ಆಲೋಚನೆ ಬದಲಿಸಿ, ಯುವಕರಿಗೆ ಅವಕಾಶ ನೀಡಿ: ವೈಭವ್ ಸೂರ್ಯವಂಶಿ ಪರ ಎಬಿಡಿ ಬ್ಯಾಟಿಂಗ್
ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಆರಂಭದಲ್ಲಿ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಇಂಗ್ಲೆಂಡ್‌ಗೆ 190 ರನ್ ಗುರಿಯನ್ನು ನೀಡಿತ್ತು. ಆನಂತರ ಸುರಿದ ಮಳೆಯಿಂದಾಗಿ ಪಂದ್ಯ ನಡೆಯಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್ ಸೂರ್ಯವಂಶಿ ಅವರಿಗೆ ಇನ್ನು ಅವಕಾಶ ಲಭಿಸಿಲ್ಲ. ಈ ಬಗ್ಗೆ ಮಾಜಿ ಆಟಗಾರರು ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಸಹ ವೈಭವ್ ಸೂರ್ಯವಂಶಿ ಬಗ್ಗೆ ಮಾತನಾಡಿದ್ದಾರೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡುವ ಬಗ್ಗೆ ತನ್ನದೇ ಆದ ಆಲೋಚನೆ ಹೊಂದಿದೆ. ಆದರೆ ವೈಭವ್ ಸೂರ್ಯವಂಶಿ ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತ ತಂಡದ ಬ್ಯಾಟಿಂಗ್ ಕೋಚ್ ರಯಾನ್ ಟೆನ್ ಡೊಶ್ಚಾಟೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ವೈಭವ್ ಸೂರ್ಯವಂಶಿ ಉಳಿದ ಆಟಗಾರರಂತೆ ಒಂದು ನಿರ್ದಿಷ್ಟ ಪ್ರಕ್ರಿಯೆಯ ಮೂಲಕವೇ ತಂಡಕ್ಕೆ ಬರಬೇಕು ಎಂದು ತಿಳಿಸಿದ್ದರು.
ಎಬಿಡಿ ಹೇಳಿದ್ದಿಷ್ಟು..
ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ಸರಣಿಯಲ್ಲಿ ಅವಕಾಶ ನೀಡಬೇಕಿತ್ತು. ಈ ಪ್ರವಾಸ ವೈಭವ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಲು ಬೆಸ್ಟ್ ಚಾನ್ಸ್ ಆಗಿತ್ತು. ಆದರೆ ಅವರಿಗೆ ಅವಕಾಶ ನೀಡದೇ ಇರುವುದು ದುರಾದೃಷ್ಟಕರ. ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಆಡಿದ ಧಾಟಿಯನ್ನು ನೋಡಿದರೆ ಅವರು ಅವಕಾಶಕ್ಕೆ ಅರ್ಹರು ಎಂದು ಎಬಿಡಿ ತಿಳಿಸಿದ್ದಾರೆ.
ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ತನ್ನ ಆಲೋಚನಾ ಕ್ರಮವನ್ನು ಬದಲಿಸಬೇಕು. ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿ ಅವರಿಗೆ ಅವಕಾಶ ನೀಡಬೇಕು. ಇಂಗ್ಲೆಂಡ್‌ನಲ್ಲಿ ದೊಡ್ಡ ಹೊಡೆತಗಳನ್ನು ಆಡುವುದು ಸುಲಭವಲ್ಲ. ಹೀಗಾಗಿ ಟೀಮ್ ಇಂಡಿಯಾ ತನ್ನ ಚಿಂತನೆಯನ್ನು ಬದಲಿಸಬೇಕು ಎಂದಿದ್ದಾರೆ.
ವೈಭವ್ ಸೂರ್ಯವಂಶಿ ಸಾಧನೆ
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಅಬ್ಬರಿಸಿದ್ದಾರೆ. ಈ ಮೊದಲು ಇವರಿಗೆ ಭಾರತ ಅಂಡರ್ 19 ತಂಡದಲ್ಲೂ ಸ್ಥಾನ ನೀಡಲಾಗಿತ್ತು. ಈ ಟೂರ್ನಿಯಲ್ಲಿ ಇವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಇನ್ನು 19ನೇ ಆವೃತ್ತಿಯ ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಆಡಿದ 16 ಪಂದ್ಯಗಳಲ್ಲಿ ಅಬ್ಬರದ ಪ್ರದರ್ಶನ ನೀಡಿ 776 ರನ್ ಸಿಡಿಸಿದ್ದರು. ಇವರ ಉತ್ತಮ ಆಟದ ಫಲವಾಗಿ ಇವರಿಗೆ ಭಾರತ ತಂಡದಲ್ಲಿ ಸ್ಥಾನ ಲಭಿಸಿತು. ಈಗ ಅಭಿಮಾನಿಗಳು ಇವರು ಮೈದಾನಕ್ಕೆ ಇಳಿಯುವುದನ್ನು ಕಾಯುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications