Virat Kohli: ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಕೆರಳಿದ ವಿರಾಟ್ ಕೊಹ್ಲಿ
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಬ್ರಿಸ್ಪೇನ್ ಟೆಸ್ಟ್ ಪಂದ್ಯ ಡ್ರಾಗೊಂಡ ಬಳಿಕ ಭಾರತ ತಂಡ ಮುಂದಿನ ಪಂದ್ಯಕ್ಕೆ ಸಜ್ಜಾಗಿದೆ. ಇದಕ್ಕಾಗಿ ಟೀಮ್ ಇಂಡಿಯಾ ಮೆಲ್ಬೋರ್ನ್ ತಲುಪಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಡಿಸೆಂಬರ್ 26 ರಿಂದ ಮೆಲ್ಬೋರ್ನ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಮೆಲ್ಬೋರ್ನ್ ಟೆಸ್ಟ್ ಪಂದ್ಯವನ್ನು ಗೆದ್ದು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸುವ ನಿರೀಕ್ಷೆಯಲ್ಲಿ ಉಭಯ ತಂಡಗಳಿವೆ. ಇದಕ್ಕೂ ಮೊದಲು ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ವಿರುದ್ಧ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕೋಪಗೊಂಡಿದ್ದಾರೆ.
ವಿರಾಟ್ ಕೊಹ್ಲಿ ಮಹಿಳಾ ವರದಿಗಾರ್ತಿಯೊಂದಿಗೆ ಜಗಳವಾಡಿದ್ದಾರೆ. ಏರ್‌ಪೋರ್ಟ್‌ನಿಂದ ಹೊರಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಮಾಧ್ಯಮಗಳ ಮೇಲೆ ವಿರಾಟ್ ಕೊಹ್ಲಿ ಕೋಪಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ವಿರಾಟ್ ಕೊಹ್ಲಿ ಇಷ್ಟೊಂದು ಕೋಪಗೊಳ್ಳಲು ಇಲ್ಲಿದೆ ಅಸಲಿ ಕಾರಣ.

ವಿರಾಟ್ ಕೋಪಕ್ಕೆ ಕಾರಣವೇನು?
ವಿರಾಟ್ ಕೊಹ್ಲಿ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಮಹಿಳಾ ಪತ್ರಕರ್ತೆಯೊಂದಿಗೆ ತೀವ್ರ ವಾಗ್ವಾದಕ್ಕೆ ಇಳಿದಿರುವುದು ಕಂಡುಬಂದಿದೆ. ವರದಿಗಳ ಪ್ರಕಾರ, ಆಸ್ಟ್ರೇಲಿಯಾದ ಮಾಧ್ಯಮದವರು ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ಕೊಹ್ಲಿ ಮತ್ತು ಅವರ ಕುಟುಂಬಸ್ಥರನ್ನು ನೋಡಿ ವಿಡಿಯೋ ಮಾಡಿದ್ದಾರೆ. ಇದರಿಂದಾಗಿ ಸಿಟ್ಟಿಗೆದ್ದ ವಿರಾಟ್ ಕೊಹ್ಲಿ ಮಹಿಳಾ ಪತ್ರಕರ್ತೆಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಇಷ್ಟೇ ಅಲ್ಲದೆ, ಬೇಸರಗೊಂಡಿರುವ ಕೊಹ್ಲಿ, 'ನನ್ನನ್ನು ಕೇಳದೆ ನೀವು ನನ್ನ ಮಕ್ಕಳ ಫೋಟೋಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಸಾಧ್ಯವಿಲ್ಲ' ಎಂದು ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸೆಲೆಬ್ರಿಟಿಗಳ ಚಿತ್ರೀಕರಣಕ್ಕೆ ಯಾವುದೇ ನಿರ್ಬಂಧಗಳಿಲ್ಲ. ಆದರೂ ವಿರಾಟ್ ಕೊಹ್ಲಿ ಅವರು ಮಾಧ್ಯಮಗಳ ಮೇಲೆ ಗರಂ ಆಗಿರುವುದು ಚರ್ಚೆಗೆ ಕಾರಣವಾಗಿದೆ. ಮಾಧ್ಯಮಗಳಿಗೆ ಎಚ್ಚರಿಕೆ ನೀಡುವಾಗ ವಿರಾಟ್ ಬಹಳ ಕೋಪಗೊಂಡಿರುವುದು ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೆರೆಯಾಗಿದೆ.
ವಿರಾಟ್ ಕೊಹ್ಲಿ ಯಾವಾಗಲೂ ತಮ್ಮ ಮಕ್ಕಳಿಗೆ ಖಾಸಗಿತನವನ್ನು ಬಯಸುತ್ತಾರೆ. ಅದು ಭಾರತದಲ್ಲಿರಲಿ ಅಥವಾ ವಿದೇಶದಲ್ಲಿರಲಿ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ತಮ್ಮ ಮಕ್ಕಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಾಗಲೂ, ಮಕ್ಕಳ ಮುಖಗಳನ್ನು ಎಮೋಜಿಗಳೊಂದಿಗೆ ಮರೆ ಮಾಡಿರುತ್ತಾರೆ. ಹಲವು ಬಾರಿ ವಿರಾಟ್ ತಮ್ಮ ಮಕ್ಕಳ ಫೋಟೋ ವಿಡಿಯೋ ಮಾಡಬೇಡಿ ಎಂದು ವಿಮಾನ ನಿಲ್ದಾಣದಲ್ಲಿ ಮನವಿ ಮಾಡುತ್ತಿರುವುದು ಸಹಾ ನಡೆದಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಬಗ್ಗೆ ನೋಡುವುದಾದರೆ, ಆಸ್ಟ್ರೇಲಿಯಾ ಅಡಿಲೇಡ್ ಟೆಸ್ಟ್‌ನಲ್ಲಿ ಜಯಗಳಿಸುವ ಮೂಲಕ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯದ ಗೆಲುವಿನ ನಂತರ ಟೀಮ್ ಇಂಡಿಯಾದ ಮುನ್ನಡೆಯೂ ಕೊನೆಗೊಂಡಿದೆ. ಮತ್ತೊಂದೆಡೆ ಸತತ ಮಳೆಯಿಂದಾಗಿ ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗಿತ್ತು. ಇದೀಗ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಗುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications