Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆತನ ಅಗಲಿದ ತಂದೆ ಇಂದು ಹೆಮ್ಮೆ ಪಟ್ಟುಕೊಳ್ಳುತ್ತಾರೆ: ಕೊಹ್ಲಿ ಸಾಧನೆಗೆ ಯುವರಾಜ್ ಸಿಂಗ್ ಹೇಳಿದ್ದಿಷ್ಟು

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ 50ನೇ ಏಕದಿನ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ವಿಶ್ವದಾಖಲೆಯ ಶತ ಸಿಡಿಸಿ ಅಬ್ಬರಿಸಿದ್ದಾರೆ. ಸ್ವತಃ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲಿ ವಿರಾಟ್ ಕೊಹ್ಲಿ ಅವರದ್ದೇ ತವರಿನ ಅಂಗಳ ವಾಂಖೆಡೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಕೊಹ್ಲಿಯ ಈ ಸಾಧನೆಗೆ ಸಚಿನ್ ತೆಂಡೂಲ್ಕರ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇನ್ನು ವಿರಾಟ್ ಕೊಹ್ಲಿಯ ಈ ಸಾಧನೆಗೆ ಈಗ ವಿಶ್ವದೆಲ್ಲೆಡೆಯಿಂದ ಸಾಕಷ್ಟು ಮೆಚ್ಚುಗೆಗಳು ಹರಿದುಬರುತ್ತಿದೆ. ಟೀಮ್ ಇಂಡಿಯಾದ ದಿಗ್ಗಜ ಆಲ್‌ರೌಂಡರ್ ಯುವರಾಜ್ ಸಿಂಗ್ ಕೂಡ ವಿರಾಟ್ ಕೊಹ್ಲಿ ಸಾಧನೆಯ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಸಂದರ್ಭದಲ್ಲಿ ಕೊಹ್ಲಿಯ ಅಗಲಿದ ತಂದೆ ಈ ಸಾಧನೆಯಿಂದ ಸಂತೋಷಕೊಂಡಿರುತ್ತಾರೆ ಎಂದಿದ್ದಾರೆ ಯುವರಾಜ್ ಸಿಂಗ್.

Virat Kohli 50th Century: Yuvraj Singh congratulates Kohli on record breaking century

ವಿರಾಟ್ ಕೊಹ್ಲಿ ಜೊತೆಗೆ ಸುದೀರ್ಘ ಕಾಲ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿರುವ ದಿಗ್ಗಜ ಕ್ರಿಕೆಟಿಗ ಯುವರಾಜ್ ಸಿಂಗ್ ಕೊಹ್ಲಿ ಜೊತೆಗೆ ಅದ್ಭುತವಾದ ಬಾಂಧವ್ಯವನ್ನು ಹೊಂದಿದ್ದರು. ಇದೀಗ ಕೊಹ್ಲಿ ಅವರ ಈ ಐತಿಹಾಸಿಕ ಸಾಧನೆ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

"ಶ್ರೇಷ್ಠ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ 50ನೇ ಶತಕ ಸಿಡಿಸಿದ ಅಭೂತಪೂರ್ವ ಸಾಧನೆಗಾಗಿ ವಿರಾಟ್ ಕೊಹ್ಲಿಗೆ ಅಭಿನಂದನೆಗಳು. ಅವರ ಅಗಲಿದ ತಂದೆ ಇಂದು ಮೋಡದ ಮರೆಯಲ್ಲಿ ನಿಂತು ಮಗನ ಸಾಧನೆ ಕಂಡು ಬಹಳ ಹೆಮ್ಮೆ ಪಟ್ಟುಕೊಂಡಿರುತ್ತಾರೆ. ಈ ಪೀಳಿಗೆಯ ಶ್ರೇಷ್ಠ ಆಟಗಾರ" ಎಂದುಅಭಿನಂದನೆ ಸಲ್ಲಿಸಿದ್ದಾರೆ ಯುವರಾಜ್ ಸಿಂಗ್.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 113 ಎಸೆತಗಳನ್ನು ಎದುರಿಸಿದ್ದು 117 ರನ್‌ಗಳನ್ನು ಬಾರಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ಗೆ ಸೇರಿಕೊಂಡರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸೇರಿಕೊಂಡಿದೆ. 103.54ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಕೈಲ್ ಜೇಮಿಸನ್

Story first published: Wednesday, November 15, 2023, 21:21 [IST]
Other articles published on Nov 15, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+