ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ನಿವೃತ್ತಿಯ ಬಗ್ಗೆ ಸುದ್ದಿಯೊಂದು ಶನಿವಾರ ಮುಸುಕಿನ ಜಾವಾ ಹರಿದಾಡುತ್ತಿದೆ. ಆದರೆ ಈ ಬಗ್ಗೆ ವಿರಾಟ್ ಕೊಹ್ಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಿಸಿಸಿಐ ಆಯ್ಕೆ ಸಮಿತಿಗೆ ವಿರಾಟ್ ಕೊಹ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಬಿಸಿಸಿಐ ಆಯ್ಕೆ ಸಮಿತಿ ಸಹ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಾಮರ್ಶಿಸುವಂತೆ ವಿರಾಟ್‌ಗೆ ಕೇಳಿಕೊಂಡಿದೆ.
ಈಗಾಗಲೇ ಟಿ20 ಸ್ವರೂಪದಿಂದ ದೂರ ಸರಿದಿರುವ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್‌ನಿಂದಲೂ ದೂರ ಸರಿಯುವ ಬಗ್ಗೆ ನಿರ್ಧಾರವನ್ನು ಕೈಗೊಳ್ಳುತ್ತಿದ್ದಾರೆ. ವಿರಾಟ್ ಶೀಘ್ರದಲ್ಲಿ ಸಾಂಪ್ರದಾಯಿಕ ಕ್ರಿಕೆಟ್ ಸ್ವರೂಪವನ್ನು ತೊರೆಯಲು ಬಯಸುತ್ತಾರೆ ಎಂಬ ವರದಿಗಳಿವೆ. ವಿರಾಟ್ ಕೊಹ್ಲಿ ಕೆಲ ತಿಂಗಳುಗಳಿಂದ ಫಾರ್ಮ್‌ಗಾಗಿ ಪರದಾಟ ನಡೆಸುತ್ತಿದ್ದರು. ಇವರು ತವರಿನಲ್ಲಿ ನಡೆದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ವೇಳೆ ತಮ್ಮ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ವಿರಾಟ್ ಟೀಮ್ ಇಂಡಿಯಾದ ಅಸಾಮಾನ್ಯ ಟೆಸ್ಟ್ ಆಟಗಾರರಲ್ಲಿ ಒಬ್ಬರು. ಇವರ ಫಿಟ್ನೆಸ್ ಬಗ್ಗೆ ಎಲ್ಲರೂ ಫಿದಾ ಆಗಿದ್ದಾರೆ. ಈಗಿನ ಯುವ ಆಟಗಾರರಿಗೂ ವಿರಾಟ್ ಫಿಟ್ನೆಸ್‌ನಲ್ಲಿ ಸವಾಲನ್ನು ಎಸೆಯಬಲ್ಲ ಪ್ಲೇಯರ್. ವಿರಾಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಧಮಾಕೆದಾರ್ ಬ್ಯಾಟಿಂಗ್ ಮೂಲಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಇವರು ದೇಶೀಯ ಹಾಗೂ ವಿದೇಶಿ ಪಿಚ್‌ಗಳಲ್ಲೂ ಸ್ಥಿರ ಪ್ರದರ್ಶನ ನೀಡಿ ಮನ ಗೆದ್ದಿರುವ ಪ್ಲೇಯರ್. ವಿರಾಟ್ ಕೊಹ್ಲಿ ಬ್ಯಾಟರ್ ಆಗಿ ಹಾಗೂ ಒಬ್ಬ ನಾಯಕನಾಗಿ ಒಳ್ಳೆಯ ಸಾಧನೆ ಮಾಡಿದ್ದಾರೆ. ವಿರಾಟ್ ಟೆಸ್ಟ್ ಕ್ರಿಕೆಟ್‌ಗೆ ಗುಡ್ ಬಾಯ್ ಹೇಳಿದಾಗ ಇವರ ಸಾಧನೆಯ ಹೆಜ್ಜೆಯ ಗುರುತುಗಳ ಮೇಲೆ ಇತರ ಆಟಗಾರರು ಹೆಜ್ಜೆ ಇಡುತ್ತಾ ಸಾಗುತ್ತಾರೆ.
