Haryana Assembly Elections: ಕಾಂಗ್ರೆಸ್ ಅಭ್ಯರ್ಥಿಗಳಾಗಿ ವಿನೇಶ್ ಫೋಗಟ್-ಬಜರಂಗ್ ಪುನಿಯಾ ಸ್ಪರ್ಧೆ ಸಾಧ್ಯತೆ
ಹರಿಯಾಣ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನೂ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.
ಈ ಭೇಟಿ ಬಳಿಕ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹರಿಯಾಣ ಚುನಾವಣಾ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕಳೆದ ವರ್ಷ ಭಾರತ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ದೇಶದ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂಥರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ಸ್ಟಾರ್ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲ್ಲಿಕ್ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ನಡೆದಿತ್ತು.
ಪ್ರತಿಭಟನೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಕುಸ್ತಿಪಟುಗಳಿಗೆ ಸೂಕ್ತ ಬೆಂಬಲ ವ್ಯಕ್ತವಾಗಲಿಲ್ಲ. ಇದರಿಂದಾಗಿ ಬಿಜೆಪಿ ಮೇಲೆ ವಿನೇಶ್ ಮತ್ತು ಬಜರಂಗ್ ಅವರಿಗೆ ಅಸಮಾಧಾನವಿದ್ದು, ಇದೀಗ ಕುಸ್ತಿಪಟುಗಳು ಕೈ ಪಕ್ಷ ಸೇರಲು ಮುಂದಾಗಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ.
2024ರ ಪ್ಯಾರಿಸ್ ಒಲಿಂಪಿಕ್ಸ್ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್‌ನಿಂದ ಭಾರತದ ವಿನೇಶ್ ಫೋಗಟ್ ಅನರ್ಹಗೊಂಡಿದ್ದರು. ಅವರು ನಿಗದಿತ ತೂಕಕ್ಕಿಂತ 100 ಗ್ರಾಮ್ ಹೆಚ್ಚಿನ ತೂಕ ಹೊಂದಿದ್ದರು. ಈ ಕಾರಣದಿಂದಾಗಿ ಅವರು ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು.
ಬಳಿಕ ಫೈನಲ್‌ನಿಂದ ಅನರ್ಹಗೊಳಿಸಿದ್ದನ್ನು ವಿನೇಶ್ ಪೋಗಟ್ ಪ್ರಶ್ನಿಸಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಕೋರ್ಟ್ ಮೊರೆ ಹೋಗಿದ್ದರು. ಮನವಿಯಲ್ಲಿ ತಮಗೆ ಜಂಟಿಯಾಗಿ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ನ್ಯಾಯಾಲಯವು ಅವರ ಮನವಿಯನ್ನು ತಿರಸ್ಕರಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications