದ್ದಾರೆ. ಶಿವಂ ದುಬೆ ಅವರು ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎಲ್ಲರ ಮನ ಗೆದ್ದಿದ್ದಾರೆ.
ಆದರೆ ಅವರ ಬೌಲಿಂಗ್‌ನಿಂದ ವಿಶೇಷವವಾದ್ದುದನ್ನು ಮಾಡಲು ಸಾಧ್ಯವಾಗಿಲ್ಲ. ಆಗಸ್ಟ್ 2 ರಿಂದ ಸರಣಿ ಆರಂಭವಾಗಲಿದ್ದು, ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ದುಬೆಗೆ ಆಡಲು ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.
ಶ್ರೀಲಂಕಾ ವಿರುದ್ಧದ ಟೀಮ್ ಇಂಡಿಯಾದ ಏಕದಿನ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications