Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND U19 vs SA U19: ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಚಿತ್ತ

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಪಂದ್ಯ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಗೂ ಮುನ್ನ ಭಾರತದ ಅಂಡರ್ 19 ತಂಡ ದಕ್ಷಿಣ ಆಫ್ರಿಕಾ ಅಂಡರ್ 19 ತಂಡವನ್ನು ಎದುರಿಸಲಿದೆ. ಉಭಯ ತಂಡಗಳ ಕಿರಿಯರ ತಂಡ ಒಟ್ಟು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಈ ಬಾರಿ ಭಾರತ ತಂಡವನ್ನು ಭರವಸೆಯ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ ಮುನ್ನಡೆಸಲಿದ್ದಾರೆ. ಈ ಪಂದ್ಯದ ಸಂಪೂರ್ಣ ಚಿತ್ರಣ ಇಲ್ಲಿದೆ.

ಟೀಮ್ ಇಂಡಿಯಾದ ನಾಯಕ ಆಯುಷ್ ಮಾತ್ರೆ ಅವರು ಗಾಯಕ್ಕೆ ತುತ್ತಾಗಿದ್ದರಿಂದ ಈ ಬಾರಿ ತಂಡವನ್ನು ವೈಭವ್ ಸೂರ್ಯವಂಶಿ ಮುನ್ನಡೆಸಲಿದ್ದಾರೆ. ಈಗಾಗಲೇ ವೈಭವ್, ಹಲವು ವಯೋಮಿತಿಯ ಕ್ರಿಕೆಟ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಅಲ್ಲದೆ ದೇಶೀಯ ವಿಜಯ್ ಹಜಾರೆ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಅಬ್ಬರ ನಡೆಸಿದ್ದಾರೆ. ಇವರು ಮೊದಲ ಬಾರಿಗೆ ಭಾರತ ಕಿರಿಯರ ತಂಡವನ್ನು ಮುನ್ನಡೆಸಲಿದ್ದಾರೆ.

Vaibhav Suryavanshi to Lead India U19 vs South Africa U19 Series Details and Squad Inside

ಭಾರತ ಅಂಡರ್ 19 ಹಾಗೂ ದಕ್ಷಿಣ ಆಫ್ರಿಕಾ ಅಂಡರ್ 19 ನಡುವಣ ಪಂದ್ಯ ಮುಂಬರುವ ವಿಶ್ವಕಪ್‌ ದೃಷ್ಟಿಯಿಂದ ಮಹತ್ವ ಪಡೆದಿದೆ. ಏಕದಿನ ಪಂದ್ಯಗಳಲ್ಲಿ ವೈಭವ್ ಸೂರ್ಯವಂಶಿ ಹೇಗೆ ಆಡುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇತ್ತೀಚಿಗೆ ನಡೆದ ಅಂಡರ್ 19 ಏಷ್ಯಾಕಪ್‌ ಪಂದ್ಯಾವಳಿಯಲ್ಲಿ ವೈಭವ್‌ ಯುಎಇ ವಿರುದ್ಧ ಅಬ್ಬರದ ಬ್ಯಾಟಿಂಗ್‌ ನಡೆಸಿದ್ದರು. ಅಲ್ಲದೆ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಅರುಣಾಚಲ್ ಪ್ರದೇಶ ವಿರುದ್ಧದ ಪಂದ್ಯದಲ್ಲೂ ಶತಕ ಸಿಡಿಸಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ.

ಭಾರತ ಅಂಡರ್‌-19 ಹಾಗೂ ದಕ್ಷಿಣ ಆಫ್ರಿಕಾ ಅಂಡರ್ 19 ಪಂದ್ಯ ನಡೆಯುವುದು ಎಲ್ಲಿ?

ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ. ಈ ವೇಳೆ ಮೊದಲ ಪಂದ್ಯ ಬೆನೋನಿಯಲ್ಲಿರುವ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯಲಿದೆ.

ಪಂದ್ಯ ಆರಂಭವಾಗುವುದು ಯಾವಾಗ?

ಉಭಯ ದೇಶಗಳ ನಡುವಣ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ನಡೆಯಲಿದೆ. ಪಂದ್ಯ ಆರಂಭಕ್ಕೂ ಅರ್ಧಗಂಟೆ ಮುನ್ನ ಟಾಸ್‌ ನಡೆಯಲಿದೆ.

ಈ ಪಂದ್ಯವನ್ನು ಭಾರತದಲ್ಲಿ ಎಲ್ಲಿ ನೋಡಬಹುದು?

ಈ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಇನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಜಿಯೋ ಹಾಟ್‌ ಸ್ಟಾರ್‌ನಲ್ಲೂ ನೇರವಾಗಿ ನೋಡಬಹುದಾಗಿದೆ.

ಭಾರತ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ?

ವೈಭವ್ ಸೂರ್ಯವಂಶಿ (ನಾಯಕ), ಆ್ಯರನ್ ಜಾರ್ಜ್ (ಉಪನಾಯಕ), ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂಡು, ಹರ್ವನ್ಶ್ ಸಿಂಗ್, ಆರ್.ಎಸ್. ಅಂಬರೀಶ್, ಕನಿಷ್ಕ್ ಚೌಹಾಣ್, ಖಿಲನ್ ಎ. ಪಟೇಲ್, ಮೊಹಮ್ಮದ್ ಎನಾನ್, ಹೆನಿಲ್ ಪಟೇಲ್, ಡಿ. ದೀಪೇಶ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್, ಯುವರಾಜ್ ಗೋಹಿಲ್, ರಾಹುಲ್ ಕುಮಾರ್

Story first published: Friday, January 2, 2026, 17:15 [IST]
Other articles published on Jan 2, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+