
ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಕರ್ನಾಟಕ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ಆವೃತ್ತಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.
ಮೊದಲಿಗೆ ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ಅಭಿಶೇಕ್ ಶರ್ಮಾ ಅವರ ಶತಕದ ನೆರನಿಂದ ಭರ್ಜರಿ 235 ರನ್‌ಗಳನ್ನು ಗಳಿಸಿತ್ತು. ಇದನ್ನು ಬೆನ್ನಟ್ಟಿದ ಕರ್ನಾಟಕ ತಂಡ ರವಿ ಕುಮಾರ್ ಸಮರ್ಥ್, ಶ್ರೇಯಸ್ ಗೋಪಾಲ್ ಅವರ ಅದ್ಭುತ ಪ್ರದರ್ಶನದ ನೆರವಿನಿಂದಾಗಿ 4 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಸೆಮಿಫಯನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕರ್ನಾಟಕ ಉತ್ತಮ ಪ್ರದರ್ಶನ ನೀಡಿತು. ಆದರೆ ಪಂಜಾಬ್ ತಂಡದ ಓರ್ವ ದಾಂಡಿಗ ಮಾತ್ವೇ ಕರ್ನಾಟಕ ಆಟಗಾರರಿಗೆ ಬಹಳ ಕಾಡಿದ್ದಾರೆ. ಆರಂಬಿಕ ಆಟಗಾರ ಅಭಿಶೇಕ್ ಶರ್ಮಾ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನಿಡಿದ್ದು ಭರ್ಜರಿ ಶತಕ ಸಿಡಿಸಿದ್ದಾರೆ. ಕರ್ನಾಟಕದ ಶಿಸ್ತಿನ ಬೌಲಿಂಗ್ ದಾಳಿಯ ವಿರುದ್ಧ ಶರ್ಮಾ ಏಕಾಂಗಿ ಹೋರಾಟವನ್ನು ನಡೆಸಿದರು. ಇದರ ಪರಿಣಾಮವಾಗಿ ಪಂಜಾಬ್ ಈ ಪಂದ್ಯದಲ್ಲಿ ಗೌರವದ ಮೊತ್ತ ಗಳಿಸಲು ಸಾಧ್ಯವಾಗಿದೆ.
ಪಂಜಾಬ್ ತಂಡದ ಪರವಾಗಿ ಆರಂಬಿಕ ಆಟಗಾರ ಅಭಿಶೇಕ್ ಶರ್ಮಾ 123 ಎಸೆತಗಳಲ್ಲಿ 109 ರನ್‌ಗಳನ್ನು ಸಿಡಿಸಿ ವಿಕೆಟ್ ಕಳೆದುಕೊಂಡರು. ಈ ಪ್ರದರ್ಶನ ಪಂಜಾಬ್ ತಂಡಕ್ಕೆ ಆಸರೆಯಾಗಿದೆ. ಉಳಿದಂತೆ ಮಧ್ಯಮ ಕ್ರಮಾಂಕದ ಸನ್ವೀರ್ ಸಿಂಗ್ ಅವರ 39 ರನ್ ಪಂಜಾಬ್ ಪರ ದಾಖಲಾದ ಅತೀ ಹೆಚ್ಚಿನ ಮೊತ್ತವಾಗಿದೆ.
ಇನ್ನು ಈ ಪಂದ್ಯದಲ್ಲಿ ಕರ್ನಾಟಕ ಪರವಾಗಿ ವಿದ್ವತ್ ಕಾವೇರಪ್ಪ ನಾಲ್ಕು ವಿಕೆಟ್ ಪಡೆದು ಮಿಂಚಿದ್ದಾರೆ. ರೋನಿತ್ ಮೋರೆ ಎರಡು ವಿಕೆಟ್ ಪಡೆದರೆ ವಾಸುಕಿ ಕೌಶಿಕ್, ಮನೋಜ್ ಭಾಂಡಗೆ ಹಾಗೂ ಕೆ ಗೌತಮ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಇನ್ನು ಪಂಜಾಬ್ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಕರ್ನಾಟಕ ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲವಾಯಿತು. ನಾಯಕ ಮಯಾಂಕ್ ಅಗರ್ವಾಲ್ ಕೇವಲ ರನ್‌ಗೆ ವಿಕೆಟ್ ಕಳೆದುಕೊಂಡಿದ್ದರು. ಆದರೆ ಮತ್ತೋರ್ವ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಅದ್ಭುತ ಪ್ರದರ್ಶನ ನೀಡಿದ್ದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು. ಶ್ರೇಯಸ್ ಗೋಪಾಲ್ 42 ರನ್‌ಗಳ ಕೊಡುಗೆ ನೀಡಿದರೆ ಮನೀಶ್ ಪಾಂಡೆ 35 ರನ್‌ಗಳನ್ನು ಗಳಿಸಿದರು. ಅಂತಿಮವಾಗಿ 49.2 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿದೆ.
ಪಂಜಾಬ್ ಆಡುವ ಬಳಗ: ಅಭಿಷೇಕ್ ಶರ್ಮಾ, ಪ್ರಭಾಸಿಮ್ರಾನ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಮಂದೀಪ್ ಸಿಂಗ್ (ನಾಯಕ), ಅನ್ಮೋಲ್ ಮಲ್ಹೋತ್ರಾ (ವಿಕೆಟ್ ಕೀಪರ್), ಹರ್‌ಪ್ರೀತ್ ಬ್ರಾರ್, ಸನ್ವಿರ್ ಸಿಂಗ್, ರಮಣದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಬಲ್ತೇಜ್ ಸಿಂಗ್, ಸಿದ್ದಾರ್ಥ್ ಕೌಲ್
ಬೆಂಚ್: ಗೌರವ್ ಚೌಧರಿ, ಅಶ್ವನಿ ಕುಮಾರ್, ವಿನಯ್ ಚೌಧರಿ, ಪುಖ್ರಾಜ್ ಮಾನ್
ಕರ್ನಾಟಕ ಆಡುವ ಬಳಗ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಶರತ್ ಬಿಆರ್ (ವಿಕೆಟ್ ಕೀಪರ್), ಮನೋಜ್ ಭಾಂಡಗೆ, ಕೃಷ್ಣಪ್ಪ ಗೌತಮ್, ರೋನಿತ್ ಮೋರೆ, ವಿಧ್ವತ್ ಕಾವೇರಪ್ಪ, ವಾಸುಕಿ ಕೌಶಿಕ್
ಬೆಂಚ್: ಮುರಳೀಧರ ವೆಂಕಟೇಶ್, ಜಗದೀಶ ಸುಚಿತ್, ಅಭಿನವ್ ಮನೋಹರ್, ನಿಹಾಲ್ ಉಳ್ಳಾಲ್