277 ಸ್ಟ್ರೈಕ್ ರೇಟ್, 9 ಸಿಕ್ಸರ್, ಸಿಡಿಲಬ್ಬರದ 86 ರನ್ ಬಾರಿಸಿದ ವೈಭವ್
18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಬ್ಬರಿಸಿದ್ದ ಯುವ ಆಟಗಾರ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ನೆಲದಲ್ಲಿ ಆರ್ಭಟ ಮುಂದುವರೆಸಿದ್ದಾರೆ. ನಾರ್ಥಾಂಪ್ಟನ್‌ನಲ್ಲಿ ನಡೆದ ಯುತ್ ಏಕದಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು. ಈ ಮೂಲಕ ಭಾರತ ತಂಡ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
ಬುಧವಾರ ನಡೆದ ಮೂರನೇ ಯುತ್ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 40 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 268 ರನ್ ಸೇರಿಸಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 34.3 ಓವರ್‌ಗಳಲ್ಲಿ 6 ವಿಕೆಟ್‌ಗೆ 274 ರನ್ ಸಿಡಿಸಿ ಜಯ ಸಾಧಿಸಿತು. ಈ ಮೂಲಕ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿತು.

ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಇಂಗ್ಲೆಂಡ್‌ನಲ್ಲಿ ಆರ್ಭಟಿಸಿದರು. ಇವರು ಇತ್ತೀಚಿಗೆ ಭಾರತದಲ್ಲಿ ನಡೆದಿದ್ದ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವೇಗದ ಶತಕ ಬಾರಿಸಿ ಮಿಂಚಿದ್ದರು. ಈಗ ಇವರು ಯುತ್ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ತಮ್ಮ ಧಮಾಕೆದಾರ್ ಪ್ರದರ್ಶನ ನೀಡಿದ್ದರು. ವೈಭವ್ ಸೂರ್ಯವಂಶಿ 31 ಎಸೆತಗಳಲ್ಲಿ, 6 ಬೌಂಡರಿ, 9 ಸಿಕ್ಸರ್ ಸಹಾಯದಿಂದ 86 ರನ್ ಸಿಡಿಸಿದರು. ಈ ವೇಳೆ ಇವರು 277ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿ ಅಬ್ಬರಿಸಿದರು. ಈ ಮೂಲಕ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು.
ಯುತ್ ಏಕದಿನ ಕ್ರಿಕೆಟ್‌ನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಒಂದೇ ಇನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಭಾರತದ ಪರ ವೇಗವಾಗಿ ಶತಕ ಬಾರಿಸಿದ ಎರಡನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. ಇವರು 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ರಿಷಭ್ ಪಂತ್ 18ನೇ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಭಾರತದ ಪರ ವೇಗದ ಅರ್ಧಶತಕ ಬಾರಿಸಿದ ಗರಿ ಹೊಂದಿದ್ದಾರೆ.
ಭಾರತ ತಂಡದ ಪರ ವಿಹಾನ್ ಮಲೋತ್ರಾ 7 ಬೌಂಡರಿ, 1 ಸಿಕ್ಸರ್ ಸಹಾಯದಿಂದ 46 ರನ್ ಸಿಡಿಸಿದರು. ಇನ್ನು ಕನಿಷ್ಕ್ ಚೌಹಾಣ್ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 43 ರನ್ ಬಾರಿಸಿ ತಂಡದ ಜಯದಲ್ಲಿ ಮಿಂಚಿದ್ದರು.
ಇಂಗ್ಲೆಂಡ್ ಸ್ಪರ್ಧಾತ್ಮಕ ಮೊತ್ತ
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಆರಂಭ ಸೊಗಸಾಗಿತ್ತು. ಆರಂಭಿಕರಾದ ಬಿಜೆ ಡಾಕಿನ್ಸ್ ಹಾಗೂ ಐಸಾಕ್ ಮೊಹಮ್ಮದ್ (41) ಜೋಡಿ 78 ರನ್ ಜೊತೆಯಾಟದ ಕಾಣಿಕೆ ನೀಡಿದರು. ಆರಂಭಿಕ ಡಾಕಿನ್ಸ್ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 62 ರನ್ ಬಾರಿಸಿದರು. ಬೆನ್ ಮೇಯಸ್ 31 ರನ್ ಸೇಡಿಸಿದರು. ನಾಯಕ ಥಾಮಸ್ ರೆವ್ 9 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 76 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಭಾರತದ ಪರ ಕನಿಷ್ಕ್ ಚೌಹಾಣ್ 3 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications