Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂ ಚಂಡೀಗಢದಲ್ಲಿ ವೈಭವ್ ಸುನಾಮಿಗೆ ನುಚ್ಚುನೂರಾದ ಪ್ರಮುಖ 5 ದಾಖಲೆಗಳು

19ನೇ ಆವೃತ್ತಿಯ ಐಪಿಎಲ್‌ನಲ್ಲಿ ತನ್ನ ವಿಸ್ಫೋಟಕ ಬ್ಯಾಟಿಂಗ್‌ನಿಂದಲೇ ಹೆಸರು ಮಾಡಿರುವ ವೈಭವ್ ಸೂರ್ಯವಂಶಿ ಬುಧವಾರ ನ್ಯೂ ಚಂಡೀಗಢದಲ್ಲಿ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಹೈದರಾಬಾದ್‌ ಬೌಲರ್‌ಗಳಿಗೆ ಬಹುವಾಗಿ ಕಾಡಿಸಿದರು. ಅಲ್ಲದೆ ತಮ್ಮ ಬಿರುಸಿನ ಬ್ಯಾಟಿಂಗ್‌ ಪ್ರದರ್ಶನದ ಬಲದಿಂದ ಹಲವು ದಾಖಲೆಗಳಿಗೆ ತಮ್ಮ ಹೆಸರು ನಮೂದಿಸಿದರು.

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ವೈಭವ್ ಸೂರ್ಯವಂಶಿ ಆರ್ಭಟಿಸಿದರು. ಇವರು ಕೇವಲ 29 ಎಸೆತಗಳಲ್ಲಿ 5 ಬೌಂಡರಿ, 12 ಸಿಕ್ಸರ್ ಸಹಾಯದಿಂದ 97 ರನ್‌ ಬಾರಿಸಿ ಔಟ್ ಆದರು. ಈ ಮೂಲಕ ಇವರು ಹಲವು ದಾಖಲೆಗಳನ್ನು ನಿರ್ಮಿಸಿದರು.

Vaibhav Sooryavanshi

1- ಒಂದೇ ಐಪಿಎಲ್‌ ಆವೃತ್ತಿಯಲ್ಲಿ ಹೆಚ್ಚು ಸಿಕ್ಸರ್‌

ವೈಭವ್‌ ಸೂರ್ಯವಂಶಿ ಐಪಿಎಲ್‌ ಇತಿಹಾಸದಲ್ಲಿ ಮುರಿಯಲು ಅಸಾಧ್ಯ ಎಂದೇ ಭಾವಿಸಲಾಗಿದ್ದ ಕ್ರಿಸ್‌ ಗೇಲ್‌ ಅವರ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. 2012ರ ಐಪಿಎಲ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿದ್ದ ಕ್ರಿಸ್‌ ಗೇಲ್‌ ಆರ್‌ಸಿಬಿ ಪರ ಬ್ಯಾಟ್ ಮಾಡಿ 59 ಸಿಕ್ಸರ್ ಬಾರಿಸಿದ್ದರು. ಈ ದಾಖಲೆ 14 ವರ್ಷಗಳ ಕಾಲ ಯಾರೂ ಮುರಿದಿರಲಿಲ್ಲ. ಈ ಆವೃತ್ತಿಯಲ್ಲಿ ವೈಭವ್ ಈ ದಾಖಲೆ ಅಳಿಸಿ ಹಾಕಿದ್ದಾರೆ. ಇವರು 19ನೇ ಆವೃತ್ತಿಯ ಐಪಿಎಲ್‌ನಲ್ಲಿ 65 ಸಿಕ್ಸರ್ ಬಾರಿಸಿದ್ದಾರೆ.

2- ರಿಷಭ್ ಪಂತ್ ದಾಖಲೆ ಮುರಿದ ವೈಭವ್

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಈ ಸೀಸನ್‌ನಲ್ಲಿ ತಮ್ಮ 600 ರನ್‌ಗಳ ಗಡಿಯನ್ನು ದಾಟಿದರು. ಇದರೊಂದಿಗೆ ಐಪಿಎಲ್‌ನ ಒಂದೇ ಸೀಸನ್‌ನಲ್ಲಿ 600 ಪ್ಲಸ್ ರನ್ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಈ ದಾಖಲೆ ಈ ಮೊದಲು 2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಬ್ಯಾಟ್ ಮಾಡಿದ್ದ ರಿಷಭ್ ಪಂತ್ ಹೆಸರಿನಲ್ಲಿತ್ತು.

3- ಜೈಸ್ವಾಲ್ ದಾಖಲೆ ಬ್ರೇಕ್

ಅನ್‌ಕ್ಯಾಪ್ಡ್‌ ಆಟಗಾರನೊಬ್ಬ ಐಪಿಎಲ್ ಆವೃತ್ತಿಯಲ್ಲಿ ಗಳಿಸಿದ ಗರಿಷ್ಠ ರನ್‌ಗಳ ದಾಖಲೆಯನ್ನು ವೈಭವ್ ಮುರಿದಿದ್ದಾರೆ. ಈ ಆವೃತ್ತಿಯಲ್ಲಿ ಅವರು ಒಟ್ಟು 630 ರನ್ ಗಳಿಸುವ ಮೂಲಕ ದಾಖಲೆ ಬರೆದರು. ಈ ಮೊದಲು ಈ ದಾಖಲೆ ಯಶಸ್ವಿ ಜೈಸ್ವಾಲ್‌ ಹೆಸರಿನಲ್ಲಿತ್ತು. ಜೈಸ್ವಾಲ್‌ 2023ರ ಐಪಿಎಲ್‌ನಲ್ಲಿ 625 ರನ್‌ ಬಾರಿಸಿದ್ದರು.

4- ಬ್ರೆಂಡನ್ ಮೆಕಲಮ್ ದಾಖಲೆ ಸಮ

ಪಂದ್ಯದ ಮೊದಲ ಓವರ್‌ನಲ್ಲೇ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ವೈಭವ್ ನ್ಯೂಜಿಲೆಂಡ್‌ನ ಮಾಜಿ ದಿಗ್ಗಜ ಬ್ರೆಂಡನ್ ಮೆಕಲಮ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇಬ್ಬರೂ ಆಟಗಾರರು 10 ಬಾರಿ ಈ ಸಾಧನೆ ಮಾಡಿದ್ದರು.

5- ರೈನಾ ದಾಖಲೆಯ ಸಮಕ್ಕೆ ನಿಂತ ವೈಭವ್

ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದರು. ಈ ಮೂಲಕ ಐಪಿಎಲ್‌ ನಾಕೌಟ್ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕ ಬಾರಿಸಿದ ಸುರೇಶ್‌ ರೈನಾ ಅವರ ದಾಖಲೆ ಸಮಕ್ಕೆ ನಿಂತರು. 2014ರಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಸುರೇಶ್ ರೈನಾ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

Story first published: Wednesday, May 27, 2026, 22:45 [IST]
Other articles published on May 27, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+