15 ವರ್ಷದ ವೈಭವ್, 15 ವರ್ಷ ಅನುಭವಿ ರೀತಿ ಆಟ; ಕ್ಲಾಸ್ ಬ್ಯಾಟಿಂಗ್‌ಗೆ ಫ್ಯಾನ್ಸ್ ಫಿದಾ
ನ್ಯೂ ಚಂಡೀಗಢ: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು.
ಎಲ್ಲರ ಕಣ್ಣುಗಳು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಮೇಲೆ ನೆಟ್ಟಿದ್ದವು. ಈ ಪಂದ್ಯದಲ್ಲಿ ವೈಭವ್ ತಮ್ಮ ನೈಜ ಆಟಕ್ಕಿಂತ ವಿರುದ್ಧವಾಗಿ ಬ್ಯಾಟ್ ಮಾಡಿದರು. ಆರಂಭದಲ್ಲಿ ಅಬ್ಬರಿಸಿ ಬೊಬ್ಬೆರೆಯುವ ವೈಭವ್ ಈ ಪಂದ್ಯದಲ್ಲಿ ಪಕ್ಕಾ ತಾಳ್ಮೆಯ ಆಟವನ್ನು ಆಡಿದರು. ಬಿಗ್ ಮ್ಯಾಚ್‌ನಲ್ಲಿ ಹೇಗೆ ಆಡಬೇಕು ಎಂಬುದನ್ನು ಅರ್ಥಮಾಡಿಕೊಂಡು ಆಡಿದ ವೈಭವ್ ಆರ್ಭಟಿಸಿದರು.

ವೈಭವ್ ಸೂರ್ಯವಂಶಿ ಒಂದೇ ಸೀಸನ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಅನ್‌ಕ್ಯಾಪ್ಡ್ ಪ್ಲೇಯರ್ ಎಂಬ ಹಿರಿಮೆಗೆ ಪಾತ್ರರಾದರು. ವೈಭವ್ ಸೂರ್ಯವಂಶಿ ಈ ಐಪಿಎಲ್‌ನಲ್ಲಿ ಒಂದೇ ಸೀಸನ್‌ನಲ್ಲಿ 700 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಮೊದಲ ಅನ್‌ಕ್ಯಾಪ್ಡ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಒಂದೇ ಆವೃತ್ತಿಯಲ್ಲಿ 700 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಐದನೇ ಭಾರತೀಯ ಆಟಗಾರ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ವಿರಾಟ್ ಕೊಹ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ಸಾಯಿ ಸುದರ್ಶನ್, ಸೂರ್ಯಕುಮಾರ್ ಯಾದವ್ ಮತ್ತು ಶುಭಮನ್ ಗಿಲ್ ತಲಾ ಒಮ್ಮೆ ಈ ಸಾಧನೆ ಮಾಡಿದ್ದಾರೆ.
ಪವರ್ ಪ್ಲೇನಲ್ಲಿ ಪವರ್ ಫುಲ್ ಬ್ಯಾಟಿಂಗ್
ವೈಭವ್ ಸೂರ್ಯವಂಶಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ವೈಭವ್ ಪವರ್‌ಪ್ಲೇನಲ್ಲಿ ಒಂದೇ ಐಪಿಎಲ್ ಸೀಸನ್‌ನಲ್ಲಿ ಗಳಿಸಿದ ಅತಿ ಹೆಚ್ಚು ರನ್‌ಗಳ ದಾಖಲೆಯನ್ನು ಹೊಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದಲ್ಲಿ ವೈಭವ್ ಮೊದಲ ಆರು ಓವರ್‌ಗಳಲ್ಲಿ ಒಟ್ಟು 31 ರನ್ ಗಳಿಸಿದರು. ಈ ಮೂಲಕ 19ನೇ ಅವೃತ್ತಿಯ ಐಪಿಎಲ್‌ನಲ್ಲಿ ಒಟ್ಟ 521 ರನ್ ಗಳಿಸಿದ್ದಾರೆ.
100 ರನ್ ದಾಖಲೆ
15 ವರ್ಷದ ವೈಭವ್ ಸೂರ್ಯವಂಶಿ ಮಧ್ಯದ ಓವರ್‌ಗಳ ಬಳಿಕ ಗೇರ್ ಶಿಫ್ಟ್ ಮಾಡಿದರು. ಕೇವಲ ಎರಡನೇ ಐಪಿಎಲ್ ಆವೃತ್ತಿ ಆಡುತ್ತಿರುವ ವೈಭವ್ ಸೂರ್ಯವಂಶಿ ವೇಗವಾಗಿ 1000 ರನ್ ಕಲೆ ಹಾಕಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಇವರು ಕೇವಲ 23 ಇನಿಂಗ್ಸ್‌ಗಳಲ್ಲಿ 1000ಕ್ಕೂ ಹೆಚ್ಚು ರನ್ ಕಲೆ ಹಾಕಿದ ಹಿರಿಮೆ ತಮ್ಮದಾಗಿಸಿಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications