ದೊಡ್ಡ ಮೊತ್ತ ಕಲೆ ಹಾಕಿದರೂ ಭಾರತಕ್ಕೆ ಪ್ರಯಾಸದ ಜಯ: ವಿರಾಟ್, ರೋಹಿತ್ ದಾಖಲೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ 17 ರನ್ ಜಯ ಸಾಧಿಸಿದೆ. ರಾಂಚಿಯ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ದೊಡ್ಡ ಮೊತ್ತವನ್ನು ಚೇಸ್ ಮಾಡುವಲ್ಲಿ ಕೊನೆಯಲ್ಲಿ ಎಡವಿದರು. ಭಾರತದ ಬೌಲರ್‌ಗಳು ಸಹ ರನ್‌ಗಳನ್ನು ನೀಡದಂತೆ ತಡೆಯುವಲ್ಲಿ ವಿಫಲರಾದರು. ಪರಿಣಾಮ ಪಂದ್ಯ ಕೊನೆಯವರೆಗೂ ಸಾಗಿತು.
350 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ಹಿಂಬಾಲಿಸುವಲ್ಲಿ ದಕ್ಷಿಣ ಆಫ್ರಿಕ ಟಾಪ್ ಆರ್ಡರ್ ಬ್ಯಾಟರ್‌ಗಳು ವಿಫಲರಾದರು. ಏಡನ್ ಮಾರ್ಕ್ರಮ್, ರಿಯಾನ್ ರಿಕಲ್ಟನ್, ಕ್ವಿಂಟನ್ ಡಿಕಾಕ್ ರನ್ ಕಲೆ ಹಾಕುವಲ್ಲಿ ವಿಫಲರಾದರು. 11 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೋರ್ಜಿ ಜೋಡಿ ಕೊಂಚ ಆಧಾರವಾಯಿತು. ಈ ಜೋಡಿ 4ನೇ ವಿಕೆಟ್‌ಗೆ 62 ಎಸೆತಗಳಲ್ಲಿ 66 ರನ್ ಸೇರಿಸಿತು.

5ನೇ ವಿಕೆಟ್‌ಗೆ ಡೆವಾಲ್ಡ್ ಬ್ರೆವಿಸ್, ಮ್ಯಾಥ್ಯೂ ಬ್ರೀಟ್ಜ್ಕೆ 53 ರನ್ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಡೆವಾಲ್ಡ್ ಬ್ರೆವಿಸ್ 37 ರನ್ ಬಾರಿಸಿ ಔಟ್ ಆದರು. 6ನೇ ವಿಕೆಟ್‌ಗೆ ಮ್ಯಾಥ್ಯೂ ಬ್ರೀಟ್ಜ್ಕೆಗೆ ಸಾಥ್ ನೀಡಿದ ಮಾರ್ಕೊ ಜಾನ್ಸನ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 69 ಎಸೆತಗಳಲ್ಲಿ 97 ರನ್ ಸೇರಿಸಿತು. ಈ ವೇಳೆ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 72 ರನ್ ಬಾರಿಸಿದ್ದ ಮ್ಯಾಥ್ಯೂ ಬ್ರೀಟ್ಜ್ಕೆ ಇಲ್ಲದ ಹೊಡೆತಕ್ಕೆ ಮುಂದಾಗಿ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು.
ಮಾರ್ಕೊ ಜಾನ್ಸನ್ ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ವೇಳೆ ಇವರು 39 ಎಸೆತಗಳಲ್ಲಿ 8 ಬೌಂಡರಿ, 3 ಸಿಕ್ಸರ್ ಸಹಾಯದಿಂದ 70 ರನ್ ಸಿಡಿಸಿ ಮಿಂಚಿದರು. ಕೆಳ ಕ್ರಮಾಂಕದಲ್ಲಿ ಕಾರ್ಬಿನ್ ಬಾಷ್ 5 ಬೌಂಡರಿ, 4 ಸಿಕ್ಸರ್ ಸಹಾಯದಿಂದ 67 ರನ್ ಸಿಡಿಸಿ ಅಬ್ಬರಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 49.2 ಓವರ್‌ಗಳಲ್ಲಿ 332 ರನ್ ಸೇರಿಸಿ ಸೋಲು ಕಂಡಿತು.
ಭಾರತದ ಪರ ಕುಲ್‌ದೀಪ್ ಯಾದವ್ 68 ರನ್ ನೀಡಿ 4 ವಿಕೆಟ್ ಕಬಳಿಸಿದರು. ಹರ್ಷಿತ್ ರಾಣಾ 3, ಅರ್ಷದೀಪ್ ಸಿಂಗ್ 2 ವಿಕೆಟ್ ಕಬಳಿಸಿದರು.
ವಿರಾಟ್ ಶತಕ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಆರಂಭ ಕಳಪೆಯಾಗಿತ್ತು. ಯಶಸ್ವಿ ಜೈಸ್ವಾಲ್ ಬಿಗ್ ಇನಿಂಗ್ಸ್ ಕಟ್ಟಲಿಲ್ಲ. ರೋಹಿತ್ ಶರ್ಮಾ 51 ಎಸೆತಗಳಲ್ಲಿ 57 ರನ್ ಬಾರಿಸಿದರೆ, ಚೇಸಿಂಗ್ ಸ್ಟಾರ್ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 135 ರನ್ ಸಿಡಿಸಿದರು. ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಕೆಎಲ್ ರಾಹುಲ್ 60, ರವೀಂದ್ರ ಜಡೇಜಾ 32 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸುದರು. ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 349 ರನ್ ಸೇರಿಸಿತು.

ರೋಹಿತ್, ವಿರಾಟ್ ದಾಖಲೆ
ಟೀಮ್ ಇಂಡಿಯಾದ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟಿಗೆ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಇದಕ್ಕೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಭಾರತಕ್ಕಾಗಿ ಒಟ್ಟಿಗೆ 391 ಪಂದ್ಯಗಳನ್ನು ಆಡಿದ್ದಾರೆ. ರೋಹಿತ್, ವಿರಾಟ್ ಈ ದಾಖಲೆಯನ್ನು ಮೀರಿ ನಿಂತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications