Vaibhav Suryavanshi: 8 ಸಿಕ್ಸರ್ ಸಿಡಿಸಿ ದಾಖಲೆ ಬರೆದ ವೈಭವ್
ಈಗಾಗಲೇ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಅಬ್ಬರ ನಡೆಸುತ್ತಿರುವ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ, ಅಂಡರ್ 19 ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಅಬ್ಬರ ನಡೆಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ನಡೆಯುತ್ತಿರುವ ಯೂತ್ ಟೆಸ್ಟ್‌ನಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ. ಆಸ್ಟ್ರೇಲಿಯಾ ಭರ್ಜರಿ ತಿರುಗೇಟು ನೀಡಿದ ವೈಭವ್ ಅಬ್ಬರಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನವಾದ ಮಂಗಳವಾರ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ಪಡೆಯಿತು. ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 69 ರನ್ ಆಗುಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ತಂಡಕ್ಕೆ ವೈಭವ್ ಸೂರ್ಯವಂಶಿ ಹಾಗೂ ವೇದಾಂತ್ ತ್ರಿವೇದಿ ಜೋಡಿ ಭರ್ಜರಿ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು. ಈ ಜೋಡಿಗೆ ಕಟ್ಟಿ ಹಾಕುವಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ವಿಫಲರಾದರು.

3ನೇ ವಿಕೆಟ್‌ಗೆ ವೈಭವ್ ಹಾಗೂ ವೇದಾಂತ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಅಲ್ಲದೆ ಸುಮಾರು 22 ಓವರ್ ವಿಕೆಟ್ ಬೀಳದಂತೆ ಕಾಯ್ದುಕೊಂಡು ಬ್ಯಾಟ್ ನಡೆಸಿ 159 ರನ್ ಸೇರಿಸಿತು. ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಆದ ಬ್ಯಾಟಿಂಗ್ ಶೈಲಿಯಿಂದ ಅಭಿಮಾನಿಗಳ ಮನ ಗೆದ್ದಿರುವ ವೈಭವ್ ಸೂರ್ಯವಂಶಿ ಟೆಸ್ಟ್‌ನಲ್ಲೂ ಅದೇ ಧಾಟಿಯಲ್ಲಿ ಬ್ಯಾಟಿಂಗ್ ಮಾಡಿದರು. ಇವರು ಮೊದಲ ಇನಿಂಗ್ಸ್‌ನಲ್ಲಿ 86 ಎಸೆತಗಳಲ್ಲಿ 9 ಬೌಂಡರಿ 8 ಸಿಕ್ಸರ್ ಸಹಾಯದಿಂದ 113 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರು ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೊದಲ ಶತಕ ಸಿಡಿಸಿ ಅಬ್ಬರಿಸಿದರು.
ವೈಭವ್ ದಾಖಲೆ
ಈ ಕ್ಲಾಸಿಕ್ ಇನಿಂಗ್ಸ್‌ನೊಂದಿಗೆ ವೈಭವ್ ಮತ್ತೊಂದು ದಾಖಲೆ ಬರೆದರು. ಅಂಡರ್ 19 ಟೆಸ್ಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆಯನ್ನು ಸಹ ತಮ್ಮದಾಗಿಸಿಕೊಂಡರು. ಇವರ ಖಾತೆಯಲ್ಲಿ ಸದ್ಯ 13 ಸಿಕ್ಸರ್‌ಗಳು ಇವೆ. ವೈಭವ್, 9 ಸಿಕ್ಸರ್ ಬಾರಿಸಿದ್ದ ಆಯುಷ್ ಮಾತ್ರೆ ಅವರ ದಾಖಲೆಯನ್ನು ಅಳಿಸಿ ಹಾಕಿದರು.
ವೈಭವ್ ಅವರಿಗೆ ಭರ್ಜರಿ ಸಾಥ್ ನೀಡಿದ್ದ ವೇದಾಂತ್ ಸಹ ಮೂರಂಕಿ ಮುಟ್ಟಿ ಸಂಭ್ರಮಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications