Vijay Hazare Trophy: ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದ 8 ತಂಡಗಳು: ಇಲ್ಲಿದೆ ವೇಳಾಪಟ್ಟಿ
ದೇಶೀಯ ಏಕದಿನ ಕ್ರಿಕೆಟ್ ಟೂರ್ನಿಯ ವಿಜಯ್ ಹಜಾರೆ ಟ್ರೋಫಿಯ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈಗ ತಂಡಗಳು ನಾಕೌಟ್ ಹಂತದ ಮೇಲೆ ಚಿತ್ತ ನೆಟ್ಟಿವೆ. 8 ತಂಡಗಳು ಈಗ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಹಂತಕ್ಕೆ ಅರ್ಹತೆ ಪಡೆದಿವೆ. ಕರ್ನಾಟಕ ಸಹ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಎಂಟರ ಘಟ್ಟವನ್ನು ಪ್ರವೇಶಿಸಿದೆ. ಹಾಗಿದ್ದರೆ ವಿಜಯ್ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ತಂಡಗಳು ಯಾವವು ಇಲ್ಲಿದೆ ಮಾಹಿತಿ.
ಪ್ರತಿ ಗುಂಪಿನಿಂದ ನಾಕೌಟ್ ಹಂತಕ್ಕೆ ತಲಾ ಎರಡು ತಂಡಗಳು ಆಯ್ಕೆ ಆಗಿವೆ. "ಎ" ಗ್ರುಪ್‌ನಲ್ಲಿ ಕರ್ನಾಟಕ ಹಾಗೂ ಮಧ್ಯ ಪ್ರದೇಶ ತಂಡಗಳು ಮುಂದಿನ ಹಂತಕ್ಕೆ ಪ್ರವೇಶಿಸಿವೆ. ಕರ್ನಾಟಕ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದು, ಆಡಿದ 7 ಪಂದ್ಯಗಳಲ್ಲಿ 6 ಜಯ, 1 ಸೋಲು ಕಂಡಿದ್ದು, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದೆ. ಇನ್ನು ಮಧ್ಯಪ್ರದೇಶ ತಂಡ ಆಡಿದ 7 ಪಂದ್ಯಗಳಲ್ಲಿ 5 ಜಯ, 2 ಸೋಲು ಕಂಡಿದ್ದು 20 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದೆ. ಈ ಎರಡೂ ತಂಡಗಳು ಈಗಾಗಲೇ ಕ್ವಾರ್ಟರ್ ಫೈನಲ್ ಹಂತ ಪ್ರವೇಶಿಸಿವೆ.

ಆಡಿದ ಏಳು ಪಂದ್ಯಗಳನ್ನು ಗೆದ್ದಿರುವ ಉತ್ತರ ಪ್ರದೇಶ ತಂಡ "ಬಿ" ಗುಂಪಿನಲ್ಲಿ ಅಗ್ರಸ್ಥಾನದೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಇದೇ ಗುಂಪಿನಿಂದ ವಿದರ್ಭ ಸಹ ಎಂಟರ ಘಟ್ಟದಲ್ಲಿ ಕಾದಾಟ ನಡೆಸುವುದನ್ನು ಕಾಣಬಹುದಾಗಿದೆ. "ಸಿ" ಗುಂಪಿನಲ್ಲಿ ಪಂಜಾಬ್ ಆಡಿದ 7 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಇನ್ನು ಮುಂಬೈ 7 ಪಂದ್ಯಗಳಲ್ಲಿ 5 ಜಯದ ನಗೆ ಬೀರಿದ್ದು, ಎರಡನೇ ಸ್ಥಾನೀಯವಾಗಿ ಕ್ವಾರ್ಟರ್ ಫೈನಲ್ ಹಂತ ಪ್ರವೇಶಿಸಿವೆ.
"ಡಿ" ಗುಂಪಿನಲ್ಲಿ ದೆಹಲಿ ತಂಡ ಆಡಿದ 7 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದರೆ. ಸೌರಾಷ್ಟ್ರ 5 ಜಯದೊಂದಿಗೆ ಎರಡನೇ ಸ್ಥಾನ ಪಡೆದಿದೆ.
ಕ್ವಾರ್ಟರ್ ಫೈನಲ್ ಪಂದ್ಯ ನಡೆಯುವುದು ಎಲ್ಲಿ?
ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯಗಳು ಬೆಂಗಳೂರಿನ ಹೊರವಲಯದಲ್ಲಿರುವ ಬಿಸಿಸಿಐ ಶ್ರೇಷ್ಠತಾ ಕೇಂದ್ರದಲ್ಲಿ ನಡೆಯಲಿವೆ.
ಕರ್ನಾಟಕಕ್ಕೆ ಎದುರಾಳಿ ಯಾರು?
ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿ ಗುಂಪಿನಲ್ಲಿ ಎರಡನೇ ಸ್ಥಾನವನ್ನು ಪಡೆದಿರುವ ಮುಂಬೈ ತಂಡದ ವಿರುದ್ಧ ಪಂದ್ಯ ನಡೆಯಲಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಈ ಪಂದ್ಯ ಜನವರಿ 12 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಕ್ವಾರ್ಟರ್ ಫೈನಲ್ ವೇಳಾಪಟ್ಟಿ
ಜ.12, ಕರ್ನಾಟಕ vs ಮುಂಬೈ
ಜ.12, ಉತ್ತರ ಪ್ರದೇಶ vs ಸೌರಾಷ್ಟ್ರ
ಜ.13, ಪಂಜಾಬ್ vs ಮಧ್ಯ ಪ್ರದೇಶ
ಜ.13, ದೆಹಲಿ vs ವಿದರ್ಭ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications