U19 Asia Cup: ಭಾರತ ತಂಡದಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ: ಈ ಪ್ಲೇಯರ್‌ಗೆ ಪಟ್ಟ
ಈಗಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ತಮ್ಮ ಪುಟ್ಟು ಪುಟ್ಟ ಹೆಜ್ಜೆ ಗುರುತುಗಳ ಮೂಲಕ ಸದ್ದು ಮಾಡಿರುವ ವೈಭವ್ ಸೂರ್ಯವಂಶಿ, ಅಂಡರ್ 19 ಏಷ್ಯಾ ಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ, ಇವರು ತಂಡದ ಒಬ್ಬ ಪ್ಲೇಯರ್ ಆಗಿ ಮಾತ್ರ ಆಡಲಿದ್ದಾರೆ. ತಂಡದ ಚುಕ್ಕಾಣಿಯನ್ನು ಆಯುಷ್ ಮ್ಹಾತ್ರೆ ವಹಿಸಿಕೊಂಡಿದ್ದಾರೆ. ಅಂಡರ್ 19 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ.
ಶುಕ್ರವಾರ ಬಿಸಿಸಿಐ ಆಯ್ಕೆ ಸಮಿತಿ ಅಂಡರ್-19 ಏಷ್ಯಾ ಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿದೆ. ಅಂಡರ್ 19 ಏಷ್ಯಾ ಕಪ್ ಡಿಸೆಂಬರ್ 12 ರಿಂದ ದುಬೈನಲ್ಲಿ ಆರಂಭವಾಗಿದೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ಆಯುಷ್ ಮಾತ್ರೆ ಮುನ್ನಡೆಸಲಿದ್ದಾರೆ. ಇನ್ನು ವಿಹಾನ್ ಮಲ್ಹೋತ್ರ ಅವರಿಗೆ ಉಪನಾಯಕತ್ವದ ಜವಾಬ್ದಾರಿ ನೀಡಿಲಾಗಿದೆ. ಈ ತಂಡದಲ್ಲಿ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿ ಅವರಿಗೆ ಸ್ಥಾನ ನೀಡಲಾಗಿದೆ. ಇವರು ಮತ್ತೊಮ್ಮೆ ಭಾರತದ ಪರ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಇವರು ಹಬ್ಬದೂಟವನ್ನು ಉಣಬಡಿಸಲಿದ್ದಾರೆ.

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಸ್ಥಾನ ಪಡೆದ ಇನ್ನು 2 ತಂಡಗಳನ್ನು ಇನ್ನು ಬಹಿರಂಗ ಪಡಿಸಿಲ್ಲ. ಇನ್ನೊಂದು ಗುಂಪಿನಲ್ಲಿ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಶ್ರೀಲಂಕಾ ತಂಡಗಳು ಸ್ಥಾನ ಪಡೆದಿದ್ದು, ಇನ್ನೊಂದು ತಂಡದ ಘೋಷಣೆ ಆಗಬೇಕಿದೆ.
ಲೀಗ್ ಫೈಟ್
ಡಿಸೆಂಬರ್‌ನಲ್ಲಿ ನಡೆಯಲಿರುವ ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಭಾರತ ಈ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕಾಣುತ್ತಿದೆ. ಲೀಗ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಲೀಗ್ ಹಂತದಲ್ಲಿ ಕಾದಾಟವನ್ನು ನಡೆಸಲಿವೆ. ಈ ವೇಳೆ ಈ ಪಂದ್ಯ ಎಲ್ಲರ ಗಮನ ಸೆಳೆದಿದೆ. ಟೀಮ್ ಇಂಡಿಯಾದ ಭರವಸೆಯ ಆಟಗಾರ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಅಭಿಮಾನಿಗಳಿಗೆ ಹಬ್ಬದೂಟವನ್ನು ಹಾಕಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಅಂಡರ್ 19 ಏಷ್ಯಾ ಕಪ್‌ಗೆ ಭಾರತ ತಂಡ: ಆಯುಷ್ ಮ್ಹಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ (ಉಪನಾಯಕ), ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂದು, ಹರ್ವಂಶ್ ಸಿಂಗ್, ಯುವರಾಜ್ ಗೋಹಿಲ್, ಕಾನಿಷ್ಕ್ ಚೌಹಾಣ್, ಖಿಲಾನ್ ಎ. ಪಟೇಲ್, ನಮನ್ ಪುಷ್ಪಕ್, ಡಿ. ದೀಪೇಶ್, ಹೆನಿಲ್ ಪಟೇಲ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್, ಆರನ್ ಜಾರ್ಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications