Australia vs India: ಆಸೀಸ್ ಯುವ ಆಟಗಾರನಿಗೆ, ವಿರಾಟ್ ಕೊಹ್ಲಿ ಡಿಕ್ಕಿ: ವಾಗ್ವಾದ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ಮುಂದಾಯಿತು. ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಿತು. ಈ ವೇಳೆ ಆಸೀಸ್ ತಂಡದಲ್ಲಿ ಯುವ ಬ್ಯಾಟರ್ ಸ್ಯಾಮ್ ಕೋನ್‌ಸ್ಟಾಸ್ ಅವರಿಗೆ ಚೊಚ್ಚಲ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸುವ ಜವಾಬ್ದಾರಿ ನೀಡಲಾಯಿತು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಸ್ಯಾಮ್ ಕೋನ್‌ಸ್ಟಾಸ್ ಅಬ್ಬರಿಸಿದರು. ಇದೇ ವೇಳೆ ವಿರಾಟ್ ಕೊಹ್ಲಿ, ಸ್ಯಾಮ್ ಕೋನ್‌ಸ್ಟಾಸ್ ನಡುವೆ ಮಾತಿನ ಚಕಮಕಿ ನಡೆಯಿತು.
ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯ ಹಲವು ಕಾರಣಗಳಿಂದ ಸುದ್ದಿಯಾಗಿತ್ತು. ಇದೇ ವೇಳೆ ಟೀಮ್ ಇಂಡಿಯಾದ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಸ್ಯಾಮ್ ಕೋನ್‌ಸ್ಟಾಸ್ ನಡುವೆ ವಾಗ್ವಾದ ನಡೆಯಿತು. ಈ ವೇಳೆ ನಡೆದಿದ್ದು ಏನು ಎಂಬ ಬಗ್ಗೆ ವರದಿ ಇಲ್ಲಿದೆ.

ಆಗಿದ್ದೇನು?
19 ವರ್ಷದ ಬಲಗೈ ಬ್ಯಾಟ್ಸ್‌ಮನ್ ಸ್ಯಾಮ್ ಕೋನ್‌ಸ್ಟಾಸ್ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದರು. ಈ ವೇಳೆ ತಮ್ಮ ಅಬ್ಬರದ ಬ್ಯಾಟಿಂಗ್‌ನಿಂದಲೇ ಇವರು ಟೀಮ್ ಇಂಡಿಯಾವನ್ನು ಕಾಡಿದರು. ಈ ಪಂದ್ಯದಲ್ಲಿ ಇವರು ಜಸ್ಪ್ರಿತ್ ಬುಮ್ರಾ ಅವರನ್ನು ಸಹ ಟಾರ್ಗೆಟ್ ಮಾಡಿ ಬಿಗ್ ಹಿಟ್ ಬಾರಿಸಿದರು. ಪಂದ್ಯದ 11ನೇ ಓವರ್‌ನಲ್ಲಿ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾನ್ಸ್ಟನ್ಸ್ ಓವರ್‌ನ ನಾಲ್ಕನೇ ಎಸೆತದಲ್ಲಿ 2 ರನ್‌ಗಳನ್ನು ಬೇಗನೆ ಓಡಿದರು. ಆಗ ವಿರಾಟ್ ಕೊಹ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್‌ಗೆ ಡಿಕ್ಕಿ ಹೊಡೆದರು. ವಿರಾಟ್ ಕೊಹ್ಲಿ, ಸ್ಯಾಮ್ ಕೋನ್‌ಸ್ಟಾಸ್ ಗುರಾಯಿಸಿ ನೋಡಲು ಆರಂಭಿಸಿದರು.

ವಿರಾಟ್ ಕೊಹ್ಲಿ, ಸ್ಯಾಮ್ ಕೋನ್‌ಸ್ಟಾಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಮಾತಿನ ಚಕಮಕಿ ಆರಂಭವಾಯಿತು. ಇದೇ ವೇಳೆ ಈ ಪರಿಸ್ಥಿತಿಯನ್ನು ತಿಳಿಗೊಳಿಸಲು ಆಸ್ಟ್ರೇಲಿಯಾದ ಬ್ಯಾಟರ್ ಉಸ್ಮಾನ್ ಖವಾಜಾ ಹಾಗೂ ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಮಧ್ಯ ಪ್ರವೇಶಿಸಿದರು. ಈ ಸನ್ನಿವೇಶವನ್ನು ಕಂಡು ಫೀಲ್ಡ್ ಅಂಪೈರ್‌ಗಳು ಸಹ ಮಧ್ಯ ಪ್ರವೇಶಿಸಿ, ಪರಿಸ್ಥಿತಿಯನ್ನು ತಿಳಿ ಗೊಳಿಸಲು ಶ್ರಮಿಸಿದರು.
ಪದಾರ್ಪಣಾ ಪಂದ್ಯದಲ್ಲಿ ಅಬ್ಬರ
ಸ್ಯಾಮ್ ಕಾನ್‌ಸ್ಟಾಸ್ ಅವರು ತಮ್ಮ ಪದಾರ್ಪಣಾ ಪಂದ್ಯದಲ್ಲಿ ಆತ್ಮವಿಶ್ವಾಸದಿಂದ ಬ್ಯಾಟ್ ಮಾಡಿದರು. ಈ ವೇಳೆ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಮ್ ಇಂಡಿಯಾದ ಅನುಭವಿ ಜಸ್ಪ್ರಿತ್ ಬುಮ್ರಾ ಅವರಿಗೆ ಸಿಕ್ಸರ್‌ಗಳನ್ನು ಬಾರಿಸಿದರು. ಬುಮ್ರಾ ಅವರು ಈ ಸರಣಿಯಲ್ಲಿ ಸ್ಥಿರವಾಗಿ ಬೌಲಿಂಗ್ ನಡೆಸಿದ್ದರು. ಆದರೆ ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಇವರ ಆತ್ಮವಿಶ್ವಾಸಕ್ಕೆ ಸ್ಯಾಮ್ ಕಾನ್‌ಸ್ಟಾಸ್ ಬ್ರೇಕ್ ಹಾಕಿದರು. ಸ್ಯಾಮ್ ಕಾನ್‌ಸ್ಟಾಸ್ ಚುಟುಕು ಫಾರ್ಮೆಟ್ ರೀತಿ ಬ್ಯಾಟ್ ಮಾಡಿದರು. ಇವರು ಕೇವಲ 52 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. 65 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ಸೇರಿದಂತೆ 60 ರನ್ ಬಾರಿಸಿ ರವೀಂದ್ರ ಜಡೇಜಾ ಅವರ ಎಸೆತದಲ್ಲಿ ಔಟ್ ಆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications