ಎಸ್‌ಆರ್‌ಎಚ್ ವಿರುದ್ಧ ವೈಭವ್ ಸೂರ್ಯವಂಶಿ ಸುನಾಮಿ: ಶತಕ ಬಾರಿಸಿ ಹಲವು ದಾಖಲೆ ಬರೆದ ಯುವ ಆಟಗಾರ
ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಭರ್ಜರಿ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಶನಿವಾರ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯ ಜೈಪುರ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡದ ಪರ ವೈಭವ್ ಸೂರ್ಯವಂಶಿ ತಮ್ಮ ನೈಜ ಆಟವನ್ನು ಆಡಿದರು. ಇವರು ಈ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದರು.
ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟವನ್ನು ಆಡಿದ ವೈಭವ್ ಸೂರ್ಯವಂಶಿ ಅವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಬೌಂಡರಿ ಸಿಕ್ಸರ್‌ಗಳಿಂದ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಈ ಲೀಗ್‌ನಲ್ಲಿ ವೈಭವ್ ವಿಶ್ವದ ಖ್ಯಾತ ನಾಮ ಆಟಗಾರರ ವಿರುದ್ಧ ಅಬ್ಬರಿಸಿದ್ದು, ಈ ಪಂದ್ಯದಲ್ಲೂ ಮುಂದುವರೆಸಿದರು.

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಕಣಕ್ಕೆ ಇಳಿದ ಪ್ಯಾಟ್ ಕಮಿನ್ಸ್ ಇನಿಂಗ್ಸ್ ಎರಡನೇ ಓವರ್ ಬೌಲ್ ಮಾಡಿದರು. ಪ್ಯಾಟ್ ಕಮಿನ್ಸ್ ಅವರ ಈ ಓವರ್ ಕೊನೆಯ ಎಸೆತದಲ್ಲಿ ಆಡುವ ಅವಕಾಶವನ್ನು ಪಡೆದ ವೈಭವ್ ಸೂರ್ಯವಂಶಿ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು. ಈ ಮೂಲಕ ವಿಶ್ವದ ಶ್ರೇಷ್ಠ ಬೌಲರ್ ಎಂಬ ಖ್ಯಾತಿ ಪಡೆದಿದ್ದ ಕಮಿನ್ಸ್ ಮುಖದಲ್ಲಿ ಚಿಂತೆಯ ಗೆರೆಗಳು ಮೂಡುವಂತೆ ಮಾಡಿದರು.
ವೈಭವ್ ಸೂರ್ಯವಂಶಿ ಪವರ್ ಪ್ಲೇನ ಕೊನೆಯ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಬಾರಿಸಿದರು. ಇವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಈ ವೇಳೆ ಇವರು ಕೇವಲ 1 ಬೌಂಡರಿ, 7 ಸಿಕ್ಸರ್ ಬಾರಿಸಿದ್ದರು. ಆದರೆ ಇನಿಂಗ್ಸ್‌ನ 14ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ವೈಭವ್ ಶತಕ ಬಾರಿಸಿದರು. ಈ ಮೂಲಕ ವೈಭವ್ ಸೂರ್ಯವಂಶಿ 36 ಎಸೆತಗಳಲ್ಲಿ ಶತಕ ಬಾರಿಸಿದರು.
ಇದೇ ಅಂಗಳದಲ್ಲಿ ಕಳೆದ ವರ್ಷ ಗುಜರಾತ್ ಟೈಟಾನ್ಸ್ ವಿರುದ್ಧ ಶತಕ ಬಾರಿಸಿದ್ದ ವೈಭವ್ ಸೂರ್ಯವಂಶಿ, ಜೈಪುರ್ ಅಂಗಳದಲ್ಲಿ ಮತ್ತೊಂದು ಶತಕ ಬಾರಿಸಿದರು. 15 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ 2ನೇ ಶತಕ ಬಾರಿಸಿ ಮಿಂಚಿದರು. ಅಲ್ಲದೆ ಐಪಿಎಲ್ ಇತಿಹಾಸದ ಮೂರನೇ ವೇಗದ ಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.
ಐಪಿಎಲ್‌ನಲ್ಲಿ ವೇಗದ ಶತಕ ಬಾರಿಸಿದ ಬ್ಯಾಟರ್ಸ್
ಕ್ರಿಸ್ ಗೇಲ್ (ಆರ್‌ಸಿಬಿ, 30 ಎಸೆತ, ಪುಣೇ ವಾರಿಯರ್ಸ್ ವಿರುದ್ಧ
ವೈಭವ್ ಸೂರ್ಯವಂಶಿ (ಆರ್‌ಆರ್), 35 ಎಸೆತ, ಗುಜರಾತ್ ಟೈಟಾನ್ಸ್ ವಿರುದ್ಧ
ವೈಭವ್ ಸೂರ್ಯವಂಶಿ (ಆರ್‌ಆರ್), 36 ಎಸೆತ, ಎಸ್‌ಆರ್‌ಎಚ್ ವಿರುದ್ಧ
ಯೂಸುಫ್ ಪಠಾಣ್ (ಆರ್‌ಆರ್), 37 ಎಸೆತ, ಮುಂಬೈ ಇಂಡಿಯನ್ಸ್ ವಿರುದ್ಧ
ವೈಭವ್ ಸೂರ್ಯವಂಶಿ ಬರೆದ ದಾಖಲೆಗಳ ಪಟ್ಟಿ
- 1
- ಒಂದು ಐಪಿಎಲ್ ಇನ್ನಿಂಗ್ಸ್‌ನಲ್ಲಿ ಭಾರತೀಯ ಬ್ಯಾಟರ್‌ನಿಂದ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹೆಗ್ಗಳಿಕೆ ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡರು. ಇವರು ಎಸ್‌ಆರ್‌ಎಚ್ ವಿರುದ್ಧ 12 ಸಿಕ್ಸರ್ ಬಾರಿಸಿದ್ದಾರೆ.
- 2
- ಕೇವಲ 15 ಇನ್ನಿಂಗ್ಸ್‌ಗಳಲ್ಲಿ ಅತಿ ವೇಗವಾಗಿ 50 ಐಪಿಎಲ್ ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಬರೆದರು.
- 3
- ಕೇವಲ 473 ಎಸೆತಗಳಲ್ಲಿ ವೈಭವ್ ಸೂರ್ಯವಂಶಿ ಅತಿ ವೇಗವಾಗಿ 1000 ಟಿ20 ರನ್ ಸಿಡಿಸಿದ ದಾಖಲೆ ಬರೆದರು.
- 4
- 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ 3 ಐಪಿಎಲ್ ಅರ್ಧಶತಕ ಸಿಡಿಸಿದ ಏಕೈಕ ಬ್ಯಾಟರ್
- 5
- ಐಪಿಎಲ್ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ 4 ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications