Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind Vs Pak: ಮ್ಯಾಚ್‍ ನೋಡುವ ವೇಳೆ ನಡೆದ ಘಟನೆಯನ್ನು ವಿವರಿಸಿದ ಊರ್ವಶಿ ರೌಟೇಲಾ

ಬಾಲಿವುಡ್ ನಟಿ ಊರ್ವಶಿ ರೌಟೇಲಾ ಆಗಾಗ್ಗೆ ಹಲವಾರು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಆದರೆ, ಊರ್ವಶಿ ರೌಟೇಲಾ ಮತ್ತೊಮ್ಮೆ ಬೇರೆ ಕಾರಣಕ್ಕಾಗಿ ಸುದ್ದಿಯಲ್ಲದ್ದಾರೆ. ಊರ್ವಶಿ ರೌಟೇಲಾ ಭಾರತ-ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಹೋಗಿದ್ದರು. ಈ ವೇಳೆ ಊರ್ವಶಿ ರೌಟೇಲಾ ಅವರ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಕಳ್ಳರು ಕದ್ದಿದ್ದಾರೆ.

ಈ ಬಗ್ಗೆ ಊರ್ವಶಿ ರೌಟೇಲಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಬಾಲಿವುಡ್ ನಟಿ ಪಂದ್ಯ ವೀಕ್ಷಿಸಲು ಹೋದ ಜನರ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ತಮ್ಮ ಐಫೋನ್‌ನಲ್ಲಿ ನಿಜವಾದ 24 ಕ್ಯಾರೆಟ್ ಚಿನ್ನವನ್ನು ಅಳವಡಿಸಲಾಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Urvashi Rautela Explained What Happened While Watching India Vs Pakistan Match

ಊರ್ವಶಿ ರೌಟೇಲಾ ಅವರು ತಮ್ಮ ಟ್ವೀಟ್ ನಲ್ಲಿ "ನನ್ನ 24 ಕ್ಯಾರೆಟ್ ನ ಅಸಲಿ ಚಿನ್ನದ ಐಫೋನ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕಳೆದು ಹೋಗಿದೆ. ಯಾರಿಗಾದರೂ ಸಿಕ್ಕರೆ ದಯವಿಟ್ಟು ಸಹಾಯ ಮಾಡಿ... ಆದಷ್ಟು ಬೇಗ ನನ್ನನ್ನು ಸಂಪರ್ಕಿಸಿ. ಯಾರು ನನಗೆ ಸಹಾಯ ಮಾಡಬಹುದು" ಎಂದು ಬರೆದುಕೊಂಡಿದ್ದಾರೆ.

ಊರ್ವಶಿ ರೌಟೇಲಾ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಕಾಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಅಲ್ಲದೆ, ಸಾಮಾಜಿಕ ಮಾಧ್ಯಮ ಬಳಕೆದಾರರು ತಮಾಷೆಯ ಕಾಮೆಂಟ್‌ಗಳನ್ನು ಸಹ ಮಾಡುತ್ತಿದ್ದಾರೆ. ಆದರೆ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಮಾಧ್ಯಮ ಬಳಕೆದಾರರು ಊರ್ವಶಿ ರೌಟೇಲಾ ಫೋನ್‍ ಕಳೆದುಕೊಂಡಿದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಶನಿವಾರ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನವನ್ನು ಸೋಲಿಸಿ ಸತತ ಮೂರನೇ ಗೆಲುವು ದಾಖಲಿಸಿದೆ.

ಇದಲ್ಲದೇ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಅಜೇಯ ದಾಖಲೆಯನ್ನು ಕಾಯ್ದುಕೊಂಡಿದೆ. ವಾಸ್ತವವಾಗಿ, ಇಲ್ಲಿಯವರೆಗೆ ಭಾರತ ಮತ್ತು ಪಾಕಿಸ್ತಾನ ಏಕದಿನ ವಿಶ್ವಕಪ್‌ನಲ್ಲಿ 8 ಬಾರಿ ಮುಖಾಮುಖಿಯಾಗಿವೆ. ಟೀಂ ಇಂಡಿಯಾದಿಂದ ಪಾಕಿಸ್ತಾನ ಪ್ರತಿ ಬಾರಿಯೂ ಸೋಲನ್ನು ಕಂಡಿದೆ.

Story first published: Monday, October 16, 2023, 6:03 [IST]
Other articles published on Oct 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+