ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಎಲ್ಲಾ ಮಾದರಿಯಲ್ಲಿ 50 ಗೆಲುವು: ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli become first cricketer in history to win 50 international matches across formats

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಇತ್ತೀಚಿನ ದಿನಗಳಲ್ಲಿ ಮಂಕಾದಂತೆ ಕಂಡುಬರುತ್ತಿದೆ. ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕ ಸಿಡಿಯದೆ ಅದಾಗಲೇ ಎರಡು ವರ್ಷಗಳಾಗಿದೆ. ಹಾಗಿದ್ದರೂ ವಿರಾಟ್ ಕೊಹ್ಲಿ ಒಂದರ ನಂತರ ಮತ್ತೊಂದು ದಾಖಲೆಯನ್ನು ಮಾಡುತ್ತಲೇ ಇದ್ದಾರೆ. ಇದೀಗ ವಿಶ್ವ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿ 50 ಗೆಲುವು ಸಾಧಿಸಿದ ಪ್ರಥಮ ಆಟಗಾರ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಮುಂಬೈನಲ್ಲಿ ಸೋಮವಾರ ಅಂತ್ಯವಾದ ಟೆಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನ್ಲಲಿ 50ನೇ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೂರು ಮಾದರಿಯಲ್ಲಿಯೂ ಮೈಲಿಗಲ್ಲನ್ನು ದಾಟಿದ್ದಾರೆ ವಿರಾಟ್ ಕೊಹ್ಲಿ. ಕಿವಿಸ್ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ಭಾರತ vs ನ್ಯೂಜಿಲೆಂಡ್: ಕಿವೀಸ್ ವಿರುದ್ಧ 372 ರನ್‌ಗಳ ಭಾರೀ ಅಂತರದಿಂದ ಗೆದ್ದು ಸರಣಿ ವಶಕ್ಕೆ ಪಡೆದ ಟೀಮ್ ಇಂಡಿಯಾಭಾರತ vs ನ್ಯೂಜಿಲೆಂಡ್: ಕಿವೀಸ್ ವಿರುದ್ಧ 372 ರನ್‌ಗಳ ಭಾರೀ ಅಂತರದಿಂದ ಗೆದ್ದು ಸರಣಿ ವಶಕ್ಕೆ ಪಡೆದ ಟೀಮ್ ಇಂಡಿಯಾ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 50ನೇ ಗೆಲುವು ಸಾಧಿಸುವುದಕ್ಕೂ ಮುನ್ನ ಏಕದಿನ ಕ್ರಿಕೆಟ್‌ನಲ್ಲಿ 153 ಗೆಲುವು ಸಾಧಿಸಿದ್ದರೆ ಟಿ20 ಕ್ರಿಕೆಟ್‌ನಲ್ಲಿ 59 ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟಿಗ ಎನಿಸಿದ್ದಾರೆ.

ಇನ್ನು ವಿರಾಟ್ ಕೊಹ್ಲಿಯ ಈ ಸಾಧನೆಗೆ ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದೆ. "ಅಣ=ಭಿನಂದನೆಗಳು ವಿರಾಟ್ ಕೊಹ್ಲಿ. ಎಲ್ಲಾ ಮಾದರಿಯಲ್ಲಿಯೂ 50 ಗೆಲುವು ಸಾಧಿಸಿದ ಪ್ರಥಮ ಕ್ರಿಕೆಟಿಗ" ಎಂದು ಬಿಸಿಸಿಐ ಟ್ವೀಟ್‌ನಲ್ಲಿ ಬರೆದುಕೊಂಡಿದೆ.

ಈ ಶತಕ ಯಾವಾಗಲೂ ನೆನಪಿನಲ್ಲಿರುತ್ತದೆ: ಮುಂಬೈ ಟೆಸ್ಟ್ ಶತಕದ ಬಗ್ಗೆ ಮಯಾಂಕ್ ಅಗರ್ವಾಲ್ ಮಾತುಈ ಶತಕ ಯಾವಾಗಲೂ ನೆನಪಿನಲ್ಲಿರುತ್ತದೆ: ಮುಂಬೈ ಟೆಸ್ಟ್ ಶತಕದ ಬಗ್ಗೆ ಮಯಾಂಕ್ ಅಗರ್ವಾಲ್ ಮಾತು

ಸತತ ಕ್ರಿಕೆಟ್‌ನಿಂದ ಬಳಲಿದ್ದ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದರು. ಮುಂಬೈ ಟೆಸ್ಟ್‌ಗೆ ತಮಡಕ್ಕೆ ಮರಳಿದ ಕೊಹ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಈ ಪಂದ್ಯದಲ್ಲಿ ಭಾರತ ರನ್‌ಗಳ ಆಧಾರದಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದೆ. ಅಲ್ಲದೆ ಭಾರತೀಯ ಕ್ರಿಕೆಟ್ ತಂಡ ತವರು ಅಂಗಳದಲ್ಲಿ ಸರಣಿ ಗೆಲುವಿನ ಸಾಧನೆಯನ್ನು 14ಕ್ಕೆ ವಿಸ್ತರಿಸಿದೆ.

ಮುಂಬೈ ಟೆಸ್ಟ್ ನಂತರ ದ. ಆಪ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಅನುಭವಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತಮುಂಬೈ ಟೆಸ್ಟ್ ನಂತರ ದ. ಆಪ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಅನುಭವಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತ

ಇನ್ನು ಟೆಸ್ಟ್ ಶ್ರೇಯಾಂಕದಲ್ಲಿ ಸುದೀರ್ಘ ಕಾಲದಿಂದ ನಂಬರ್ 1 ಸ್ಥಾನದಲ್ಲಿದ್ದ ಭಾರತ ಇತ್ತೀಚೆಗೆ ಆ ಸ್ಥಾನವನ್ನು ನ್ಯೂಜಿಲೆಂಡ್ ತಂಡಕ್ಕೆ ಬಿಟ್ಟುಕೊಟ್ಟಿತ್ತು. ಇದೀಗ ಕಿವೀಸ್ ವಿರುದ್ಧದ ಸರಣಿಯಲ್ಲಿ ಗಲ್ಲುವ ಮೂಲಕ ಟೀಮ್ ಇಂಡಿಯಾ ಮತ್ತೊಮ್ಮೆ ನಂಬರ್ 1 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಕಿವೀಸ್ ಪಡೆ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

Story first published: Monday, December 6, 2021, 16:44 [IST]
Other articles published on Dec 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X