Vaibhav Sooryavanshi: ಟಿ20 ಪಂದ್ಯದಲ್ಲಿ ಅಬ್ಬರ, ಏಕದಿನ ಪಂದ್ಯದಲ್ಲಿ ಫೇಲ್..
19ನೇ ಆವೃತ್ತಿಯ ಐಪಿಎಲ್ ಎಂದ್ರೆ ನೆನಪಿಗೆ ಬರುವ ಹಲವು ಸಂಗತಿಗಳಲ್ಲಿ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಸಹ ಒಂದು. ಇವರು ತಮ್ಮ ಬಿರುಸಿನ ಬ್ಯಾಟಿಂಗ್‌ನಿಂದ ವಿಶ್ವದ ಖ್ಯಾತ ನಾಮ ಬೌಲರ್‌ಗಳನ್ನು ಕಾಡಿದ್ದರು. ಬೌಂಡರಿ, ಸಿಕ್ಸರ್‌ಗಳನ್ನು ಬಾರಿಸಿ ಅಭಿಮಾನಿಗಳನ್ನು ರಂಜಿಸಿದ್ದರು. ಇವರ ಈ ಧಮಾಕೆದಾರ್ ಬ್ಯಾಟಿಂಗ್‌ಗೆ ಮನಸೋತ ಬಿಸಿಸಿಐ ಇವರನ್ನು ಶ್ರೀಲಂಕಾ ಪ್ರವಾಸಕ್ಕೆ ಭಾರತ "ಎ" ತಂಡಕ್ಕೆ ಆಯ್ಕೆ ಮಾಡಿತು. ಫಾರ್ಮೆಟ್ ಬದಲಾದಂತೆ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಸಹ ಬದಲಾಗಿದೆ. ಬೌಂಡರಿ ಸಿಕ್ಸರ್‌ಗಳು ದೂರ ಇರಲಿ ತಾವಾಡಿದ ಮೊದಲ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿಯೂ ಇವರು ವಿಫಲರಾಗಿದ್ದಾರೆ.
ಮಂಗಳವಾರದಿಂದ ಶ್ರೀಲಂಕಾದಲ್ಲಿ ತ್ರಿಕೋನ ಸರಣಿಗಳು ನಡೆಯುತ್ತಿವೆ. ಈ ಸರಣಿಯಲ್ಲಿ ಭಾರತ ಎ, ಶ್ರೀಲಂಕಾ ಎ ಹಾಗೂ ಅಫ್ಘಾನಿಸ್ತಾನ ಎ ತಂಡಗಳು ಭಾಗವಹಿಸುತ್ತಿವೆ. ಈ ಸರಣಿಯಲ್ಲಿ ಆಡಲು ವೈಭವ್ ಸೂರ್ಯವಂಶಿ ಸಹ ಅವಕಾಶ ಪಡೆದಿದ್ದಾರೆ. ಆಡಿದ ಮೊದಲ ಪಂದ್ಯದಲ್ಲಿ ವೈಭವ್ ತಮ್ಮ ಛಾಪು ಮೂಡಿಸುವಲ್ಲಿ ವಿಫಲರಾಗಿದ್ದಾರೆ.

ವೈಭವ್ ಸೂರ್ಯವಂಶಿ ಆಡಿದ ಮೊದಲ ಪಂದ್ಯದಲ್ಲಿ 12 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 14 ರನ್ ಬಾರಿಸಿ ಔಟ್ ಆಗಿದ್ದಾರೆ. ಆದರೆ ಈ ಸರಣಿಯಲ್ಲಿ ಇನ್ನು ಪಂದ್ಯಗಳು ಬಾಕಿ ಉಳಿದಿರುವುದರಿಂದ ಇವರಿಗೆ ತಮ್ಮನ್ನು ತಾವು ಸಾಬೀತು ಪಡಿಸಿಕೊಳ್ಳಲು ಇನ್ನೂ ಕೆಲವು ಅವಕಾಶಗಳನ್ನು ಪಡೆಯುತ್ತಾರೆ.
ಮೂರು ದೇಶಗಳ ನಡುವಿನ ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತದ ಪರ ಆರಂಭಿಕರಾಗಿ ವೈಭವ್ ಸೂರ್ಯವಂಶಿ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಕ್ರೀಸ್‌ಗೆ ಬಂದರು. ವೈಭವ್ ಆಡುವಾಗ ತಮ್ಮ ಛಾಪು ಮೂಡಿಸುತ್ತಾರೆ ಎಂಬ ಭರವಸೆ ಇತ್ತು. ಆದರೆ ವೈಭವ್ ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವನ್ನು ಆಡಲಿಲ್ಲ.

ವೈಭವ್‌ಗೆ ಇದೆ ಅವಕಾಶ
ಈ ತ್ರಿಕೋನ ಸರಣಿಯಲ್ಲಿ ಭಾರತ ಮತ್ತು ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳು ಭಾಗವಹಿಸುತ್ತಿವೆ. ಲೀಗ್ ಹಂತದಲ್ಲಿ ಎಲ್ಲಾ ತಂಡಗಳು ಒಟ್ಟು ನಾಲ್ಕು ಪಂದ್ಯಗಳನ್ನು ಆಡಲಿವೆ. ಇದರ ನಂತರ, ಅಂಕ ಪಟ್ಟಿಯಲ್ಲಿ ಅಗ್ರ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ಗೆ ಮುನ್ನಡೆಯುತ್ತವೆ.
ಐಪಿಎಲ್‌ನಲ್ಲಿ ವೈಭವ್ ಅಮೋಘ ಸಾಧನೆ
ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರ ಅಬ್ಬರದ ಬ್ಯಾಟಿಂಗ್ ಪರಿಣಾಮವೇ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯದ ವರೆಗೂ ಮುನ್ನಡೆಯಲು ಸಾಧ್ಯವಾಯಿತು. ಇವರು ಎಲಿಮಿನೇಟರ್ ಹಾಗೂ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಧಾರವಾಗಿದ್ದರು. 19ನೇ ಆವೃತ್ತಿಯಲ್ಲಿ ವೈಭವ್ ಸೂರ್ಯವಂಶಿ ನೀಡಿದ ಅಮೋಘ ಪ್ರದರ್ಶನಕ್ಕೆ ಐದು ಪ್ರಶಸ್ತಿಗಳು ಸಂದಿವೆ. ವೈಭವ್ ಅವರ ಕ್ಲಾಸಿಕ್ ಆಟದ ಪರಿಣಾಮವೇ ಅವರನ್ನು ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆ ಮಾಡಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications