Virat Kohli: ಗಂಗೂಲಿ ದಾಖಲೆಯ ಮೇಲೆ ಕೊಹ್ಲಿ ಕಣ್ಣು
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಅತ್ಯುತ್ತಮ ಪ್ರದರ್ಶನ ಮುಂದುವರೆದಿದೆ. ಟೀಮ್ ಇಂಡಿಯಾ ಎ ಗುಂಪಿನಲ್ಲಿ ಆಡಿರುವ ತನ್ನ ಎರಡು ಪಂದ್ಯಗಳನ್ನು ಗೆದ್ದು ಬೀಗಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಜಯಗಳಿಸುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಎ ಗುಂಪಿನಲ್ಲಿ ಭಾರತ ತನ್ನ ಕೊನೆ ಪಂದ್ಯವನ್ನು ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಆಡಲಿದೆ.
ಈಗಾಗಲೇ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಹೀಗಾಗಿ ಈ ಕೊನೆಯ ಪಂದ್ಯವು ಎರಡೂ ತಂಡಗಳಿಗೆ ಒಂದು ರೀತಿಯ ಅಭ್ಯಾಸವಾಗಿರುತ್ತದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೇಲೆ ಇದೆ.

ವಿರಾಟ್ ಕೊಹ್ಲಿ ಪಾಲಿಗೆ ಚಾಂಪಿಯನ್ಸ್ ಟ್ರೋಫಿ ಇದುವರೆಗೆ ಅದ್ಭುತವಾಗಿದೆ. ಅವರು ಕಠಿಣ ಪರಿಸ್ಥಿತಿಯಲ್ಲಿ ಪಾಕಿಸ್ತಾನ ವಿರುದ್ಧ ಶತಕ ಗಳಿಸಿದರು. ದುಬೈನ ಸುಡುವ ಬಿಸಿಲಿನಲ್ಲಿ ವಿರಾಟ್ ಅಜೇಯ 100 ರನ್ ಗಳಿಸಿ ಮಿಂಚಿದರು. ಇದಕ್ಕೂ ಮೊದಲು ಅವರು 72 ರನ್‌ಗಳನ್ನು ಪೂರ್ಣಗೊಳಿಸುತ್ತಿದ್ದಂತೆ ದಾಖಲೆ ಸೃಷ್ಟಿಸಿದ್ದಾರೆ. ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 14 ಸಾವಿರ ರನ್‌ಗಳನ್ನು ಪೂರೈಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದಲ್ಲದೆ, ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಗಂಗೂಲಿ ದಾಖಲೆ ಬ್ರೇಕ್?
ಪಾಕಿಸ್ತಾನ ವಿರುದ್ಧದ ಒಂದೇ ಪಂದ್ಯದಲ್ಲಿ ಹಲವು ಸಾಧನೆ ಮಾಡಿರುವ ವಿರಾಟ್ ಕೊಹ್ಲಿ, ಈಗ ಮತ್ತೊಂದು ದೊಡ್ಡ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ಫೀಲ್ಡರ್ ಆಗಬಹುದು. ಈ ಪಟ್ಟಿಯಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಮೊದಲ ಸ್ಥಾನದಲ್ಲಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಗಂಗೂಲಿ 12 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.
ಗಂಗೂಲಿ ನಂತರ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಸುರೇಶ್ ರೈನಾ ಮತ್ತು ಯುವರಾಜ್ ಸಿಂಗ್ ಹೆಸರುಗಳಿವೆ. ಈ ನಾಲ್ವರು ತಲಾ 8 ಕ್ಯಾಚ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮುಂದಿನ ಪಂದ್ಯದಲ್ಲಿ ವಿರಾಟ್ ಒಂದು ಕ್ಯಾಚ್ ಹಿಡಿಯುವ ಮೂಲಕ ದ್ರಾವಿಡ್, ರೈನಾ ಮತ್ತು ಯುವರಾಜ್ ಅವರನ್ನು ಹಿಂದಿಕ್ಕಬಹುದು. ಅಲ್ಲದೆ, ಈ ಟೂರ್ನಿಯಲ್ಲಿ ಕೊಹ್ಲಿ ಗಂಗೂಲಿ ದಾಖಲೆಯನ್ನು ಮುರಿಯಲು ಸಮರ್ಥರಾಗುತ್ತಾರೋ? ಇಲ್ಲವೋ? ಎಂಬುದನ್ನು ಕಾದು ನೋಡಬೇಕಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ಆಟಗಾರ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ. ಅವರು 15 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಅವರ ನಂತರ ಸೌರವ್ ಗಂಗೂಲಿ, ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೋ ಮತ್ತು ನ್ಯೂಜಿಲೆಂಡ್‌ನ ರಾಸ್ ಟೇಲರ್ ಇದ್ದಾರೆ. ಈ ಮೂವರೂ ತಲಾ 12 ಕ್ಯಾಚ್‌ಗಳನ್ನು ಹಿಡಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದ ಜೆಪಿ ಡುಮಿನಿ, ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ನ್ಯೂಜಿಲೆಂಡ್‌ನ ಡೇನಿಯಲ್ ವೆಟ್ಟೋರಿ ತಲಾ 9 ಕ್ಯಾಚ್‌ಗಳನ್ನು ಹಿಡಿದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications