For Quick Alerts
ALLOW NOTIFICATIONS  
For Daily Alerts
 

Watch video: ತಾಯ್ನಾಡಿಗೆ ಮರಳುತ್ತಿದ್ದಂತೆ ಕಣ್ಣೀರಿಟ್ಟ ವಿನೇಶ್ ಫೋಗಟ್

ಆಗಸ್ಟ್ 17 ಶನಿವಾರ, ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾರತಕ್ಕೆ ಮರಳಿದ್ದಾರೆ. ನವದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿನೇಶ್ ಫೋಗಟ್ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು.

ಈ ವೇಳೆ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಕೂಡ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಪದಕವಿಲ್ಲದೆ ಬರಿಗೈಯಲ್ಲಿ ಭಾರತಕ್ಕೆ ಬಂದಿದ್ದಕ್ಕೆ ಹತಾಶೆಯಿಂದ ವಿಮಾನ ನಿಲ್ದಾಣದಲ್ಲಿ ವಿನೇಶ್ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ವಿನೇಶ್‌ಗೆ ಧೈರ್ಯ ತುಂಬಿದರು. ಸಾಕ್ಷಿ ಮಲಿಕ್ ಕಣ್ಣಲ್ಲೂ ನೋವು ಸ್ಪಷ್ಟವಾಗಿ ಕಾಣಿಸುತ್ತಿತ್ತು.

Vinesh Phogat started crying as returned to India

ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿನೇಶ್ ಅವರನ್ನು ಬರ ಮಾಡಿಕೊಳ್ಳಲು ಏರ್‌ಪೋರ್ಟ್‌ ಹೊರಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಅವರು ಏರ್‌ಪೋರ್ಟ್‌ನಿಂದ ಹೊರಗೆ ಬರುತ್ತಿದ್ದಂತೆ ಅಭಿಮಾನಿಗಳು ಡ್ರಮ್ ಬಾರಿಸುವ ಮೂಲಕ ಸ್ವಾಗತಿಸಿದರು.

ಇದಾದ ಬಳಿಕ ವಿನೇಶ್ ಅವರು ದೆಹಲಿ ವಿಮಾನ ನಿಲ್ದಾಣದಿಂದ ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯ ಬಲಾಲಿ ಗ್ರಾಮಕ್ಕೆ ತೆರೆದ ಜೀಪ್‌ನಲ್ಲಿ ರೋಡ್ ಶೋ ನಡೆಸಿದರು . ಈ ವೇಳೆ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಅನೇಕ ಸ್ನೇಹಿತರು ಅವರೊಂದಿಗೆ ಇದ್ದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ವಿನೇಶ್ ಅವರನ್ನು ಬೆಂಬಲಿಸಿ ಜಯಘೋಷ ಕೂಗಿದರು.

ಪ್ಯಾರಿಸ್ ಒಲಿಂಪಿಕ್ಸ್ 2024ರ ಮಹಿಳೆಯರ 50 ಕೆಜಿ ಫ್ರಿ ಸ್ಟೈಲ್‌ ವಿಭಾಗದಲ್ಲಿ ಸೆಮಿಫೈನಲ್‌ನಲ್ಲಿ ಗೆಲುವು ದಾಖಲಿಸಿ ಭಾರತದ ವಿನೇಶ್‌ ಪೋಗಟ್‌ ಫೈನಲ್ ಪ್ರವೇಶಿಸಿದ್ದರು. ಆದರೆ ಫೈನಲ್‌ಗೂ ಮುನ್ನ ನಿಗದಿತ ತೂಕಕ್ಕಿಂತ ಹೆಚ್ಚಿನ ತೂಕ ಹೊಂದಿದ್ದರಿಂದ ಅವರನ್ನು ಅನರ್ಹ ಗೊಳಿಸಲಾಗಿತ್ತು.

ಅವರು ಇದನ್ನು ಪ್ರಶ್ನಿಸಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಕೋರ್ಟ್‌ ಮೊರೆ ಹೋಗಿದ್ದರು. ಮನವಿಯಲ್ಲಿ ತಮಗೆ ಜಂಟಿಯಾಗಿ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿದರು. ಆದರೆ ನ್ಯಾಯಾಲಯವು ಅವರ ಮನವಿಯನ್ನು ತಿರಸ್ಕರಿಸಿತ್ತು. ಪದಕದ ನಿರೀಕ್ಷೆಯಲ್ಲಿದ್ದ ಕೋಟ್ಯಾಂತರ ಭಾರತೀಯರ ಕ್ರೀಡಾಭಿಮಾನಿಗಳ ಬೆಳ್ಳಿ ಪದಕದ ಕನಸಿಗೆ ಕೊಡಲಿ ಪೆಟ್ಟು ಬಿದ್ದಿತ್ತು.

Story first published: Saturday, August 17, 2024, 12:15 [IST]
Other articles published on Aug 17, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+