ವಿರಾಟ್ ಕೊಹ್ಲಿ ಟೀಮ್ ಇಂಡಿಯಾವನ್ನು ಬಹು ವರ್ಷಗಳ ಕಾಲ ಮುನ್ನಡೆಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್‌ಗೆ ಗುಡ್ ಬಾಯ್ ಹೇಳಿದ ಬಳಿಕ ವಿರಾಟ್ ತಂಡವನ್ನು ಮುನ್ನಡೆಸಿದರು. ಇವರ ನಾಯಕತ್ವದಲ್ಲಿ ತಂಡ ದೇಶ ಹಾಗೂ ವಿದೇಶಿ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿತು. ಇವರ ನಾಯಕತ್ವದಲ್ಲಿ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲುವು ದಾಖಲಿಸಿತ್ತು. ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ನೆಲದಲ್ಲೂ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿತ್ತು. ವಿರಾಟ್ 2022ರಲ್ಲಿ ತಮ್ಮ ಟೆಸ್ಟ್ ನಾಯಕತ್ವದಿಂದ ಕೆಳಗೆ ಇಳಿದರು.
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನ ಬೆಸ್ಟ್ ಕ್ಯಾಪ್ಟನ್‌ಗಳಲ್ಲಿ ಒಬ್ಬರು. ಇವರ ನಾಯಕತ್ವದಲ್ಲಿ ಭಾರತ ಆಡಿದ 68 ಟೆಸ್ಟ್‌ಗಳಲ್ಲಿ 40ರಲ್ಲಿ ಗೆಲುವು ಸಾಧಿಸಿದ್ದು, ಗೆಲುವಿನ ಶೇಕಡಾವಾರು 58.82 ಆಗಿದೆ.

ವಿರಾಟ್ ಕೊಹ್ಲಿ ಟೆಸ್ಟ್‌ನ ಬೆಸ್ಟ್ ಬ್ಯಾಟರ್‌ಗಳಲ್ಲಿ ಒಬ್ಬರು. ಇವರು ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ದ್ವಿಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ. 2019ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪುಣೆಯಲ್ಲಿ ನಡೆದ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ದ್ವಿಶತಕ ಬಾರಿಸಿದ್ದರು. ಇವರ ಬತ್ತಳಿಕೆಯಲ್ಲಿ 7 ಡಬಲ್ ಸೆಂಚುರಿಗಳಿವೆ. ಈ ಮೂಲಕ ಇವರು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿಯ ಈ ಸಾಧನೆ ಮುರಿಯುವುದು ಸುಲಭವಲ್ಲ. ಇವರು ಸತತ ನಾಲ್ಕು ಸರಣಿಗಳಲ್ಲಿ ದ್ವಿಶತಕವನ್ನು ಬಾರಿಸಿದ ಏಕೈಕ ಬ್ಯಾಟರ್. ಈ ಸಾಧನೆಯ ಮೂಲಕ ವಿರಾಟ್ ಕೊಹ್ಲಿ ಡಾನ್ ಬ್ರಾಡ್ಮನ್, ರಾಹುಲ್ ದ್ರಾವಿಡ್ ದಾಖಲೆ ಅಳಿಸಿ ಹಾಕಿದ್ದಾರೆ.
ಭಾರತದ ಪರ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದ ನಾಯಕರ ಪಟ್ಟಿಯಲ್ಲಿ ವಿರಾಟ್‌ಗೆ ಅಗ್ರ ಸ್ಥಾನ. ಇವರು ನಾಯಕರಾಗಿ 20 ಶತಕಗಳನ್ನು ಬಾರಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಸುನಿಲ್ ಗವಾಸ್ಕರ್ ಇದ್ದು, ಇವರು 11 ಶತಕ ಸಿಡಿಸಿದ್ದಾರೆ. ವಿರಾಟ್ 68 ಟೆಸ್ಟ್‌ಗಳಲ್ಲಿ 20 ಶತಕಗಳು ಮತ್ತು 18 ಅರ್ಧಶತಕಗಳು ಸೇರಿದಂತೆ 5,864 ರನ್ ಸಿಡಿಸಿದ್ದಾರೆ.