For Quick Alerts
ALLOW NOTIFICATIONS  
For Daily Alerts
 

ವೈಭವ್ ಸೂರ್ಯವಂಶಿ ವಿಜಯ್‌ ಹಜಾರೆ ಪಂದ್ಯಕ್ಕೆ ಗೈರು: ಇಲ್ಲಿದೆ ಕಾರಣ

ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ ಅಂಗಳದಲ್ಲಿ ವೈಭವ್‌ ಸೂರ್ಯವಂಶಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಅಂಡರ್‌ 19 ಕ್ರಿಕೆಟ್‌, ಐಪಿಎಲ್‌, ವಿವಿಧ ವಯೋಮತಿಯ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ತಮ್ಮ ಬಿರುಸಿನ ಬ್ಯಾಟಿಂಗ್‌ ಫಲವಾಗಿ ಇವರು ಈಗ ವಿಶ್ವ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದ್ದಾರೆ. ಇವರು ವಿಜಯ್‌ ಹಜಾರೆ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೂ ಅಬ್ಬರದ ಶತಕ ಬಾರಿಸಿ ಮಿಂಚಿದ್ದರು. ಆದರೆ ಇವರು ಎರಡನೇ ಪಂದ್ಯದಲ್ಲಿ ಅಂಗಳಕ್ಕೆ ಇಳಿಯಲಿಲ್ಲ. ಇದಕ್ಕೆ ಕಾರಣ ಏನು? ಎಂಬ ಬಗ್ಗೆ ವರದಿ ಇಲ್ಲಿದೆ.

ರಾಂಚಿಯಲ್ಲಿ ಬಿಹಾರ್‌ ಹಾಗೂ ಮಣಿಪುರ ತಂಡಗಳು ಕಾದಾಟ ನಡೆಸಿದವು. ಈ ವೇಳೆ ವೈಭವ್ ಸೂರ್ಯವಂಶಿ ಕಣಕ್ಕೆ ಇಳಿಯಲಿಲ್ಲ. ಇವರು ಮೈದಾನಕ್ಕೆ ಏಕೆ ಇಳಿಯಲಿಲ್ಲ ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಈಗ ಇದಕ್ಕೆ ಉತ್ತರ ಸಿಕ್ಕಿದೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ ವೈಭವ್‌ ಸೂರ್ಯವಂಶಿ ಅವರಿಗೆ ಲಭಿಸಿತ್ತು. ಇದನ್ನು ಸ್ವೀಕರಿಸಲು ಅವರು ನವದೆಹಲಿ ತಲುಪಿದ್ದರು.

Vaibhav Suryavanshi Misses Vijay Hazare Match to Receive Pradhan Mantri Rashtriya Bal Puraskar

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿದ್ದಾರೆ. ಅದಕ್ಕಾಗಿಯೇ ಅವರು ಬಿಹಾರದ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳಲ್ಲಿ ಆಡಿಲ್ಲ. ಈ ವೇಳ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಸಾಧಾರಣ ಪ್ರತಿಭೆ ಶೌರ್ಯ, ಕಲೆ ಮತ್ತು ಸಂಸ್ಕೃತಿ, ಪರಿಸರ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಮಾಜಿಕ ಸೇವೆ ಮತ್ತು ಕ್ರೀಡೆಯಂತಹ ವಿವಿಧ ಕ್ಷೇತ್ರಗಳಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದೆ. ನೀವೆಲ್ಲರೂ ಶ್ಲಾಘನೀಯ ಕೆಲಸ ಮಾಡಿದ್ದೀರಿ ಎಂದು ಹೇಳಿದ್ದಾರೆ.

ಮೊದಲ ಪಂದ್ಯದಲ್ಲಿ ಅಬ್ಬರ

ವಿಜಯ್ ಹಜಾರೆ ಟ್ರೋಫಿಯಲ್ಲಿ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧ ಅಮೋಘ ಶತಕವನ್ನು ಬಾರಿಸಿದ್ದರು. ಇವರು ಈ ಪಂದ್ಯದಲ್ಲಿ 84 ಎಸೆತಗಳಲ್ಲಿ 190 ರನ್‌ ಬಾರಿಸಿದ್ದರು. ಈ ಇನಿಂಗ್ಸ್‌ನಲ್ಲಿ 16 ಬೌಂಡರಿಗಳು ಮತ್ತು 15 ಸಿಕ್ಸರ್‌ ಸೇರಿವೆ. ಇವರು ಅಂಡರ್‌ 19 ಭಾರತ ತಂಡದ ಪರವಾಗಿಯೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ಕಳೆದ ವರ್ಷದ ಐಪಿಎಲ್‌ನಲ್ಲಿ ಇವರು ಗುಜರಾತ್ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ವೈಭವ್ 35 ಎಸೆತಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದರು. ಇವರು ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಆಡಿದ ಏಳು ಪಂದ್ಯಗಳಲ್ಲಿ 252 ರನ್ ಬಾರಿಸಿದ್ದರು.

ಎರಡನೇ ಪಂದ್ಯದಲ್ಲಿ ಮಣಿಪುರ ವಿರುದ್ಧ ಮೊದಲು ಬ್ಯಾಟ್ ಮಾಡಿದ ಬಿಹಾರ 50 ಓವರ್‌ಗಳಲ್ಲಿ 284 ರನ್‌ಗಳಿಗೆ ಆಲೌಟ್ ಆಯಿತು. ಮಂಗಲ್ ಮಹೂರ್ 65, ಆಕಾಶ್ ರಾಜ್ 71 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಾಯದಿಂದ 75 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು.

Story first published: Friday, December 26, 2025, 15:26 [IST]
Other articles published on Dec 26, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+