ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಜಯ್ ಹಜಾರೆ ಟ್ರೋಫಿ, ಸೆಮಿಫೈನಲ್: ಕರ್ನಾಟಕ vs ಸೌರಾಷ್ಟ್ರ, ಟಾಸ್ ರಿಪೋರ್ಟ್ ಆಡುವ ಬಳಗ

Vijay Hazare trophy Semi-Final, Karnataka vs Saurashtra, Toss report, playing XI

ವಿಜಯ್ ಹಜಾರೆ ಟೂರ್ನಿ ಅಂತಿಮ ಹಂತಕ್ಕೆ ತಲುಪಿದ್ದು ಇಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ಅಂತಿಮ ಹಂತವನ್ನು ಪ್ರವೇಶಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ಈ ಮಹತ್ವದ ಪಂದ್ಯದಲ್ಲಿ ಸೌರಾಷ್ಟ್ರ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ತಂಡಗಳು ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಕರ್ನಾಟಕ ತಂಡ ಬೌಲಿಂಗ್‌ನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದು ಸಂಘಟಿತ ಪ್ರದರ್ಶನ ನೀಡುತ್ತಿದೆ. ಬ್ಯಾಟಿಂಗ್ ವಿಭಾಗದಲ್ಲಿಯೂ ಸಂಘಟಿತ ಪ್ರದರ್ಶನದ ಅಗತ್ಯವಿದೆ.

ಕರ್ನಾಟಕ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದೆ. ಲೀಗ್ ಹಂತದಲ್ಲಿ ಆಡಿದ 7 ಪಂದ್ಯಗಳಲ್ಲಿ ಕರ್ನಾಟಕ 6 ಪಂದ್ಯಗಲನ್ನು ಗೆದ್ದು ಅಗ್ರಸ್ಥಾನದೊಂದಿಗೆ ಪ್ರೀ ಕ್ವಾರ್ಟರ್‌ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಪ್ರಿ ಕ್ವಾರ್ಟರ್‌ಫೈನಲ್‌ನಲ್ಲಿ ಜಾರ್ಖಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಬಳಿಕ ಕ್ವಾರ್ಟರ್‌ಫೈನಲ್‌ನಲ್ಲಿ ಪಂಜಾಬ್ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಹಂತದಲ್ಲಿ ಸೌರಾಷ್ಟ್ರ ಕರ್ನಾಟಕ ಪಡೆಗೆ ಕಠಿಣ ಸವಾಲೊಡ್ಡುತ್ತಿದೆ.

ಕರ್ನಾಟಕ ಆಡುವ ಬಳಗ: ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್, ಮನೀಶ್ ಪಾಂಡೆ, ಶ್ರೇಯಸ್ ಗೋಪಾಲ್, ಶರತ್ ಬಿಆರ್ (ವಾಕ್),
ಮನೋಜ್ ಭಾಂಡಗೆ, ಕೃಷ್ಣಪ್ಪ ಗೌತಮ್, ರೋನಿತ್ ಮೋರೆ, ವಾಸುಕಿ ಕೌಶಿಕ್, ವಿಧ್ವತ್ ಕಾವೇರಪ್ಪ
ಬೆಂಚ್: ಅಭಿನವ್ ಮನೋಹರ್, ನಿಹಾಲ್ ಉಳ್ಳಾಲ್, ಮುರಳೀಧರ ವೆಂಕಟೇಶ್, ಜಗದೀಶ ಸುಚಿತ್

ಸೌರಾಷ್ಟ್ರ ಆಡುವ ಬಳಗ: ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್), ಶೆಲ್ಡನ್ ಜಾಕ್ಸನ್, ಜೇ ಗೋಹಿಲ್, ಸಮರ್ಥ ವ್ಯಾಸ್, ಅರ್ಪಿತ್ ವಾಸವಾದ, ಪ್ರೇರಕ್ ಮಂಕಡ್, ಚಿರಾಗ್ ಜಾನಿ,
ಧರ್ಮೇಂದ್ರಸಿನ್ಹ್ ಜಡೇಜಾ, ಕುಶಾಂಗ್ ಪಟೇಲ್, ಜಯದೇವ್ ಉನದ್ಕತ್ (ನಾಯಕ), ಪಾರ್ಥ್ ಭುತ್
ಬೆಂಚ್: ಚೇತನ್ ಸಕರಿಯಾ, ನವನೀತ್ ವೋರಾ, ವಿಶ್ವರಾಜ್ ಜಡೇಜಾ, ಯುವರಾಜ್ ಚುಡಾಸಮ, ಚೇತೇಶ್ವರ ಪೂಜಾರ

Story first published: Wednesday, November 30, 2022, 9:53 [IST]
Other articles published on Nov 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X