ಕೊಹ್ಲಿ ಫಾರ್ಮ್ ಕಂಡುಕೊಳ್ಳಲು ವೇದಿಕೆ ಸಜ್ಜು: ಏಷ್ಯಾಕಪ್‌ಗೆ ಮುನ್ನ ಕೊಹ್ಲಿ ಆಡಲಿದ್ದಾರೆ ಈ ಸರಣಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಬಳಿಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸುಮಾರು ಒಂದು ತಿಂಗಳ ವಿರಾಮ ತೆಗೆದುಕೊಂಡಿದ್ದಾರೆ. ಆದರೆ ಈಗ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ವಿರಾಟ್ ಕೊಹ್ಲಿ ನಿರೀಕ್ಷೆಗೂ ಮುನ್ನವೇ ಭಾರತ ತಂಡದಲ್ಲಿ ಮತ್ತೆ ಕಣಕ್ಕಿಳಿಯುವ ಸಾಧ್ಯತೆಯಿದೆ. ವೆಸ್ಟ್ ಇಂಡಿಸ್ ವಿರುದ್ಧದ ಸರಣಿಗೆ ವಿಶ್ರಾಂತಿ ನಿಡಿದರೂ ಫಾರ್ಮ್‌ಗೆ ಮರಳುವ ದೃಷ್ಟಿಕೋನದಿಂದ ಏಷ್ಯಾ ಕಪ್‌ಗೆ ಮುನ್ನವೇ ಭಾರತ ತಂಡದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮಾಜಿ ನಾಯಕ ವಿರಾಟ್ ಕೊಹ್ಲಿ ಎಷ್ಯಾ ಕಪ್ ಟೂರ್ನಿಗೆ ಮುನ್ನ ಫಾರ್ಮ್‌ಗೆ ಮರಳಬೇಕು ಎಂಬ ನಿರೀಕ್ಷೆಯಲ್ಲಿದೆ. ಹೀಗಾಗಿ ಮುಂದಿನ ತಿಂಗಳು ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುವ ಸಾಧ್ಯತೆಯಿದೆ. ಏಷ್ಯಾ ಕಪ್ ಟೂರ್ನಿ ಹಾಗೂ ಟಿ20 ವಿಶ್ವಕಪ್‌ಗೆ ಮುನ್ನ ವಿರಾಟ್ ಕೊಹ್ಲಿ ಕೊಹ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದು ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳ ಬೇಕಿರುವ ದೃಷ್ಟಿಕೋನದಿಂದ ಕೊಹ್ಲಿ ಜಿಂಬಾಬ್ವೆ ವಿರುದ್ಧದ ಕಣಕ್ಕಿಳಿಯುವ ಸಾಧ್ಯತೆಯಿದೆ.

ಏಷ್ಯಾಕಪ್‌ಗೆ ಮುನ್ನ ಫಾರ್ಮ್ ಕಂಡುಕೊಳ್ಳಲು ಸಹಾಯ
ಈ ವಿಚಾರವಾಗಿ ಇನ್‌ಸೈಡ್ ಸ್ಪೋರ್ಟ್‌ಗೆ ಆಯ್ಕೆ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದಾರೆ. "ಮಾನಸಿಕ ಒತ್ತಡದಿಂದ ಹೊರಬರಲು ಹಾಗೂ ಫಾರ್ಮ್‌ಗೆ ಮರಳಲು ಕೊಹ್ಲಿಗೆ ಈ ವಿಶ್ರಾಂತಿಯನ್ನು ನೀಡಲಾಗಿದೆ. ಆದರೆ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಭಾಗಿಯಾಗದೆ ಫಾರ್ಮ್‌ಗೆ ಮರಲಲು ಸಾಧ್ಯವಿಲ್ಲ. ಹಾಗಾಗಿ ಅವರು ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಆಡುವುದನ್ನು ನಾವು ಬಯಸುತ್ತೇವೆ. ಅದು ಅವರ ನೆಚ್ಚಿನ ಫಾರ್ಮಾಟ್ ಆಗಿದ್ದು ಏಷ್ಯಾಕಪ್‌ಗೆ ಮುನ್ನ ಅವರು ಫಾರ್ಮ್ ಕಂಡುಕೊಳ್ಳಲು ಸಹಾಯವಾಗಲಿದೆ. ಆಯ್ಕೆಯ ಸಂದರ್ಭ ಹತ್ತಿರವಾದಾಗ ನಾವು ಈ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ" ಎಂದಿದ್ದಾರೆ.

ದ್ವಿತೀಯ ದರ್ಜೆಯ ತಂಡ ಕಳುಹಿಸುವ ಸಾಧ್ಯತೆ
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನಿಡುವ ಸಾಧ್ಯತೆಯಿದೆ. ಶಿಖರ್ ಧವನ್ ಅಥವಾ ಕೆಎಲ್ ರಾಹುಲ್ ನೇತೃತ್ವದಲ್ಲಿ ಭಾರತದ ದ್ವಿತೀಯ ದರ್ಜೆಯ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳು ಸಾಧ್ಯತೆಯಿದೆ. ಆದರೆ ಈ ಸರಣಿಯ ಮುಕ್ತಾಯವಾಗುತ್ತಿದ್ದಂತೆಯೇ ಏಷ್ಯಾಕಪ್ 2022 ಟೂರ್ನಿ ಆರಂಭವಾಗಲಿದೆ. ಇದು ಶ್ರೀಲಂಕಾದ ಬದಲಿಗೆ ಯುಎಇನಲ್ಲಿ ನಡೆಯುವ ಸಾಧ್ಯತೆಯಿದೆ.

ವಿಂಡೀಸ್ ವಿರುದ್ಧದ ಸರಣಿಗೆ ಸಜ್ಜಾಗಿದೆ ಭಾರತ
ಸದ್ಯ ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನಾಡಲಿ ಸಜ್ಜಾಗಿದೆ. ಜುಲೈ 22ರಿಂದ 27ರ ಮಧ್ಯೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಟ್ರನಿಡಾಡ್‌ನ ಪೋರ್ಟ್ ಆಫ್ ಸ್ಪೈನ್‌ನಲ್ಲಿರುವ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆಯೋಜನೆಯಾಗಲಿದೆ. ಭಾರತದ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಅನುಭವಿ ಶಿಖರ್ ಧವನ್ ಭಾರತ ತಂಡವನ್ನು ಮುನ್ನಡೆಸಲಿದ್ದು, ರವೀಂದ್ರ ಜಡೇಜಾ ಉಪನಾಯಕನಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ

ಆರು ವರ್ಷಗಳ ಬಳಿಕ ಜಿಂಬಾಬ್ವೆ ಪ್ರವಾಸ
ಟೀಂ ಇಂಡಿಯಾ ಆರು ವರ್ಷಗಳ ಬಳಿಕ ಮೊದಲ ಬಾರಿಗೆ ಜಿಂಬಾಬ್ವೆ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನಾಡಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಆಗಸ್ಟ್ 18, 20 ಮತ್ತು 22ರಂದು ಹರಾರೆಯಲ್ಲಿ ನಡೆಯಲಿದೆ. ಈ ಬಗ್ಗೆ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಬುಧವಾರ ಅಧಿಕೃತವಾಗಿ ಮಾಹಿತಿ ನೀಡಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಅನುಭವಿ ಆಟಗಾರ ಶಿಖರ್ ಧವನ್ ಅಥವಾ ಗಾಯದಿಂದ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಮುನ್ನಡೆಸುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications