For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯ ಬದಲಿಗೆ ವಿಜಯ್ ಶಂಕರ್, ಗಿಲ್ ತಂಡಕ್ಕೆ ಸೇರ್ಪಡೆ

ಟಾಕ್​ ಶೋ ಕಾಫಿ ವಿತ್​ ಕರಣ್​ ವಿವಾದದಿಂದಾಗಿ ಪಾಂಡ್ಯ ಮತ್ತು ರಾಹುಲ್ ತವರಿಗೆ ಮರಳಿದ್ದಾರೆ. | Oneindia kannada
Vijay Shankar to replace Pandya in Aus, Gill for NZ tour

ಬೆಂಗಳೂರು, ಜನವರಿ 13: ಟಿವಿ ಶೋವೊಂದರಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣಕ್ಕೆ ಅಮಾನತುಗೊಂಡಿರುವ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ಬದಲಿಗೆ ಬೇರೆ ಆಟಗಾರರರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ತಮಿಳುನಾಡಿನ ಆಲ್ ರೌಂಡರ್ ವಿಜಯ್ ಶಂಕರ್ ಅವರು ಹಾರ್ದಿಕ್ ಪಾಂಡ್ಯ ಬದಲಿಗೆ ತಂಡವನ್ನು ಸೇರಲಿದ್ದಾರೆ. ಪಂಜಾಬಿನ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಅವರು ನ್ಯೂಜಿಲೆಂಡ್ ಸರಣಿಗೆ ಆಯ್ಕೆಯಾಗಿದ್ದಾರೆ. ಅಂಡರ್ 19 ವಿಶ್ವಕಪ್, ರಣಜಿ ಟ್ರೋಫಿಯ ಸಾಧನೆ ಗಿಲ್ ಅವರನ್ನು ಟೀಂ ಇಂಡಿಯಾಕ್ಕೆ ಸೇರುವಂತೆ ಮಾಡಿದೆ.

ಮಯಾಂಕ್ ಏಕಿಲ್ಲ: ವಿಜಯ್ ಶಂಕರ್ ಜತೆಗೆ ಕರ್ನಾಟಕದ ಮಯಾಂಕ್ ಅಗರವಾಲ್ ಅವರು ಆಯ್ಕೆಯಾಗುವ ಸುದ್ದಿ ಸಿಕ್ಕಿತ್ತು. ಕೆಎಲ್ ರಾಹುಲ್ ಬದಲಿಗೆ ಮಯಾಂಕ್ ಆಯ್ಕೆ ಖಚಿತವಾಗಿತ್ತು. ಆದರೆ, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮಯಾಂಕ್ ಅವರು ಇನ್ನು ಚೇತರಿಸಿಕೊಳ್ಳದ ಕಾರಣ, ಆಯ್ಕೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಬಾಲಿವುಡ್​ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಅವರ ​ ನಡೆಸಿಕೊಡುವ "ಕಾಫಿ ವಿತ್ ಕರಣ್​" ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಪಾಂಡ್ಯ ಮತ್ತು ರಾಹುಲ್,​ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಿಳೆಯರ ಕುರಿತಾಗಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಈ ಬಗ್ಗೆ ವ್ಯಾಪಕವಾಗಿ ಟೀಕೆಗಳು ಕೇಳಿ ಬಂದವು,

ಬಿಸಿಸಿಐ ಕೂಡಾ ಇಬ್ಬರನ್ನು ಏಕದಿನ ಪಂದ್ಯ ಆಡದಂತೆ ನಿಷೇಧ ಹೇರಿದೆ. ತನಿಖೆ ಪೂರ್ಣಗೊಳ್ಳುವ ತನಕ ಕ್ರಿಕೆಟ್ ಆಡುವುದು ಸದ್ಯವಿಲ್ಲದ ಕಾರಣ ಇಬ್ಬರು ಕೂಡಾ ಈಗ ಭಾರತಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲದೆ, ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಇಬ್ಬರು ಅಲಭ್ಯರಾಗುವ ಸಾಧ್ಯತೆಯಿದೆ.

Story first published: Sunday, January 13, 2019, 11:18 [IST]
Other articles published on Jan 13, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+