Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Rishabh Pant: ಮುಂದಿನ ಟೆಸ್ಟ್‌ನಲ್ಲಿ ರಿಷಭ್‌ ಪಂತ್ ಆಡ್ತಾರಾ? ಇಲ್ಲಿದೆ ವೈರಲ್‌ ವಿಡಿಯೋ

ಭಾರತ ಹಾಗೂ ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯ ಮ್ಯಾಂಚೇಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಗೆಲ್ಲ ಬೇಕಾದ ಒತ್ತಡದಲ್ಲಿದೆ ಟೀಮ್ ಇಂಡಿಯಾ ಇದೆ. ಈಗಾಗಲೇ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಆಟಗಾರರು ಮ್ಯಾನೇಜ್ಮೆಂಟ್‌ ಚಿತ್ತ ಕದ್ದಿದ್ದಾರೆ. ಈ ಸಾಲಿನಲ್ಲಿ ಟೀಮ್ ಇಂಡಿಯಾ ಉಪನಾಯಕ ರಿಷಭ್‌ ಪಂತ್‌ ಸಹ ಕಾಣಿಸಿಕೊಳ್ಳುತ್ತಾರೆ. ಇವರು ತಮ್ಮ ಸ್ಥಿರ ಬ್ಯಾಟಿಂಗ್ ಪ್ರದರ್ಶನದ ಫಲವಾಗಿ ತಂಡಕ್ಕೆ ನೆರವಾಗಿದ್ದಾರೆ. ಆದರೆ ಇವರು ಮೂರನೇ ಟೆಸ್ಟ್‌ ವೇಳೆ ಗಾಯಕ್ಕೆ ತುತ್ತಾಗಿದ್ದರು.

ಲಾರ್ಡ್ಸ್‌ನಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ರಿಷಭ್ ಪಂತ್‌, ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ಅವರ ಎಸೆತವನ್ನು ಹಿಡಿಯಲು ಹೋದಾಗ ಎಡಗೈಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರು ಮೈದಾನದಲ್ಲಿ ವಿಕೆಟ್‌ ಕೀಪಿಂಗ್‌ ಮಾಡಲಿಲ್ಲ. ಇವರ ಅನುಪಸ್ಥಿತಿಯಲ್ಲಿ ಧ್ರುವ್ ಜುರೇಲ್‌ ವಿಕೆಟ್‌ ಕೀಪಿಂಗ್ ಮಾಡಿದರು. ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಆಡುತ್ತಾರಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಪ್ರಶ್ನೆಗೆ ಉತ್ತರ ಎಂಬಂತೆ ಒಂದು ದೃಶ್ಯ ಹೊರ ಬಂದಿದೆ.

Viral Video Confirms Rishabh Pant s Full Fitness Ahead of Crucial Manchester Test

ರಿಷಭ್‌ ಪಂತ್‌ ಅವರ ವಿಡಿಯೋ ನೋಡಿದರೆ ಅವರು ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ಕಾಣಿಸಿಕೊಳ್ಳುತ್ತಿದೆ. ಈ ವಿಡಿಯೋ ಈಗ ಸಾಮಾಜಿಕ ತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಕೆಟ್‌ ಕೀಪರ್‌ ರಿಷಭ್‌ ಯಾವುದೇ ತೊಂದರೆ ಇಲ್ಲದೆ ನೆಟ್ಸ್‌ನಲ್ಲಿ ಕಾಣಿಸಿಕೊಂಡರು. ಈ ವಿಡಿಯೋದಲ್ಲಿ ಇವರು ಫುಟ್ಬಾಲ್‌ ಆಡುವುದನ್ನು ಕಾಣಿಸಿಕೊಂಡಿದೆ. ಅಲ್ಲದೆ ಫೀಲ್ಡಿಂಗ್ ಅಭ್ಯಾಸವನ್ನು ಸಹ ಮಾಡಿದರು. ಅಲ್ಲದೆ ಇವರು ಪ್ಯಾಡ್ ಕಟ್ಟಿ ನೆಟ್ಸ್‌ನಲ್ಲಿ ಅಭ್ಯಾಸ ಮಾಡುವುದು ಕಾಣಿಸಿಕೊಂಡಿದೆ. ಈ ವಿಡಿಯೋವನ್ನು ರಿಷಭ್‌ ಪಂತ್‌ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.


ಈ ವಿಡಿಯೋವನ್ನು ನೋಡಿದ ಅಭಿಮಾನಿಗಳ ಮನದಲ್ಲಿ ಇವರು ಮೈದಾನಕ್ಕೆ ಇಳಿಯಲಿದ್ದಾರೆ ಎಂಬ ಭರವಸೆ ಹೆಚ್ಚಿದೆ. ಇವರು ಮೈದಾನಕ್ಕೆ ಇಳಿಯುವುದು ಅನಿವಾರ್ಯವಾಗಿದೆ. ಮ್ಯಾಂಚೆಸ್ಟರ್‌ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಕನಸುಕಾಣುತ್ತಿದೆ. ಈ ವೇಳೆ ಉಪನಾಯಕ ರಿಷಭ್‌ ಪಂತ್‌ ಮೈದಾನಕ್ಕೆ ಇಳಿಯುವುದು ಅನಿವಾರ್ಯವಾಗಿದೆ. ಇವರು ಈಗಾಗಲೇ ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಈಗಾಗಲೇ 3 ಪಂದ್ಯಗಳ 6 ಇನಿಂಗ್ಸ್‌ಗಳಲ್ಲಿ 70.83 ಸರಾಸರಿಯಲ್ಲಿ 425 ರನ್ ಸಿಡಿಸಿದ್ದಾರೆ. ಈ ವೇಳೆ ಇವರು ಮೊದಲ ಟೆಸ್ಟ್‌ ಪಂದ್ಯ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದರು. ಅಲ್ಲದೆ 2 ಅರ್ಧಶತಕಳನ್ನು ಸಹ ಸಿಡಿಸಿದ್ದಾರೆ.

ನಾಲ್ಕನೇ ಟೆಸ್ಟ್‌ ಯಾವಾಗ?

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ನಾಲ್ಕನೇ ಟೆಸ್ಟ್‌ ಪಂದ್ಯ ಮ್ಯಾಂಚೇಸ್ಟರ್‌ನಲ್ಲಿ ಜುಲೈ 23 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ ಹೇಗಿರಲಿದೆ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.

Story first published: Monday, July 21, 2025, 8:10 [IST]
Other articles published on Jul 21, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+