For Quick Alerts
ALLOW NOTIFICATIONS  
For Daily Alerts
 

Team India: ಟೀಮ್ ಇಂಡಿಯಾ ಪರ ಅಬ್ಬರಿಸಿದ್ದ ವೇಗಿ ದಿಢೀರ್ ನಿವೃತ್ತಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಗೂ ಮುನ್ನವೇ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತನ್ನ ವೇಗದ ಬೌಲಿಂಗ್‌ನಿಂದ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಈ ವೇಗಿ ಯಶಸ್ವಿಯಾಗಿದ್ದರು. ಇದೀಗ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗದೆ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

ಭಾರತ ತಂಡದ ಬಲಗೈ ವೇಗದ ಬೌಲರ್ ವರುಣ್ ಆರನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 35 ವರ್ಷದ ಆರನ್ 2011 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಒಂದು ಕಾಲದಲ್ಲಿ ಆರನ್ ತಮ್ಮ ವೇಗದ ಬೌಲಿಂಗ್‌ನಿಂದ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದರು. ಆದಾಗ್ಯೂ, ಆಗಾಗ್ಗೆ ಗಾಯಗಳು ಮತ್ತು ತಂಡದಲ್ಲಿ ಸ್ಥಾನ ಸಿಗದೆ ಇರುವುದು ಅವರ ವೃತ್ತಿಜೀವನ ಟೀಮ್ ಇಂಡಿಯಾದಲ್ಲಿ ಮುಂದೆ ಸಾಗಲಿಲ್ಲ.

Varun Aaron announced retirement from international cricket

ವರುಣ್ ಆರನ್ ಭಾರತದ ಪರ ಒಟ್ಟು 18 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಆರನ್ ತಲಾ 9 ಏಕದಿನ ಮತ್ತು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಗಾಯಗಳಿಂದ ಬಳಲುತ್ತಿದ್ದ ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ದೀರ್ಘಕಾಲ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಟೀಮ್ ಇಂಡಿಯಾದೊಂದಿಗೆ ಅವರ ವೃತ್ತಿಜೀವನವು 2015 ರಲ್ಲಿ ಕೊನೆಗೊಂಡಿತ್ತು. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 18 ವಿಕೆಟ್ ಪಡೆದರೆ, ಏಕದಿನ ಮಾದರಿಯಲ್ಲಿ 11 ವಿಕೆಟ್ ಉರುಳಿಸಿದ್ದಾರೆ.

ವರುಣ್ ಆರನ್ ದೇಶೀಯ ಕ್ರಿಕೆಟ್‌ನಲ್ಲಿಯೂ ಮಿಂಚಿದ್ದಾರೆ. ಅವರು ಆಡಿರುವ 66 ಪ್ರಥಮ ದರ್ಜೆ ಪಂದ್ಯಗಳಲ್ಲಿ 33.27ರ ಸರಾಸರಿಯಲ್ಲಿ 173 ವಿಕೆಟ್‌ಗಳನ್ನು ಪಡೆದಿದ್ದಾರೆ. ಆರನ್‌ಗೆ ಇಂಗ್ಲಿಷ್ ಕೌಂಟಿ ಕ್ರಿಕೆಟ್‌ನಲ್ಲಿ ಡರ್ಹಾಮ್‌ ಪರ ಆಡುವ ಅವಕಾಶವೂ ಸಿಕ್ಕಿತು. ಜನವರಿ 10 ರಂದು ಗೋವಾ ವಿರುದ್ಧ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ 2024-25 ರಲ್ಲಿ ಜಾರ್ಖಂಡ್‌ಗಾಗಿ ತನ್ನ ಕೊನೆಯ ಪಂದ್ಯವನ್ನು ಆಡಿದರು.

ಪಾದಾರ್ಪಣೆ

ವರುಣ್ ಆರನ್ 2008 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್‌ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡುವ ಅವಕಾಶವನ್ನು ಪಡೆದರು. 2011 ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಿದರು. ಒಂದು ತಿಂಗಳ ನಂತರ, ಅವರು ವೆಸ್ಟ್ ಇಂಡೀಸ್ ವಿರುದ್ಧ ವಾಂಖೆಡೆಯಲ್ಲಿಯೇ ತಮ್ಮ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದರು.

ವಿದಾಯ

ತಮ್ಮ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವ ಆರನ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ, ನಾನು ವೇಗದ ಬೌಲಿಂಗ್‌ನ ರೋಮಾಂಚನದಲ್ಲಿ ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಯಶಸ್ಸು ಸಾಧಿಸಿದ್ದೇನೆ. ಇಂದು, ಅಪಾರ ಕೃತಜ್ಞತೆಯೊಂದಿಗೆ, ನಾನು ಪ್ರತಿನಿಧಿ ಕ್ರಿಕೆಟ್‌ನಿಂದ ನನ್ನ ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸುತ್ತೇನೆ ಎಮದು ಬರೆದುಕೊಂಡಿದ್ದಾರೆ.

Story first published: Friday, January 10, 2025, 16:29 [IST]
Other articles published on Jan 10, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+