ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿಯ ನಿರ್ಧಾರಕ್ಕೆ ಅಸಮ್ಮತಿ ಸೂಚಿಸಿದ ಮಾಜಿ ಕ್ರಿಕೆಟರ್ ಆಕಾಶ್ ಚೋಪ್ರ

Virat Kohli batting at No. 4 despite good form not ideal, says Aakash Chopra

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಭಾರತ ಸೋಲನ್ನು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯ ಮೊದಲ 3 ಪಂದ್ಯಗಳಲ್ಲಿ 2ರಲ್ಲಿ ಆತಿಥೆಯ ಭಾರತ ಸೋಲಿನ ರುಚಿ ಕಂಡಿದೆ. ಇನ್ನು ಮೂರನೇ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆ ಮಾಡಿಕೊಂಡಿದ್ದರು. ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಮೂರನೇ ಕ್ರಮಾಂಕದಲ್ಲಿ ಯುವ ಆಟಗಾರ ಇಶಾನ್ ಕಿಶನ್‌ಗೆ ಅವಕಾಶವನ್ನು ಮಾಡಿಕೊಟ್ಟಿದ್ದರು.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಈ ನಿರ್ಧಾರಕ್ಕೆ ಮಾಜಿ ಕ್ರಿಕೆಟಿಗ ಕಾಮೆಂಟೇಟರ್ ಅಸಮ್ಮತಿಯನ್ನು ಸೂಚಿಸಿದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಇಂತಾ ಸಂದರ್ಭದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಇಳಿಸಿಕೊಂಡಿರುವುದು ಸರಿಯಲ್ಲ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಭ್ ಪಂತ್ ಔಟ್‌ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋರಿಷಭ್ ಪಂತ್ ಔಟ್‌ಗೆ ಕಾರಣನಾದ ವಿರಾಟ್ ಕೊಹ್ಲಿ: ವೈರಲ್ ವಿಡಿಯೋ

ಟೀಮ್ ಇಂಡಿಯಾ ಆಡಿವ ಬಳಗದಿಂದ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಮೂರನೇ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿಯನ್ನು ಆರಂಭಿಕರಾಗಿ ಕಣಕ್ಕಿಳಿಸಿ ಚೊಚ್ಚಲ ಪಂದ್ಯದಲ್ಲಿ ಆರಂಭಿಕನಾಗಿ ಮಿಂಚಿದ್ದ ಇಶಾನ್ ಕಿಶನ್‌ಗೆ ತನ್ನ ಮೂರನೇ ಕ್ರಮಾಂಕವನ್ನು ಬಿಟ್ಟುಕೊಟ್ಟಿದ್ದರು ವಿರಾಟ್ ಕೊಹ್ಲಿ. ಹೀಗಾಗಿ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು.

ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ವಿಫಲರಾಗಿ ತಂಡಕ್ಕೆ ವಿರಾಟ್ ಕೊಹ್ಲಿಯೇ ಆಸರೆಯಾಗಿದ್ದರು. 46 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 77 ರನ್‌ಗಳನ್ನು ಬಾರಿಸಿದ್ದರು. ಕೊಹ್ಲಿ ಈ ಪ್ರದರ್ಶನದಿಂದಾಗಿ ಭಾರತ 156 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಲು ಶಕ್ತವಾಗಿತ್ತು.

Story first published: Wednesday, March 17, 2021, 10:50 [IST]
Other articles published on Mar 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X