Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇನ್ನೆಷ್ಟು ದಿನ ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವುದಿಲ್ಲ; ಆ ಟೈಮ್‌ ಸಹ ಬಂದೆ ಬರುತ್ತೇ

ಟೀಮ್ ಇಂಡಿಯಾ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಭಾರತ, ಇಂಗ್ಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಈಗಾಗಲೇ ಈ ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದು, ಎಲ್ಲರ ಚಿತ್ತ ಮ್ಯಾಂಚೆಸ್ಟರ್‌ನಲ್ಲಿ ನಡೆಯುವ ಎರಡನೇ ಪಂದ್ಯದ ಮೇಲೆ ನೆಟ್ಟಿದೆ. ಈ ವೇಳೆ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡುವಂತೆ ಕೂಗು ಹೆಚ್ಚಾಗಿದೆ.

ಟೀಮ್ ಇಂಡಿಯಾ ಇಂಗ್ಲೆಂಡ್, ಐರ್ಲೆಂಡ್‌ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದಾಗ ತಂಡದಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡಲಾಗಿತ್ತು. ಆದರೆ ಇವರು ಐರ್ಲೆಂಡ್‌ನಲ್ಲಿ ಪದಾರ್ಪಣೆ ಮಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಭಾರತ ಈ ಸರಣಿಯಲ್ಲಿ 2-0 ಸೋಲು ಕಂಡಿತು. ಈ ಸರಣಿಯಲ್ಲಿ ಯುವ ಆಟಗಾರನಿಗೆ ಅವಕಾಶ ಲಭಿಸಬಹುದು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದರು.

Vaibhav Sooryavanshi

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಇವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಲಭಿಸುತ್ತದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇವರಿಗೆ ಮೊದಲ ಪಂದ್ಯದಲ್ಲಿ ಸ್ಥಾನ ಲಭಿಸಲಿಲ್ಲ. ಈಗ ಅಭಿಮಾನಿಗಳು ಇವರ ಆಟವನ್ನು ನೋಡಲು ಕಾತುರರಾಗಿದ್ದಾರೆ. ಮ್ಯಾಂಚೆಸ್ಟರ್‌ನಲ್ಲಿ ಅವಕಾಶ ಲಭಿಸುತ್ತದಾ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಮೂರು ಇನಿಂಗ್ಸ್‌ಗಳಲ್ಲಿ ಕೇವಲ 6 ರನ್‌

ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್‌ ಕಳೆದ ಮೂರು ಇನಿಂಗ್ಸ್‌ಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದಾರೆ. ಇವರ ಬದಲಿಗೆ ವೈಭವ್ ಸೂರ್ಯವಂಶಿ ಅವರಿಗೆ ಆರಂಭಿಕರಾಗಿ ಅವಕಾಶ ನೀಡಬೇಕು ಎಂಬ ಕೂಗು ಹೆಚ್ಚಾಗಿ ಕೇಳಿಸಿಕೊಳ್ಳುತ್ತಿದೆ.

ವೈಭವ್ ಸೂರ್ಯವಂಶಿಗೆ ಅವಕಾಶ ನೀಡಿದ್ರೆ ಪ್ಯಾಂಟ್‌ ಬಿಚ್ಚಿ ಕೈಗೆ ನೀಡುತ್ತಿದ್ದ; ರವಿ ಶಾಸ್ತ್ರಿ ಹೇಳಿಕೆ ವೈರಲ್

ವೈಭವ್ ಸೂರ್ಯವಂಶಿಗೆ ಅವಕಾಶ ನೀಡಿದ್ರೆ ಪ್ಯಾಂಟ್‌ ಬಿಚ್ಚಿ ಕೈಗೆ ನೀಡುತ್ತಿದ್ದ; ರವಿ ಶಾಸ್ತ್ರಿ ಹೇಳಿಕೆ ವೈರಲ್

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಜುಲೈ 1 ರಂದು ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಸಂಜು ಕೇವಲ ಒಂದು ರನ್ ಗಳಿಸಿ ಪೆವಿಲಿಯನ್‌ ಸೇರಿದರು. ಇವರು ಕಳೆದ ಮೂರು ಇನಿಂಗ್ಸ್‌ಗಳಲ್ಲಿ ಒಟ್ಟಾರೆಯಾಗಿ 6 ರನ್ ಬಾರಿಸಿದ್ದಾರೆ. ಇವರು ಲಯಕ್ಕೆ ಮರಳದೇ ಇರುವುದು ನಿಶ್ಚಿತವಾಗಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಐಪಿಎಲ್‌ನಲ್ಲಿ ವೈಭವ್ ಸ್ಪೋಟಕ ಬ್ಯಾಟಿಂಗ್

ವೈಭವ್ ಸೂರ್ಯವಂಶಿ ಅವರಿಗೆ ತಂಡದಲ್ಲಿ ಸ್ಥಾನ ನೀಡಬೇಕು ಎಂದು ಮಾಜಿ ಕ್ರಿಕೆಟ್‌ ಆಟಗಾರರು ಸಹ ಧ್ವನಿ ಎತ್ತಿದ್ದಾರೆ. ರವಿ ಶಾಸ್ತ್ರಿ ಹಾಗೂ ಸುನಿಲ್‌ ಗವಾಸ್ಕರ್ ಅವರು ಇವರಿಗೆ ಅವಕಾಶ ನೀಡಿ ಎಂದು ತಿಳಿಸಿದ್ದಾರೆ. ಇನ್ನು ಇತ್ತೀಚಿಗೆ ಭಾರತದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ವೈಭವ್ ಸೂರ್ಯವಶಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಧಾರವಾಗಿದ್ದರು. ಕಳೆದ ಆವೃತ್ತಿಯಲ್ಲಿ ವೈಭವ್ ಆಡಿದ 16 ಪಂದ್ಯಗಳಲ್ಲಿ 776 ರನ್‌ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ಸಹ ಪಡೆದಿದ್ದರು. ಇವರ ಅಬ್ಬರದ ಆಟಕ್ಕೆ ಮನಸೋತ ಬಿಸಿಸಿಐ ಇವರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ನೀಡಿತು.

ಕೊನೆಯ ಐದು ನಿಮಿಷದಲ್ಲಿ ಅಬ್ಬರಿಸಿದ ಬೆಲ್ಜಿಯಂಗೆ ಪೆನಾಲ್ಟಿ ವರ

ಕೊನೆಯ ಐದು ನಿಮಿಷದಲ್ಲಿ ಅಬ್ಬರಿಸಿದ ಬೆಲ್ಜಿಯಂಗೆ ಪೆನಾಲ್ಟಿ ವರ

ಭಾರತ ತಂಡವನ್ನು ಸೇರುವ ಮುನ್ನ ವೈಭವ್ ಸೂರ್ಯವಂಶಿ ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭಾರತ 'ಎ' ತಂಡದ ಪರ ಕಣಕ್ಕೆ ಇಳಿದರು. ಇವರು ಲೀಗ್‌ ಹಂತದ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಆದರೆ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಸಾಧನೆ ಮಾಡಿದರು. ಇವರ ಸ್ಫೋಟಕ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ. ಮ್ಯಾಂಚೆಸ್ಟರ್‌ನಲ್ಲಿ ಇವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಲಭಿಸುತ್ತದಾ ಎಂಬ ಪ್ರಶ್ನೆಗೆ ಶನಿವಾರದ ವರೆಗೆ ಕಾಯಲೇ ಬೇಕು.

Story first published: Thursday, July 2, 2026, 20:25 [IST]
Other articles published on Jul 2, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+