ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ruturaj Gaikwad : ಒಂದೇ ಓವರ್‌ನಲ್ಲಿ 7 ಸಿಕ್ಸರ್‌, ದ್ವಿಶತಕ ಸಿಡಿಸಿ ವಿಶ್ವ ದಾಖಲೆ ಬರೆದ ರುತುರಾಜ್ ಗಾಯಕ್ವಾಡ್: Video

Ruturaj gaikwad

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ 2022 ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಒಂದೇ ಓವರ್‌ನಲ್ಲಿನ ಏಳು ಸಿಕ್ಸರ್ ಸಿಡಿಸಿದ್ದಲ್ಲದೆ ಅಜೇಯ ದ್ವಿಶತಕ ದಾಖಲಿಸಿ ಅಬ್ಬರಿಸಿದ್ದಾರೆ.

ಉತ್ತರ ಪ್ರದೇಶ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮಹಾರಾಷ್ಟ್ರ ಪರ ನಾಯಕ ಮತ್ತು ಓಪನರ್ ರುತುರಾಜ್ ಗಾಯಕ್ವಾಡ್ ಏಕಾಂಗಿಯಾಗಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ರು. ಒಂದೆಡೆ ವಿಕೆಟ್ ಉರುಳಿದ್ರೆ, ಮತ್ತೊಂದೆಡೆ ಭದ್ರವಾಗಿ ನೆಲೆಯೂರಿದ ಮಹಾರಾಷ್ಟ್ರ ನಾಯಕ 159 ಎಸೆತಗಳಲ್ಲಿ ಅಜೇಯ 220 ರನ್‌ ಕಲೆಹಾಕುವ ಮೂಲಕ ಮಿಂಚಿದರು. 138.36 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರುತುರಾಜ್‌ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 16 ಬೊಂಬಾಟ್‌ ಸಿಕ್ಸರ್‌ಗಳಿದ್ದವು.

49ನೇ ಓವರ್‌ನಲ್ಲಿ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟಿಂಗ್ ಮಾಡಿದ ರುತುರಾಜ್ ಗಾಯಕ್ವಾಡ್ ಬರೋಬ್ಬರಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಶಿವ ಸಿಂಗ್‌ ಬೌಲಿಂಗ್‌ನಲ್ಲಿ ಒಂದರ ಹಿಂದೆ ಮತ್ತೊಂದರಂತೆ ಸಿಕ್ಸರ್ ಸಿಡಿಸಿದ ಗಾಯಕ್ವಾಡ್‌, ನೋ ಬಾಲ್‌ ಎಸೆತದಲ್ಲೂ ಚೆಂಡನ್ನು ಬೌಂಡರಿ ಗೆರೆ ದಾಟಿಸುವ ಮೂಲಕ ಓವರ್‌ನಲ್ಲಿ ಏಳು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್ ಎಂಬ ಸಾಧನೆ ಮಾಡಿದ್ದಾರೆ.

ಇನ್ನು ಒಂದು ಓವರ್‌ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ದಾಖಲೆಯು ವಿಜರ್ ಹಜಾರೆ ಟ್ರೋಫಿಯಲ್ಲಿ ದಾಖಲಾಗಿದೆ. 49ನೇ ಓವರ್‌ನಲ್ಲಿ 43 ರನ್‌ ದಾಖಲಾಗುವ ಮೂಲಕ ಅತ್ಯಂತ ದುಬಾರಿ ಓವರ್‌ ಎಂಬ ಪಟ್ಟಿಗೆ ಸೇರಿದೆ.

ರುತುರಾಜ್ ಗಾಯಕ್ವಾಡ್ ಅಜೇಯ 220 ರನ್‌ಗಳ ನೆರವಿನಿಂದ ಮಹಾರಾಷ್ಟ್ರ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 330 ರನ್ ಕಲೆಹಾಕಿದೆ. ಉತ್ತರ ಪ್ರದೇಶ ತಂಡಕ್ಕೆ 331ರನ್ ಗುರಿ ನೀಡಿದೆ.

Story first published: Monday, November 28, 2022, 13:27 [IST]
Other articles published on Nov 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X