ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಪಿಲ್ ದೇವ್ ಬಳಿಕ ಇಂಗ್ಲೆಂಡ್ ನೆಲದಲ್ಲಿ ಐತಿಹಾಸಿಕ ಸಾಧನೆ ಮಾಡಿದ ನಾಯಕ ಕೊಹ್ಲಿ

Virat Kohli became the second Indian skipper to win 2 Tests in a series in England

ಲಂಡನ್, ಸೆಪ್ಟೆಂಬರ್ 6: ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ನೀಡುತ್ತಿರುವ ಅಮೋಘ ಪ್ರದರ್ಶನ ಮುಂದುವರಿದಿದೆ. ಓವಲ್ ಅಂಗಳದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭಾರತ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ನೆಲದಲ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಮೂಲಕ ಮಾಜಿ ನಾಯಕ ಕಪಿಲ್ ದೇವ್ ಜೊತೆಗೆ ವಿಶೇಷ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಓವಲ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡದ ಗೆಲುವಿಗೆ 368 ರನ್‌ಗಳ ಬೃಹತ್ ಗುರಿಯನ್ನು ಮುಂದಿಟ್ಟಿತ್ತು. ಇದಕ್ಕೆ ಪ್ರತಿಯಾಗಿ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಮೊದಲಿಗೆ 100 ರನ್‌ಗಳನ್ನು ಯಾವುದೇ ವಿಕೆಟ್ ಕಳೆದುಕೊಳ್ಳದೆ ರನ್‌ಗಳಿಸಿತ್ತು. ಈ ಮೂಲಕ ಇಂಗ್ಲೆಂಡ್ ಈ ಪಂದ್ಯದಲ್ಲಿ ಕಠಿಣ ಪೈಪೋಟಿಯನ್ನು ನೀಡುವ ಮನಸ್ಥಿತಿಯಲ್ಲಿತ್ತು. ಆದರೆ ನಂತರ ಟೀಮ್ ಇಂಡಿಯಾದ ಬೌಲರ್‌ಗಳ ಪ್ರದರ್ಶನದ ಮುಂದೆ ಇಂಗ್ಲೆಂಡ್ ದಾಂಡಿಗರು ಮಂಕಾದರು. ತಂಡದ ಮೊತ್ತ 210 ರನ್ ಆಗುವಷ್ಟರಲ್ಲಿ ತಂಡ ಆಲೌಟ್ ಆಗುವ ಮೂಲಕ ಭಾರೀ ಸೋಲು ಅನುಭವಿಸಿದೆ.

ಗೆಲುವು ನಮ್ ಕಡೆ ಇದೆ ಅಂತ ಗೊತ್ತಾಗಿದ್ದು ಈ ಆಟಗಾರ ಬಂದ್ಮೇಲೆ ಎಂದ ವಿರಾಟ್ | Oneindia Kannada

ಇಂಗ್ಲೆಂಡ್ ವಿರುದ್ಧ ಭಾರತ ಈ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯೊಂದರಲ್ಲಿ ಎರಡು ಜಯ ದಾಖಲಿಸಿದ ಎರಡನೇ ನಾಯಕ ಸಾಧನೆ ಮಾಡಿದ್ದಾರೆ ಕೊಹ್ಲಿ. ಇದಕ್ಕೂ ಮುನ್ನ ಕಪಿಲ್‌ದೇವ್ ಮಾತ್ರವೇ ಈ ಸಾಧನೆಯನ್ನು ಮಾಡಿದ್ದರು. 1986ರಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ಇಂಗ್ಲೆಂಡ್ ನೆಲದಲ್ಲಿ 2-0 ಅಂತರದಿಂದ ಗೆಲ್ಲುವ ಮೂಲಕ ಕಪಿಲ್ ಮೊದಲ ಬಾರಿಗೆ ಈ ವಿಶೇಷ ಸಾಧನೆ ಮಾಡಿ ಬೀಗಿದ್ದರು.

1986ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ಗೆದ್ದ ಈ ಸರಣಿ ಟೆಸ್ಟ್ ಇತಿಹಾಸದಲ್ಲಿ ಇಂಗ್ಲೆಂಡ್ ನೆಲದಲ್ಲಿ ಗೆದ್ದ ಎರಡನೇ ಟೆಸ್ಟ್ ಸರಣಿ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1971ರಲ್ಲಿ ಭಾರತ ಮೊದಲ ಬಾರಿಗೆ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು. ಈ ಸರಣಿಯಲ್ಲಿಯೇ ಓವಲ್ ಮೈದಾನದಲ್ಲಿ ಭಾರತ ಮೊದಲ ಬಾರಿಗೆ ಪಂದ್ಯವನ್ನು ಗೆದ್ದ ಸಾಧನೆ ಮಾಡಿತ್ತು. ಈ ಗೆಲುವಿಗೆ ಸರಿಯಾಗಿ 50 ವರ್ಷ 13 ದಿನಗಳ ನಂತರ ಮತ್ತೆ ಓವಲ್ ಅಂಗಳದಲ್ಲಿ ಗೆಲುವುಸಾಧಿಸುವ ಮೂಲಕ ಇತಿಹಾಸ ನಿರ್ಮಿಸಿದೆ.

ಇನ್ನು ಮತ್ತೊಂದು ಗಮನಾರ್ಹ ಸಂಗತಿಯೆಂದರೆ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಲಂಡನ್‌ನಲ್ಲಿರುಯವ ಎರಡು ಐತಿಹಾಸಿಕ ಕ್ರೀಡಾಂಗಣಗಳಾದ ಓವಲ್ ಹಾಗೂ ಲಾರ್ಡ್ಸ್ ಮೈದಾನದಲ್ಲಿ ಒಂದೇ ಸರಣಿಯಲ್ಲಿ ಭಾರತ ಗೆಲುವು ಸಾಧಿಸಿದ ಸಾಧನೆ ಮಾಡಿದೆ. ಭಾರತಕ್ಕೂ ಮುನ್ನ ಈ ಸಾಧನೆಯನ್ನು ಐದು ತಂಡಗಳು ಮಾತ್ರವೇ ಮಾಡಿತ್ತು. ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಇಂಗ್ಲೆಂಡ್, ಪಾಕಿಸ್ತಾಮ, ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಈ ಮೊದಲೇ ಈ ಸಾಧನೆ ಮಾಡಿದ ಉಳಿದ ರಾಷ್ಟ್ರಗಳಾಗಿದೆ.

ಇನ್ನು ಈ ಗೆಲುವಿನ ಮೂಲಕ ಭಾರತ 350ಕ್ಕೂ ಅಧಿಕ ಗುರಿಯನ್ನು ನೀಡಿ ಎಲ್ಲಾ ಪಂದ್ಯವನ್ನು ಗೆದ್ದ ಸಾಧನೆ ಮಾಡಿದೆ. 350ಕ್ಕೂ ಅಧಿಕ ಗುರಿ ನೀಡಿದ ಪಂದ್ಯಗಳಲ್ಲಿ ಭಾರತದ ಗೆಲುವಿನ ಅಂತರ 35-0ಗೆ ಏರಿಕೆಯಾಗಿದೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ XI: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಆಲ್ಲಿ ಪೋಪ್, ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಒಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್.

Story first published: Monday, September 6, 2021, 23:58 [IST]
Other articles published on Sep 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X