For Quick Alerts
ALLOW NOTIFICATIONS  
For Daily Alerts
 

Virat Kohli: ಆರೆಂಜ್ ಕ್ಯಾಪ್ ಓಟದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ

ಐಪಿಎಲ್ 2025 ರಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸುತ್ತಿದ್ದಾರೆ. ಏಪ್ರಿಲ್ 20 ರ ಭಾನುವಾರದಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಪ್ರದರ್ಶನಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಕೂಡ ಸಿಕ್ಕಿತು.

ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳು ವಿಕೆಟ್‌ಗಳಿಂದ ಸೋಲಿಸಿತು. ಪಂಜಾಬ್ ನೀಡಿದ 158 ರನ್‌ಗಳ ಗೆಲುವಿನ ಗುರಿಯನ್ನು ಆರ್‌ಸಿಬಿ 18.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ಗಳನ್ನು ಕಳೆದುಕೊಂಡು ತಲುಪಿತು. ವಿರಾಟ್ ಕೊಹ್ಲಿ ಅಜೇಯ 73 ರನ್ ಗಳಿಸಿದರು. ಈ ಮೂಲಕ ಅವರು ಐಪಿಎಲ್‌ ಸೀಸನ್‌ವೊಂದರಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರನಿಗೆ ನೀಡುವ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

Virat Kohli appears in the IPL 2025 Orange Cap race

ಚಂಡೀಗಢದ ಮುಲ್ಲನ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬೌಲರ್ಸ್‌ಗೆ ವಿರಾಟ್ ಕೊಹ್ಲಿ ಬೆವರಿಳಿಸಿದರು. ಇದರೊಂದಿಗೆ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಅಜೇಯ 73 ರನ್ ಬಾರಿಸಿದರು. ಈ ಇನ್ನಿಂಗ್ಸ್ ಮೂಲಕ ಕೊಹ್ಲಿ ಅವರು ಐಪಿಎಲ್‌ 2025ರಲ್ಲಿ ಅತಿ ಹೆಚ್ಚು ರನ್ ಗಳಿಸಿವರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

ಐಪಿಎಲ್ 2025 ರಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಪೋಟಕ ಬ್ಯಾಟರ್ ನಿಕೋಲಸ್ ಪೂರನ್ ಮೊದಲ ಸ್ಥಾನದಲ್ಲಿದ್ದಾರೆ. ಇದುವರೆಗೆ ಪೂರನ್ ಆಡಿರುವ 8 ಪಂದ್ಯಗಳಿಂದ 368 ರನ್ ಗಳಿಸಿದ್ದು, 4 ಅರ್ಧಶತಕಗಳನ್ನು ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ತಂಡದ ಯುವ ಬ್ಯಾಟರ್ ಬಿ ಸಾಯಿ ಸುದರ್ಶನ್ ಆಡಿರುವ 7 ಪಂದ್ಯಗಳಲ್ಲಿ ಒಟ್ಟು 365 ರನ್ ಗಳಿಸಿದ್ದಾರೆ. ಅವರು ಕೂಡ ನಾಲ್ಕು ಅದ್ಭುತ ಅರ್ಧಶತಕ ಸಿಡಿಸಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಆಡಿರುವ 8 ಪಂದ್ಯಗಳಿಂದ 333 ರನ್ ಕಲೆ ಹಾಕಿದ್ದು, 2 ಅರ್ಧಶತಕ ಹೊಂದಿದ್ದಾರೆ. ವಿರಾಟ್ ಕೊಹ್ಲಿ ಕೂಡ ಆಡಿರುವ 8 ಪಂದ್ಯಗಳಿಂದ 332 ರನ್ ಸಿಡಿಸಿದ್ದು, ನಾಲ್ಕು ಅರ್ಧಶತಕವನ್ನು ಗಳಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿಯೂ ವಿರಾಟ್ ಕೊಹ್ಲಿ ಅವರು ತಮ್ಮ ಸ್ಥಿರ ಪ್ರದರ್ಶನವನ್ನು ಮುಂದುವರೆಸಿದರೆ, ಮತ್ತೊಂದು ಆರೆಂಜ್ ಕ್ಯಾಪ್ ಧರಿಸುವುದರಲ್ಲಿ ಅನುಮಾನವಿಲ್ಲ.

ಐಪಿಎಲ್ 2025ರಲ್ಲಿ ಟಾಪ್-5 ಹೆಚ್ಚು ರನ್ ಗಳಿಸಿದವರು

ನಿಕೋಲಸ್ ಪೂರನ್- 8 ಪಂದ್ಯ, 368 ರನ್
ಬಿ ಸಾಯಿ ಸುದರ್ಶನ್- 7 ಪಂದ್ಯ, 365 ರನ್
ಸೂರ್ಯಕುಮಾರ್ ಯಾದವ್- 8 ಪಂದ್ಯ, 333 ರನ್
ವಿರಾಟ್ ಕೊಹ್ಲಿ- 8 ಪಂದ್ಯ, 332 ರನ್
ಜೋಸ್ ಬಟ್ಲರ್- 7 ಪಂದ್ಯ, 315 ರನ್

Story first published: Monday, April 21, 2025, 14:45 [IST]
Other articles published on Apr 21, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+