ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ರೋಚಕತೆ ಹೆಚ್ಚಿದೆ. ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ ಸೋಲಿಸಿದೆ. ಇದರೊಂದಿಗೆ ಇಂಗ್ಲೆಂಡ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಜೀವಂತವಾಗಿ ಉಳಿದಿದೆ. ಆದರೆ, ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಭಯ ಹುಟ್ಟಿಸಿದರು.
ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವರುಣ್ ಚಕ್ರವರ್ತಿ ವರುಣ್ ಚಕ್ರವರ್ತಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಇಂಗ್ಲೆಂಡ್ ಬ್ಯಾಟರ್‌ಗಳಿಗೆ ಬೆವರಿಳಿಸಿದ ವರುಣ್ 5 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಈ ಮೂಲಕ ಅವರು ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ 5 ವಿಕೆಟ್ ಪಡೆದ ಸಾಧನೆ ಮಾಡಿದರು.

ವರುಣ್ ಚಕ್ರವರ್ತಿ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 24 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು. ಇದು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಎರಡನೇ ಐದು ವಿಕೆಟ್ ಗೊಂಚಲು. ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಎರಡು ಬಾರಿ ಐದು ವಿಕೆಟ್ ಗೊಂಚಲು ಪಡೆದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಕುಲದೀಪ್ ಯಾದವ್ ಮತ್ತು ಭುವನೇಶ್ವರ್ ಕುಮಾರ್ ಟಿ20 ಕ್ರಿಕೆಟ್‌ನಲ್ಲಿ ತಲಾ ಎರಡು ಬಾರಿ ಐದು ವಿಕೆಟ್ ಪಡೆದಿದ್ದಾರೆ. ಮತ್ತೊಂದೆಡೆ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಭಾರತ ಪರ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ ಐದು ವಿಕೆಟ್‌ಗಳನ್ನು ಒಮ್ಮೆಯೂ ಪಡೆದಿಲ್ಲ.
ವರುಣ್ ಚಕ್ರವರ್ತಿ - 2
ಕುಲದೀಪ್ ಯಾದವ್ - 2
ಭುವನೇಶ್ವರ್ ಕುಮಾರ್ - 2
ದೀಪಕ್ ಚಹಾರ್ - 1
ಯುಜುವೇಂದ್ರ ಚಹಾಲ್ - 1
ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ನಿರ್ಧರಿಸಿದರು. ನಾಯಕ ನಿರೀಕ್ಷೆಯಂತೆ ಟೀಮ್ ಇಂಡಿಯಾ ಬೌಲರ್‌ಗಳಿಂದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಕಂಡುಬಂದರೂ, ಬ್ಯಾಟರ್‌ಗಳು ರನ್ ಗಳಿಸಿ ತಂಡವನ್ನು ಗೆಲ್ಲಿಸುವಲ್ಲಿ ಹಿಂದೆ ಉಳಿದರು.
ಟೀಮ್ ಇಂಡಿಯಾ ಬೌಲಿಂಗ್‌ನ ಆರಂಭ ಅತ್ಯುತ್ತಮವಾಗಿತ್ತು. ಇಂಗ್ಲೆಂಡ್ ಕೇವಲ 127 ರನ್ ಗಳಿಸಿದ್ದಾಗ ಭಾರತ 7 ವಿಕೆಟ್‌ಗಳನ್ನು ಉರುಳಿಸಿತ್ತು. ಇದರಲ್ಲಿ ಹೆಚ್ಚಿನ ಪಾಲು ವರುಣ್ ಚಕ್ರವರ್ತಿ ಅವರಿಗೆ ಸೇರುತ್ತದೆ. ವರುಣ್ ಚಕ್ರವರ್ತಿ ಐದು ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು. ಆದರೆ ಕೊನೆಯಲ್ಲಿ ಲಿಯಾಮ್ ಲಿವಿಂಗ್‌ಸ್ಟನ್ ಕೇವಲ 24 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 1 ಬೌಂಡರಿ ನೆರವಿನಿಂದ 43 ರನ್ ಗಳಿಸಿದರು. ಬೆನ್ ಡಕೆಟ್ ಕೂಡ 51 ರನ್ ಗಳ ಇನಿಂಗ್ಸ್ ಆಡಿದರು. ಎರಡೂ ಇನ್ನಿಂಗ್ಸ್‌ಗಳ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ 172 ರನ್‌ಗಳ ಗುರಿ ನೀಡಿದೆ.
ರಾಜ್‌ಕೋಟ್‌ನಲ್ಲಿ ಆರಂಭಿಕರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಲಿಲ್ಲ. ನಾಯಕ ಸೂರ್ಯ ಅವರ ಫ್ಲಾಪ್ ಶೋ ಮುಂದುವರಿದರೆ, ತಿಲಕ್ ವರ್ಮಾ ಅವರ ಬ್ಯಾಟ್ ಕೂಡ ಸೈಲೆಂಟ್ ಆಯಿತು. ಹಾರ್ದಿಕ್ ಪಾಂಡ್ಯ 40 ರನ್‌ಗಳ ಇನಿಂಗ್ಸ್ ಆಡಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ವಿಫಲರಾದರು. ಈ ಪಂದ್ಯದಲ್ಲಿ ಭಾರತ 26 ರನ್‌ಗಳಿಂದ ಸೋಲನುಭವಿಸಬೇಕಾಯಿತು.