Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೈಭವ್ vs ಶಮಿ: ಗೆಲುವಿನ ಟ್ರ್ಯಾಕ್‌ಗೆ ಮರಳಲು ಎಲ್‌ಎಸ್‌ಜಿ, ರಾಯಲ್ಸ್‌ ಪ್ಲ್ಯಾನ್‌

ಲಕ್ನೋ: ಈಗಾಗಲೇ 19ನೇ ಆವೃತ್ತಿ ಐಪಿಎಲ್‌ನಲ್ಲಿ ಹ್ಯಾಟ್ರಿಕ್ ಸೋಲಿನ ನೋವನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಈ ಆವೃತ್ತಿಯ 32ನೇ ಪಂದ್ಯದಲ್ಲಿ ಎಲ್‌ಎಸ್‌ಜಿ, ಭರ್ಜರಿ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಸವಾಲು ಎದುರಿಸಲಿದೆ. ಉಭಯ ತಂಡಗಳು ಈ ಪಂದ್ಯದಲ್ಲಿ ಪೂರ್ಣ 2 ಅಂಕಗಳನ್ನು ಕಲೆ ಹಾಕುವತ್ತ ಚಿತ್ತ ನೆಟ್ಟಿವೆ.

ಲಕ್ನೋ ಹಾಗೂ ರಾಜಸ್ಥಾನ ತಂಡಗಳು ಈಗಾಗಲೇ ಐಪಿಎಲ್‌ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದು, ಎಲ್‌ಎಸ್‌ಜಿ 2 ಗೆಲುವು ದಾಖಲಿಸಿದೆ. ರಾಜಸ್ಥಾನ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಮುಂಚೂಣಿಯಲ್ಲಿದೆ. ಉಭಯ ತಂಡಗಳು ಸ್ಟಾರ್ ಆಟಗಾರರು ಇದ್ದಾರೆ. ಆದರೆ ಲಕ್ನೋ ತಂಡದ ಆಟಗಾರರು ತಂಡದ ಗೆಲುವಿನಲ್ಲಿ ಮಿಂಚದೇ ಇರುವುದು ಚಿಂತೆಯನ್ನು ಹೆಚ್ಚಿಸಿದೆ.

Vaibhav

ಲಕ್ನೋ ಸೂಪರ್ ಜೈಂಟ್ಸ್‌ ಹಿಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 54 ರನ್ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ಆಯುಷ್ ಬದೋನಿ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಆರಂಭಿಕ ಮಿಚೆಲ್‌ ಮಾರ್ಷ್ ಸಹ 40 ರನ್‌ಗಳಿಗೆ ಔಟ್ ಆಗಿದ್ದರು. ಈ ಇಬ್ಬರೂ ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವನ್ನು ಆಡಬೇಕಿದೆ. ಅಂದಾಗ ತವರಿನ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣಬಡಿಸಬಹುದು.

ಶಮಿ ಆಕರ್ಷಣೆ

ನಾಯಕ ರಿಷಭ್‌ ಪಂತ್ ಲಯಕ್ಕೆ ಮರಳಿದ್ದಾರೆ. ಆದರೆ ಬಿಗ್ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್ ಪೂರನ್ (9) ರನ್‌ ಕಲೆ ಹಾಕುವಲ್ಲಿ ಹಿಂದೆ ಬಿದ್ದಿರುವುದು ತಂಡ ತಲೆ ನೋವು ಹೆಚ್ಚಿಸಿದೆ. ಸ್ಟಾರ್ ಆಟಗಾರ ಏಡನ್ ಮಾರ್ಕ್ರಾಮ್ ಸ್ಥಿರ ಪ್ರದರ್ಶನ ನೀಡಬೇಕಿದೆ. ಯುವ ಆಟಗಾರ ಮುಕುಲ್ ಚೌಧರಿ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ಎಲ್‌ಎಸ್‌ಜಿ ತಂಡದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಬಿಗುವಿನ ದಾಳಿ ನಡೆಸುತ್ತಿದ್ದು, ಇದೇ ಲಯವನ್ನು ಮುಂದುವರೆಸುವ ವಿಶ್ವಾಸವನ್ನು ಹೊಂದಿದ್ದಾರೆ. ಯುವ ವೇಗದ ಬೌಲರ್ ಪ್ರಿನ್ಸ್ ಯಾದವ್ ಸಹ ಪವರ್‌ ಪ್ಲೇನಲ್ಲಿ ಶಿಸ್ತು ಬದ್ಧ ದಾಳಿ ಸಂಘಟಿಸಬಲ್ಲರು. ಎಂ ಸಿದ್ಧಾರ್ಥ್ ಸಹ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ. ಅಂದಾಗ ಗೆಲುವಿನ ಕನಸು ನನಸಾಗುತ್ತದೆ.

ವೈಭವ್ ಮೇಲೆ ಎಲ್ಲರ ಚಿತ್ತ

ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಫಾರ್ಮ್‌ನಲ್ಲಿದ್ದು, ಯುವ ಆಟಗಾರರು ತಂಡಕ್ಕೆ ಆಸ್ತಿ ಆಗಿದ್ದಾರೆ. ಆರಂಭಿಕ ವೈಭವ್ ಸೂರ್ಯವಂಶಿ ಲೀಗ್‌ನಲ್ಲಿ ವಿಶ್ವದ ಖ್ಯಾತನಾಮ ಆಟಗಾರರನ್ನು ಕಾಡಿದ್ದು, ಮೊಹಮ್ಮದ್ ಶಮಿ ವಿರುದ್ಧ ವೈಭವ್ ಹೇಗೆ ಆಡುತ್ತಾರೆ ಎಂಬುದೇ ಪ್ರಶ್ನೆ ಉದ್ಭವಿಸಿದೆ. ಯಶಸ್ವಿ ಜೈಸ್ವಾಲ್‌ ಸಹ ಸ್ಥಿರ ಪ್ರದರ್ಶನ ನೀಡುತ್ತಿದ್ದು ಭರವಸೆ ಮೂಡಿಸಿದ್ದಾರೆ.

Vaibhav

ಮಧ್ಯಮ ಕ್ರಮಾಂಕದಲ್ಲಿ ಧ್ರುವ್ ಜುರೇಲ್‌, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್ ಜವಾಬ್ದಾರಿಯುತ ಆಟವನ್ನು ಆಡಬೇಕಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಜೋಫ್ರಾ ಆರ್ಚರ್, ನಾಂಡ್ರಿ ಬರ್ಗರ್‌, ಬ್ರಿಜೇಶ್‌ ಶರ್ಮಾ ಲಯಬದ್ಧ ದಾಳಿ ಸಂಘಟಿಸಬಲ್ಲರು. ಸ್ಪಿನ್ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ತಂಡಕ್ಕೆ ಆಧಾರವಾಗಬಲ್ಲರು. ರಾಜಸ್ಥಾನ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದ್ದು, ಹ್ಯಾಟ್ರಿಕ್ ಸೋಲಿನ ಭೀತಿ ಎದುರಿಸುತ್ತಿದೆ.

Story first published: Tuesday, April 21, 2026, 18:40 [IST]
Other articles published on Apr 21, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+