ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ 3ನೇ ವಿವಾಹ ವಾರ್ಷಿಕೋತ್ಸವ

ನವದೆಹಲಿ: ಡಿಸೆಂಬರ್ 11ಕ್ಕೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 3ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದಾರೆ. 2017ರ ಡಿಸೆಂಬರ್ 11ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಸದ್ಯ ಪ್ರವಾಸ ಸರಣಿಗಾಗಿ ಕೊಹ್ಲಿ ಆಸ್ಟ್ರೇಲಿಯಾದಲ್ಲಿದ್ದಾರೆ.
3ನೇ ವರ್ಷದ ವಾರ್ಷಿಕೋತ್ಸವದ ಖುಷಿಯನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೇಸ್ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಹಂಚಿಕೊಂಡಿರುವ ಕೊಹ್ಲಿ, ಜೊತೆಯಾಗಿ 3 ವರ್ಷ ಕಳೆದಿದ್ದೇವೆ. ಬದುಕಿನುದ್ದಕ್ಕೂ ಜೊತೆಯಾಗಿರಲಿದ್ದೇವೆ,' ಎಂದು ಬರೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡ ಏಕದಿನ ಮತ್ತು ಟಿ20ಐ ಸರಣಿ ಮುಗಿಸಿದೆ. ಇನ್ನು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇತ್ತಂಡಗಳ ಕುತೂಹಲಕಾರಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ಕ್ಕೆ ಆರಂಭಗೊಳ್ಳಲಿದೆ.
ನಾಲ್ಕ ಪಂದ್ಯಗಳ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಕೊಹ್ಲಿ ಆಡುತ್ತಿಲ್ಲ. ಜನವರಿಯಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮಗುವಿಗೆ ಜನ್ಮ ನೀಡುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ. ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಿದ ಬಳಿಕ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications