ಶ್ರೀಲಂಕಾದಲ್ಲಿ ಟಿ20 ಸರಣಿ, ಕೊಹ್ಲಿ, ಧೋನಿಗೆ ವಿಶ್ರಾಂತಿ!

Posted By:
Virat Kohli and MS Dhoni rested for Nidahas Trophy

ಮುಂಬೈ, ಫೆಬ್ರವರಿ 25: ಶ್ರೀಲಂಕಾದಲ್ಲಿ ನಡೆಯಲಿರುವ ಮೂರು ರಾಷ್ಟ್ರಗಳ ಟ್ವೆಂಟಿ20 ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾನುವಾರ ಪ್ರಕಟಿಸಿದೆ.

ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ಶ್ರೀಲಂಕಾ, ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೂರು ರಾಷ್ಟ್ರಗಳ ನಿದಹಾಸ್ ಟ್ವೆಂಟಿ20 ಕ್ರಿಕೆಟ್ ಸರಣಿಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ಹಿರಿಯ ಆಟಗಾರ ವಿಕೆಟ್ ಕೀಪರ್ ಎಂಎಸ್ ಧೋನಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ರೋಹಿತ್ ಶರ್ಮ ಅವರು ತಂಡವನ್ನು ಮುನ್ನಡೆಸಲಿದ್ದು, ಶಿಖರ್ ಧವನ್ ಅವರು ಪನಾಯಕರಾಗಿರುತ್ತಾರೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದರು.

ಕೊಹ್ಲಿ, ಧೋನಿ ಅಲ್ಲದೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಕುಲದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೂ ವಿಶ್ರಾಂತಿ ನೀಡಲಾಗಿದೆ.

ತಂಡ ಇಂತಿದೆ: ರೋಹಿತ್ ಶರ್ಮ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ವಿಜಯ್ ಶಂಕರ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್, ರಿಷಬ್ ಪಂತ್.

Story first published: Sunday, February 25, 2018, 14:43 [IST]
Other articles published on Feb 25, 2018

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