15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ 15 ವರ್ಷದ ವೈಭವ್ ಸೂರ್ಯವಂಶಿ
ರಾಜಸ್ಥಾನ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ಪಂದ್ಯ ಆಡಿದ ವೈಭವ್ ಸೂರ್ಯವಂಶಿ ತಮ್ಮ ನೈಜ ಬ್ಯಾಟಿಂಗ್ ನಡೆಸಿದರು. ಕಲಾತ್ಮಕ ಬ್ಯಾಟಿಂಗ್ ಮಾಡಿದ ವೈಭವ್ ಅಭಿಮಾನಿಗಳನ್ನು ರಂಜಿಸಿದರು.
ಕಳೆದ ವರ್ಷದ ಐಪಿಎಲ್‌ನಲ್ಲಿ ಪದಾರ್ಪಣೆ ಮಾಡಿದ್ದ ವೈಭವ್ ಸೂರ್ಯವಂಶಿ, ವೇಗದ ಶತಕ ಬಾರಿಸಿ ಸುದ್ದಿಯಾಗಿದ್ದರು. ಹೀಗಾಗಿ ಇವರ ಬ್ಯಾಟಿಂಗ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಅಭಿಮಾನಿಗಳಿಗೆ ವೈಭವ್ ನಿರಾಸೆಯನ್ನು ಮಾಡಲಿಲ್ಲ. ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ ಬೌಂಡರಿ, ಸಿಕ್ಸರ್‌ಗಳನ್ನು ಬಾರಿಸಿ ಅಬ್ಬರಿಸಿದರು.

ಐಪಿಎಲ್‌ನಲ್ಲಿ ವೈಭವ್ ವೇಗದ ಅರ್ಧಶತಕ ಬಾರಿಸಿದರು. ಇವರು ಕೇವಲ 15 ಎಸೆತಗಳಲ್ಲಿ ಈ ಸಾಧನೆ ಮಾಡಿದರು. ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮಣೆ ಹಾಕಿದ್ದ ವೈಭವ್ ಅಬ್ಬರಿಸಿದರು. ಇವರ ಆಟಕ್ಕೆ ಬ್ರೇಕ್ ಹಾಕುವಲ್ಲಿ ಸಿಎಸ್‌ಕೆ ಬೌಲರ್‌ಗಳು ವಿಫಲರಾದರು. ಇವರು ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಇವರು ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 52 ರನ್ ಬಾರಿಸಿ ಔಟ್ ಆದರು.
ಈ ಮೂಲಕ ವೈಭವ್ ಸೂರ್ಯವಂಶಿ ರಾಜಸ್ಥಾನ ರಾಯಲ್ಸ್ ಪರ ಬ್ಯಾಟ್ ಮಾಡುವಾಗ ವೇಗದ ಅರ್ಧಶತಕ ಬಾರಿಸಿದ ಎರಡನೇ ಬ್ಯಾಟರ್ ಎಂಬ ಕೀರ್ತಿ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಯಶಸ್ವಿ ಜೈಸ್ವಾಲ್ ಅವರು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಕೆಕೆಆರ್ ವಿರುದ್ಧ 2023ರಲ್ಲಿ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದು ಐಪಿಎಲ್ ಇತಿಹಾಸದ ವೇಗದ ಅರ್ಧಶತಕವಾಗಿದೆ.
ಐಪಿಎಲ್‌ನಲ್ಲಿ ರಾಜಸ್ಥಾನ ಪರ ಅತಿವೇಗದ ಅರ್ಧಶತಕ
13, ಯಶಸ್ವಿ ಜೈಸ್ವಾಲ್ ವಿರುದ್ಧ ಕೆಕೆಆರ್, 2023
15, ವೈಭವ್ ಸೂರ್ಯವಂಶಿ ವಿರುದ್ಧ ಸಿಎಸ್‌ಕೆ, 2026
17, ವೈಭವ್ ಸೂರ್ಯವಂಶಿ ವಿರುದ್ಧ ಜಿಟಿ, 2025
18, ಜೋಸ್ ಬಟ್ಲರ್ ವಿರುದ್ಧ ಡಿಸಿ, 2018
ವೈಭವ್ ಸೂರ್ಯವಂಶಿ ಈಗ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರು ಯೂಸುಫ್ ಪಠಾಣ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ, ಅವರು 15 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಭಾರತದ ಅತಿ ವೇಗದ ಅರ್ಧಶತಕ
13, ಯಶಸ್ವಿ ಜೈಸ್ವಾಲ್
14, ಕೆಎಲ್ ರಾಹುಲ್
15, ಯೂಸುಫ್ ಪಠಾಣ್
15, ವೈಭವ್ ಸೂರ್ಯವಂಶಿ
16, ಸುರೇಶ್ ರೈನಾ
ಪಂದ್ಯದ ಫಲಿತಾಂಶ
19ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸಿಎಸ್‌ಕೆ 127 ರನ್‌ಗಳಿಗೆ ಆಲೌಟ್ ಆಯಿತು. ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ 12.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128 ರನ್ ಸೇರಿಸಿ ಜಯ ಸಾಧಿಸಿತು. ಈ ಮೂಲಕ ರಾಜಸ್ಥಾನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications