For Quick Alerts
ALLOW NOTIFICATIONS  
For Daily Alerts
 

ವಿಜಯ್ ಹಜಾರೆ ಟ್ರೋಫಿ: ಕ್ವಾರ್ಟರ್‌ ಫೈನಲ್‌, ಕರ್ನಾಟಕ vs ಪಂಜಾಜ್; ಟಾಸ್ ರಿಪೋರ್ಟ್, ಆಡುವ ಬಳಗ

Vijay Hazare Trophy 2022, Quarter Final 1, Punjab vs Karnataka Live score and playing XI

ದೇಶೀಯ ಕ್ರಿಕೆಟ್‌ನ ಏಕದಿನ ಮಾದರಿಯ ಪ್ರತಿಷ್ಠಿತ ಟೂರ್ನಿಯಾಗಿರುವ ವಿಜಯ್ ಹಜಾರೆ ಟ್ರೋಫಿ ಟೂರ್ನಿ ಈಗ ಕ್ವಾರ್ಟರ್‌ ಫೈನಲ್ ಹಂತಕ್ಕೆ ತಲುಪಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ಇಂದು ಕರ್ನಾಟಕ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದು ತೀವ್ರ ಪೈಪೋಟಿಯ ಪಂದ್ಯವನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಈ ಪಂದ್ಯದಲ್ಲಿ ಕರ್ನಾಟಕ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆಡಿರುವ 7 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದ್ದು ಗುಂಪಿನ ಅಗ್ರ ತಂಡವಾಗಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಕಳೆದ ಪಂದ್ಯದಲ್ಲಿ ಜಾರ್ಖಂಡ್ ವಿರುದ್ಧ 5 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿ ಬೀಗಿತ್ತು.

ಇತ್ತ ಪಂಜಾಬ್ ತಂಡ ಕೂಡ ಬಲಿಷ್ಠವಾಗಿದ್ದು ಲೀಗ್ ಹಂತದಲ್ಲಿ ಯಾವುದೇ ಸೋಲು ಕಾಣದೇ ಕ್ವಾರ್ಟರ್‌ಫೈನಲ್‌ಗೇರಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ಪಂಜಾಬ್ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದ್ದರು ಕರ್ನಾಟಕ ಈ ಸವಾಲನ್ನು ಯಾವ ರೀತಿ ಮೆಟ್ಟಿನಿಲ್ಲಲಿದೆ ಎಂಬುದು ಕುತೂಹಲ ಮೂಡಿಸಿದೆ.

ಪಂಜಾಬ್ ಆಡುವ ಬಳಗ: ಅಭಿಷೇಕ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಮಂದೀಪ್ ಸಿಂಗ್ (ನಾಯಕ), ಅನ್ಮೋಲ್ ಮಲ್ಹೋತ್ರಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ಸನ್ವಿರ್ ಸಿಂಗ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಬಲ್ತೇಜ್ ಸಿಂಗ್, ಸಿದ್ದಾರ್ಥ್ ಕೌಲ್
ಬೆಂಚ್: ಗೌರವ್ ಚೌಧರಿ, ಅಶ್ವನಿ ಕುಮಾರ್, ವಿನಯ್ ಚೌಧರಿ, ಪುಖ್ರಾಜ್ ಮಾನ್

ಕರ್ನಾಟಕ ಆಡುವ ಬಳಗ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಶರತ್ ಬಿಆರ್ (ವಿಕೆಟ್ ಕೀಪರ್), ಮನೋಜ್ ಭಾಂಡಗೆ, ಕೃಷ್ಣಪ್ಪ ಗೌತಮ್, ರೋನಿತ್ ಮೋರೆ, ವಿಧ್ವತ್ ಕಾವೇರಪ್ಪ, ವಾಸುಕಿ ಕೌಶಿಕ್
ಬೆಂಚ್: ಮುರಳೀಧರ ವೆಂಕಟೇಶ್, ಜಗದೀಶ ಸುಚಿತ್, ಅಭಿನವ್ ಮನೋಹರ್, ನಿಹಾಲ್ ಉಳ್ಳಾಲ್

Story first published: Monday, November 28, 2022, 9:16 [IST]
Other articles published on Nov 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+