Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಆಯ್ಕೆ ಮಾಡಿ

ವೈಭವ್ ಸೂರ್ಯವಂಶಿ ಅವರು ಇತ್ತೀಚಿಗೆ 15 ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇವರನ್ನು ಇಂಗ್ಲೆಂಡ್‌ ವಿರುದ್ಧ ಸರಣಿಗೆ ಆಯ್ಕೆ ಮಾಡಿ ಎಂದು ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಮೈಕೆಲ್ ವಾನ್ ಬಿಸಿಸಿಐಗೆ ಒತ್ತಾಯಿಸಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ರಾಜಸ್ಥಾನ್‌ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಇವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ ರಾಜಸ್ಥಾನ 8 ವಿಕೆಟ್‌ ಜಯ ಸಾಧಿಸಿತು. ಈ ಮೂಲಕ ಆರ್‌ಆರ್‌ ಐಪಿಎಲ್‌ 19ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 17 ಎಸೆತಗಳಲ್ಲಿ 52 ರನ್‌ ಬಾರಿಸಿದರು. ಈ ಪಂದ್ಯವನ್ನು ಆರ್‌ಆರ್ 12.1 ಓವರ್‌ಗಳಲ್ಲಿ ಗೆದ್ದುಕೊಂಡಿತು.

Vaibhav Sooryavanshi

ರಾಜಸ್ಥಾನ ರಾಯಲ್ಸ್‌ ಭರ್ಜರಿ ಜಯ ಸಾಧಿಸಿದ ಬಳಿಕ ಮಾತನಾಡಿರುವ ಮೈಕೆಲ್ ವಾನ್‌ ವೈಭವ್ ಆಟದ ಗುಣಗಾನ ಮಾಡಿದ್ದಾರೆ. ಇವರನ್ನು ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ಆಯ್ಕೆ ಮಾಡಿ. ಈ ಯುವ ಆಟಗಾರ ಹಲವು ಪರಿಸ್ಥಿತಿಗಳಲ್ಲಿ ಆಡಿ ತನ್ನನ್ನು ಸಾಬೀತು ಪಡಿಸಿಕೊಂಡಿದ್ದಾರೆ. ಹೀಗಾಗಿ ಅವರನ್ನು ಮುಂದಿನ ಸರಣಿಗೆ ಆಯ್ಕೆ ಮಾಡಿ ಎಂದು ತಿಳಿಸಿದ್ದಾರೆ.

ಯಾವಾಗ ವೈಭವ್ ಭಾರತಕ್ಕೆ ಪದಾರ್ಪಣೆ ಮಾಡುತ್ತಾರೆ ಎಂಬುದನ್ನು ಕಾಯುತ್ತಿದ್ದೇನೆ. ಇನ್ನೇನು ಕೆಲವೇ ದಿನಗಳಲ್ಲಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಬೆಳೆಸಲಿದೆ. ಈ ವೇಳೆ ವೈಟ್ ಬಾಲ್‌ ಸರಣಿಗಳು ನಡೆಯಲಿವೆ. ನಾನು ಭಾರತೀಯ ಕ್ರಿಕೆಟ್‌ ಆಟಗಾರನಾಗಿದ್ದರೆ ಅವರನ್ನು ಆಯ್ಕೆ ಮಾಡುತ್ತಿದ್ದೇ. ಇವರನ್ನು ತಂಡದಲ್ಲಿ ಆಯ್ಕೆ ಮಾಡಿ. ಅಲ್ಲದೆ ಎರಡು ಮೂರು ಪಂದ್ಯಗಳನ್ನು ಆಡಿಸಿ ಎಂದು ಮೈಕೆಲ್ ವಾನ್ ಆಶಿಸಿದ್ದಾರೆ.

Vaibhav Sooryavanshi

ಕಳೆದ ಋತುವಿನಲ್ಲಿ, ವೈಭವ್ ಸೂರ್ಯವಂಶಿ ತುಂಬಾ ಬೇಗನೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮೊಹಮ್ಮದ್ ಕೈಫ್ ಹೇಳಿದ್ದರು. ಈಗ ಇದೇ ಹೇಳಿಕೆಗೆ ಪೂರಕವಾಗಿ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಕೈಫ್‌, ಕೆಲವು ಆರಂಭಿಕ ಪ್ರದರ್ಶನಗಳ ನಂತರ ಸೂರ್ಯವಂಶಿ ಅವರನ್ನು ಅತಿಯಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಆರಂಭದಲ್ಲಿ ಭಾವಿಸಿದ್ದೆ ಎಂದು ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ಬಿಹಾರ ಮೂಲದ ಬ್ಯಾಟ್ಸ್‌ಮನ್ ಈಗ ತಮ್ಮ ವೃತ್ತಿಜೀವನದ ಮುಂದಿನ ಹೆಜ್ಜೆ ಇಡಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.

ವೈಭವ್ ಸೂರ್ಯವಂಶಿ ಸಾಧನೆ

ವೈಭವ್ ಸೂರ್ಯವಂಶಿ ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಆಡಿದ ಮೊದಲ ಆವೃತ್ತಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಅಬ್ಬರಿಸಿದ್ದರು. ಅಲ್ಲದೆ ಗುಜರಾತ್ ಟೈಟಾನ್ಸ್‌ ವಿರುದ್ಧ 35 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದ್ದರು. ಇವರ ಅಬ್ಬರದ ಪ್ರದರ್ಶನ ಅಂಡರ್ 19 ವಿಶ್ವಕಪ್‌ನಲ್ಲಿ ಮುಂದುವರೆದಿತ್ತು. ಇವರು ಅಂಡರ್ 19 ವಿಶ್ವಕಪ್‌ನಲ್ಲಿ ಆಡಿದ 7 ಪಂದ್ಯಗಳಲ್ಲಿ 62ರ ಸರಾಸರಿಯಲ್ಲಿ 439 ರನ್‌ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 3 ಅರ್ಧಶತಕಗಳು ಸೇರಿವೆ.

Story first published: Wednesday, April 1, 2026, 9:19 [IST]
Other articles published on Apr 1, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+