ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ ಮೈದಾನಕ್ಕೆ ಇಳಿಯುವುದು ಯಾವಾಗ?
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಬೆಳಗ್ಗೆ ದಿಢೀರ ನಿವೃತ್ತಿಯ ನಿರ್ಧಾರವನ್ನು ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಈ ವೇಳೆ ಅಭಿಮಾನಿಗಳಲ್ಲಿ ಮೂಡುತ್ತಿರುವ ಪ್ರಶ್ನೆ ಇನ್ನು ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡದ ಪರ ಆಡುವುದನ್ನು ನೋಡುವುದು ಯಾವಾಗ ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ. ಇದಕ್ಕೆ ಉತ್ತರ ಇಲ್ಲಿದೆ.
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವೈಟ್ ಜೆರ್ಸಿ ಬಿಚ್ಚಿಟ್ಟಿದ್ದಾರೆ. ಇವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದು ಅಭಿಮಾನಿಗಳಿಗೆ ದೊಡ್ಡ ಹೊಡೆತ ನೀಡಿದೆ. ಈಗಾಗಲೇ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ವಿರಾಟ್, ಈಗ ಟೆಸ್ಟ್ ಕ್ರಿಕೆಟ್‌ಗೂ ಗುಡ್ ಬಾಯ್ ಹೇಳಿದ್ದಾರೆ. ಈ ಮೂಲಕ ಭಾರತದ ಒಂದು ಯುಗದ ಅಂತ್ಯವಾಗಿದೆ. ತನ್ನ ಸ್ನೇಹಿತ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ ಬೆನ್ನಲ್ಲೆ ವಿರಾಟ್ ನಿವೃತ್ತಿ ಘೋಷಿಸಿರುವುದು ಟೀಮ್ ಇಂಡಿಯಾಕ್ಕೆ ದೊಡ್ಡ ಪೆಟ್ಟ ನೀಡಿದೆ. ಇನ್ನು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ತಂಡದ ಪರ ಕಣಕ್ಕೆ ಇಳಿಯಲಿದ್ದಾರೆ.

ಸದ್ಯ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಆಡುತ್ತಿದ್ದಾರೆ. ಇದಾದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ಅನುಭವಿ ಆಟಗಾರರು ಇಲ್ಲದೇ ಡ್ರೆಸ್ಸಿಂಗ್ ರೂಮ್ ರೂಮ್ ಬಣಗುಟ್ಟುತ್ತಿದೆ. ಇಂಗ್ಲೆಂಡ್ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವ ಮುನ್ನವೇ ವಿರಾಟ್ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಅಪಾರ ಅಭಿಮಾನಿಗಳಿಗೆ ಬೇಸರ ತಂದಿದೆ. ಬಿಸಿಸಿಐ ಆಯ್ಕೆ ಸಮಿತಿ ತಮ್ಮ ನಿವೃತ್ತಿ ನಿರ್ಧಾರವನ್ನು ಪರಾಮರ್ಶಿಸುವಂತೆ ವಿರಾಟ್ ಕೊಹ್ಲಿಗೆ ಕೇಳಿಕೊಂಡಿತ್ತು. ಆದರೆ ವಿರಾಟ್ ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ.
ಕೊಹ್ಲಿ ಮೈದಾನಕ್ಕೆ ಇಳಿಯುವುದು ಯಾವಾಗ?
ಟೀಮ್ ಇಂಡಿಯಾದ ಪರ ವಿರಾಟ್ ಕೊಹ್ಲಿ ಯಾವಾಗ ಅಂಗಳಕ್ಕೆ ಇಳಿಯುತ್ತಾರೆ ಎಂಬ ಪ್ರಶ್ನೆಗಳು ಆರಂಭವಾಗಿವೆ. ಅಸಲಿಗೆ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ನಡೆಯಲಿದೆ. ಈ ಪ್ರವಾಸದ ವೇಳೆ ಏಕದಿನ ಹಾಗೂ ಟಿ20 ಪಂದ್ಯಗಳು ಇರುವುದಿಲ್ಲ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ಸರಣಿ ಆಗಸ್ಟ್ 17 ರಂದು ಆರಂಭಾವಾಗಲಿದೆ. ಈ ವೇಳೆ ಉಭಯ ದೇಶಗಳ ಮಧ್ಯೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಪ್ರವಾಸದ ಬಗ್ಗೆ ಬಿಸಿಸಿಐ ಇನ್ನು ಅಧಿಕೃತ ಮಾಹಿತಿ ನೀಡಿಲ್ಲ.

ಭಾರತ ಮತ್ತು ಬಾಂಗ್ಲಾದೇಶ ನಡುವೆ ಏಕದಿನ ಸರಣಿ ನಡೆಯಲಿದೆ. ಸರಣಿಯಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಇದರ ಮೊದಲ ಪಂದ್ಯ ಆಗಸ್ಟ್ 17 ರಂದು ನಡೆಯಲಿದೆ. ಅಂದರೆ ವಿರಾಟ್ ಟೀಮ್ ಇಂಡಿಯಾ ಪರ ಇನ್ನು ಸುಮಾರು ಮೂರು ತಿಂಗಳ ಬಳಿಕ ಅಂಗಳಕ್ಕೆ ಇಳಿಯಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ವಿರಾಟ್ ಆಗಸ್ಟ್‌ನಲ್ಲಿ ಮೈದಾನಕ್ಕೆ ಇಳಿಯಬಹುದಾಗಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇಬ್ಬರೂ ಫಿಟ್ ಆಗಿದ್ದರೆ ಏಕದಿನ ಕ್ರಿಕೆಟ್ ಆಡಬಹುದಾಗಿದೆ ಎಂದು ಈ ಹಿಂದೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದರು. ಈಗ ಇವರಿಬ್ಬರೂ ಟಿ20 ಹಾಗೂ ಟೆಸ್ಟ್‌ಗೆ ವಿದಾಯ ಹೇಳಿದ್ದು, ಏಕದಿನ ಪಂದ್ಯಗಳತ್ತ ಮಾತ್ರ ಚಿತ್ತ ನೆಟ್ಟಿದ್ದಾರೆ. ಇದನ್ನು ನೋಡಿದ್ರೆ, ಇವರ ಲೆಕ್ಕಾಚಾರ ಏನು ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications