RR vs CSK: ಗೆಲುವಿನೊಂದಿಗೆ ಲೀಗ್‌ಗೆ ವಿದಾಯ ಹೇಳಿದ ರಾಜಸ್ಥಾನ
ಯುವ ಆಟಗಾರ ವೈಭವ್ ಸೂರ್ಯಂವಶಿ ಬಾರಿಸಿದ ಅರ್ಧಶತಕದ ಬಲದಿಂದ ರಾಜಸ್ಥಾನ ರಾಯಲ್ಸ್ 18ನೇ ಆವೃತ್ತಿಯ 62ನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿತು. ಈ ಮೂಲಕ ರಾಯಲ್ಸ್ ತಂಡ ಈ ಆವೃತ್ತಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಗೆಲುವು ದಾಖಲಿಸಿತು.
ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 187 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್ 17.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು.

ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ತಂಡದ ಆರಂಭ ಸಾಧಾರಣವಾಗಿತ್ತು. ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್ 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 36 ರನ್ ಬಾರಿಸಿ ಕಾಂಬೋಜ್ ಎಸೆತದಲ್ಲಿ ಬೋಲ್ಡ್ ಆದ್ರು.
ವೈಭವ್ ಅರ್ಧಶತಕ
ಎರಡನೇ ವಿಕೆಟ್‌ಗೆ ವೈಭವ್ ಸೂರ್ಯವಂಶಿ ಹಾಗೂ ಸಂಜು ಸ್ಯಾಮ್ಸನ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲರ್‌ಗಳನ್ನು ಕಾಡಿದರು. ಈ ಜೋಡಿ 59 ಎಸೆತಗಳಲ್ಲಿ 98 ರನ್ ಸಿಡಿಸಿತು. ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಸಂಜು 41 ರನ್‌ಗಳಿಗೆ ಔಟ್ ಆದರು. ಇನ್ನು ಆರಂಭಿಕ ವೈಭವ್ ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶಿಸಿದರು. ಇವರು 4 ಬೌಂಡರಿ, 4 ಸಿಕ್ಸರ್ ಸಹಾಯದಿಂದ 57 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ರಿಯಾನ್ ಪರಾಗ್ ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು.
ಕಳೆದ ಕೆಲವು ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ಹತ್ತಿರಕ್ಕೆ ತಂದು ನಿಲ್ಲಿಸಿ ಔಟ್ ಆಗುತ್ತಿದ್ದ ಧ್ರುವ್ ಜುರೇಲ್ ಚೆನ್ನೈ ವಿರುದ್ಧದ ಅಜೇಯ 31 ರನ್ ಬಾರಿಸಿದರು. ಶಿಮ್ರೋನ್ ಹೆಟ್ಮೆಯರ್ ಅಜೇಯ 12 ರನ್ ಸಿಡಿಸಿ ಗೆಲುವಿನಲ್ಲಿ ಮಿಂಚಿದರು.
ಕಳಪೆ ಆರಂಭ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭ ಕಳಪೆಯಾಗಿತ್ತು. ಡ್ವೇನ್ ಕಾನ್ವೆ, ಉರ್ವಿಲ್ ಪಟೇಲ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ಆರಂಭಿಕರಾದ ಆಯುಷ್ ಮಾತ್ರೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 8 ಬೌಂಡರಿ, 1 ಸಿಕ್ಸರ್ ಸಹಾಯಿಂದ 43 ರನ್ ಬಾರಿಸಿ ಔಟ್ ಆದರು. ಸಿಎಸ್‌ಕೆ ಪವರ್ ಪ್ಲೇನಲ್ಲಿ 3 ವಿಕೆಟ್ ನಷ್ಟಕ್ಕೆ 68 ರನ್ ಕಲೆ ಹಾಕಿತು. ಆಯುಷ್ ಮಾತ್ರೆ ಹಾಗೂ ಅಶ್ವಿನ್ ಜೋಡಿ ಮೂರನೇ ವಿಕೆಟ್‌ಗೆ 24 ಎಸೆತಗಳಲ್ಲಿ 56 ರನ್ ಸೇರಿಸಿತು.

ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ರವಿಚಂದ್ರನ್ ಅಶ್ವಿನ್ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ 13 ರನ್ ಬಾರಿಸಿ ಔಟ್ ಆದರು. ರವೀಂದ್ರ ಜಡೇಜಾ (1) ರನ್ ಕಲೆ ಹಾಕುವಲ್ಲಿ ವಿಫಲರಾದರು. ಆರನೇ ವಿಕೆಟ್‌ಗೆ ಡೇವಾಲ್ಡ್ ಬ್ರೇವಿಸ್ ಹಾಗೂ ಶಿವಂ ದುಬೆ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ 78 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಆಧಾರವಾಯಿತು. ಈ ಜೋಡಿ 36 ಎಸೆತಗಳಲ್ಲಿ 59 ರನ್ ಸೇರಿಸಿತು. ಡೇವಲ್ಡ್ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ 42 ರನ್ ಬಾರಿಸಿ ಔಟ್ ಅದರು.
ಶಿವಂ ದುಬೆ ಹಾಗೂ ಮಹೇಂದ್ರ ಸಿಂಗ್ ಧೋನಿ ಜೋಡಿ 33 ಎಸೆತಗಳಲ್ಲಿ 43 ರನ್ ಸೇರಿಸಿ ತಂಡದ ಮೊತ್ತವನ್ನು ಹಿಗ್ಗಿಸಿತು. ರಾಜಸ್ಥಾನ ಪರ ಯುಧವೀರ್ ಸಿಂಗ್ ಹಾಗೂ ಆಕಾಶ್ ಮಧ್ವಾಲ್ ತಲಾ ಮೂರು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications